ಹೈದರಾಬಾದ್: ತೆಲಂಗಾಣದ ಸಿಕಂದರಾಬಾದ್‌ನಲ್ಲಿ ಸೋಮವಾರ ಮುಂಜಾನೆ ದುಷ್ಕರ್ಮಿಗಳು ಹಿಂದೂ ದೇಗುಲವನ್ನು ಧ್ವಂಸ(Hindu temple Vandalized)ಗೊಳಿಸಿದ್ದು, ಭಾರೀ ಉದ್ವಿಗ್ನತೆ ಉಂಟಾಗಿದೆ. ಈ ಕೃತ್ಯವನ್ನು ಖಂಡಿಸಿ ಸ್ಥಳೀಯರಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆಗಳೂ ನಡೆಯಿತು. ಇನ್ನು ಘಟನಾ ಸ್ಥಳದಲ್ಲಿ ಹಿಂದೂ ಫೈರ್ ಬ್ರ್ಯಾಂಡ್ ಮಾಧವಿ ಲತಾ(Madhavi Latha) ಕೂಡ ಧಾವಿಸಿದ್ದು, ಕೆಲ ಹೊತ್ತು ಭಾರೀ ಘರ್ಷಣೆ ಏರ್ಪಟ್ಟಿತ್ತು. ತಕ್ಷಣ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಕಂದರಾಬಾದ್‌ನ ಮುತ್ಯಾಲಮ್ಮ ದೇವಸ್ಥಾನದಲ್ಲಿನ ವಿಗ್ರಹವನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದ್ದು, ಸ್ಥಳೀಯರು ಒಬ್ಬ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯ ನಂತರ, ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ಶಾಂತಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
#WATCH | Hyderabad, Telangana: Police detain Madhavi Latha and other BJP leaders and workers as they were protesting over the alleged vandalisation of Muthyalamma temple idol in Kurmaguda.
— ANI (@ANI) October 14, 2024
Madhavi Latha says "They are taking me to the jail for protesting over the vandalisation… https://t.co/U7TcUnoO5O pic.twitter.com/9Wx2GJrgbx
ಇದಕ್ಕೆ ಕಾರಣರಾದವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ದೇವಸ್ಥಾನದ ಬಳಿ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಮುಖಂಡರೂ ಕೈಜೋಡಿಸಿದ್ದಾರೆ. ಮಾಧವಿ ಲತಾ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ. ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಇದೊಂದು ನಾಚಿಕೆಗೇಡಿನ ಘಟನೆ ಎಂದಿರುವ ಅವರು, ಕೆಲವರು ಉದ್ದೇಶಪೂರ್ವಕವಾಗಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇದು ನಾಚಿಕೆಗೇಡಿನ ಸಂಗತಿ, ಕೆಲವರು ಆತನನ್ನು ನೋಡಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ, ಕಳ್ಳತನಕ್ಕಾಗಿ ಇಲ್ಲಿಗೆ ಬಂದಿಲ್ಲ, ಹಿಂದೂ ಸಮಾಜವನ್ನು ಅಪಮಾನ ಮಾಡಲು ಬಂದಿದ್ದಾರೆ. ಹೈದರಾಬಾದ್‌ನ ವಿವಿಧೆಡೆ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿವೆ, ಕೆಲವರು ಹೈದರಾಬಾದ್‌ನಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಲು ಮತ್ತು ಹೈದರಾಬಾದ್‌ನಲ್ಲಿ ಕೋಮು ಗಲಭೆಗಳನ್ನು ಹೆಚ್ಚಿಸಲು ಉದ್ದೇಶಪೂರ್ವಕವಾಗಿ ಇದನ್ನು ಮಾಡುತ್ತಿದೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೆಲಂಗಾಣ ಬಿಜೆಪಿ ವಕ್ತಾರ ತುಳ್ಳ ವೀರೇಂದ್ರ ಗೌಡ, “ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳು ಮತ್ತು ಅವರ ದೇವಾಲಯಗಳು ಸುರಕ್ಷಿತವಾಗಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ. ತೆಲಂಗಾಣದಲ್ಲಿ ಹಿಂದೂ ದೇವಾಲಯಗಳ ಮೇಲಿನ ಮತ್ತೊಂದು ದಾಳಿ ಇದಾಗಿದೆ. ರೇವಂತ್ ರೆಡ್ಡಿ ಸರ್ಕಾರವು ಶೀಘ್ರವೇ ಕ್ರಮವಹಿಸಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಕರೆ ನೀಡಿದರು.
ಅಕ್ಟೋಬರ್ 12 ರಂದು ಹೈದರಾಬಾದ್‌ನಲ್ಲಿ ಇದೇ ರೀತಿಯ ಘಟನೆ ವರದಿಯಾಗಿದೆ. ಹೈದರಾಬಾದ್‌ನ ಬೇಗಂ ಬಜಾರ್‌ನ ನಾಂಪಲ್ಲಿ ವಸ್ತುಪ್ರದರ್ಶನ ಮೈದಾನದ ಪೂಜಾ ಮಂಟಪದಲ್ಲಿ ದುರ್ಗಾ ಮಾತೆಯ ವಿಗ್ರಹಕ್ಕೆ ಹಾನಿ ಮಾಡಿದ ಆರೋಪದ ಮೇಲೆ ಒಬ್ಬನನ್ನು ಬಂಧಿಸಲಾಗಿತ್ತು.
ಈ ಸುದ್ದಿಯನ್ನೂ ಓದಿ: Bihar Shootout: ದುರ್ಗಾ ಪೆಂಡಾಲ್‌ಗೆ ನುಗ್ಗಿದ ದುಷ್ಕರ್ಮಿಗಳಿಂದ ಫೈರಿಂಗ್; ನಾಲ್ವರಿಗೆ ಗಂಭೀರ ಗಾಯ