Saturday, 23rd November 2024

Karnataka Rain: ನಾಳೆ ಕೋಲಾರ, ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ

Karnataka Rain

ಬೆಂಗಳೂರು: ಅ.15ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ (Karnataka Rain) ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಅ.16ರಂದು ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.19ರವರೆಗೆ ಮುಂದುವರಿಯಲಿದೆ.

ಮೀನುಗಾರರಿಗೆ ಮುನ್ನೆಚ್ಚರಿಕೆ:
ಕರ್ನಾಟಕ ಕರಾವಳಿಯಲ್ಲಿ 35 ಕಿ.ಮೀ.ನಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣವಿದೆ. ಇನ್ನು ಮುಂದಿನ 2 ದಿನಗಳ ಕಾಲ ರಾಜ್ಯದ ಮೇಲೆ ಯಾವುದೇ ಮಹತ್ವದ ಬದಲಾವಣೆಯನ್ನು ನಿರೀಕ್ಷಿಸಲಾಗಿಲ್ಲ.

ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 20° C ಮತ್ತು 20° C ಆಗಿರಬಹುದು.

ಈ ಸುದ್ದಿಯನ್ನೂ ಓದಿ | Health Tips: ಬೆಳಗ್ಗೆ ಎದ್ದಾಗ ಕಾಡುವ ತಲೆ ನೋವಿಗೆ ಕಾರಣ ಏನು ಗೊತ್ತೇ?

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 20° C ಮತ್ತು 20° C ಆಗಿರಬಹುದು.