Wednesday, 30th October 2024

ಮತ್ತೆ ಮೂರು ದಿನ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಮತ್ತೆ ಮುಂದಿನ ಮೂರು ದಿನ ಮುಂದುವರಿಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿ ನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ವರುಣರಾಯ ಆರ್ಭಟಿಸಲಿದ್ದಾನೆ. ಬೆಂಗಳೂರು, ಬೆಂ.ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ನ.18ರಿಂದ ನ.19ರವರೆಗೆ ಹಾಗೂ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ನ.18ರಿಂದ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದಿದೆ.