ಬೆಂಗಳೂರು: ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ನಗರ ವತಿಯಿಂದ ಪೊಕ್ಸೋ ಕಾಯ್ದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು (Job News) ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಮಕ್ಕಳೊಂದಿಗೆ ಕೆಲಸ ಮಾಡುವಲ್ಲಿ ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಸಮಾಜ ಕಾರ್ಯ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆಯು ಕೂಡ ಅರ್ಜಿ ಸಲ್ಲಿಸಬಹುದು.
ಈ ಸುದ್ದಿಯನ್ನೂ ಓದಿ | Hostel Admission: ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳ ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುತ್ತದೆ. ಅರ್ಜಿ ನಮೂನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಛೇರಿಯಿಂದ ಪಡೆದು ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಛೇರಿ, ಬೆಂಗಳೂರು ನಗರ ಕೇಂದ್ರ, ಮಕ್ಕಳ ಪಾಲನಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಎಚ್. ಮರಿಗೌಡ ರಸ್ತೆ, ಕಿದ್ವಾಯಿ ಆಸ್ಪತ್ರೆ ಪಕ್ಕ, ಬೆಂಗಳೂರು-29 ಇಲ್ಲಿ ಅಕ್ಟೋಬರ್ 23ರೊಳಗೆ ಸಲ್ಲಿಸಬಹುದು.
ಈ ಸುದ್ದಿಯನ್ನೂ ಓದಿ | Reliance Jio: ಜಿಯೋಭಾರತ್ ವಿ3, ವಿ4 ಮೊಬೈಲ್ ಫೋನ್ ರಿಲೀಸ್; ಏನಿದರ ವಿಶೇಷ? ಬೆಲೆ ಎಷ್ಟು?
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಇ-ಮೇಲ್ dcpoblor@gmail.com ಮತ್ತು ದೂರವಾಣಿ ಸಂಖ್ಯೆ: 080-29523458 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಕೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.