Saturday, 23rd November 2024

ಮಧ್ಯಪ್ರದೇಶ ಸರ್ಕಾರದಿಂದ ‘ಗೋವು ಸಚಿವಾಲಯ’ ರಚನೆ

ಭೋಪಾಲ್: ರಾಜ್ಯದಲ್ಲಿ ಗೋವುಗಳ ಸಂರಕ್ಷಣೆಗಾಗಿ ‘ಗೋವು ಸಚಿವಾಲಯ’ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಬುಧವಾರ ಪ್ರಕಟಿಸಿದ್ದಾರೆ.

ಪಶು ಸಂಗೋಪನೆ, ಅರಣ್ಯ, ಪಂಚಾಯಿತಿ, ಗ್ರಾಮೀಣ ಅಭಿವೃದ್ಧಿ, ಗೃಹ ಮತ್ತು ರೈತ ಕಲ್ಯಾಣ ಇಲಾಖೆಗಳು ಈ ಗೋವು ಸಚಿವಾ ಲಯದ ಭಾಗವಾಗಿರಲಿವೆ ಎಂದು ಚೌಹಾಣ್ ತಿಳಿಸಿದ್ದಾರೆ.

‘ರಾಜ್ಯದಲ್ಲಿ ಗೋವುಗಳ ಸಂರಕ್ಷಣೆ ಮತ್ತು ಉತ್ತೇಜನಕ್ಕಾಗಿ ನಾವು ಗೋವು ಸಚಿವಾಲಯ ಸ್ಥಾಪನೆಗೆ ನಿರ್ಧರಿಸಿದ್ದೇವೆ. ಪಶು ಸಂಗೋಪನೆ, ಅರಣ್ಯ, ಪಂಚಾಯಿತಿ ಮತ್ತು ಗ್ರಾಮೀಣ ಅಭಿವೃದ್ಧಿ, ಕಂದಾಯ, ಗೃಹ ಮತ್ತು ರೈತ ಕಲ್ಯಾಣ ಇಲಾಖೆಗಳು ಈ ಗೋವು ಸಚಿವಾಲಯದ ಭಾಗವಾಗಿರಲಿವೆ’ ಎಂದು ಚೌಹಾಣ್ ವಿವರಿಸಿದ್ದಾರೆ.

ಸಚಿವಾಲಯದ ಮೊದಲ ಸಭೆ ನ.22ರಂದು ಅಗರ್ ಮಾಲ್ವಾದ ಗೋ ಸಂರಕ್ಷಣಾಲಯದ ಗೋಪಾಷ್ಟಮಿಯಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ’ ಎಂದು ತಿಳಿಸಿದ್ದಾರೆ.