Friday, 22nd November 2024

Self Harming: ಪ್ರೇಮ ವೈಫಲ್ಯ; ಪಿಜಿ ಕಟ್ಟಡದಿಂದ ಹಾರಿ ಯುವಕ ಆತ್ಮಹತ್ಯೆ

Self Harming

ಬೆಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ಯುವಕನೊಬ್ಬ ಪಿಜಿ ಕಟ್ಟಡದಿಂದ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ ವಿಷ್ಣು (28) ಮೃತ ಯುವಕ.

ಪಿಜಿಯ ನಾಲ್ಕನೇ ಮಹಡಿಯಿಂದ ಜಿಗಿದು ವಿಷ್ಣು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಕೋನಪ್ಪನ ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕಿದ್ದು ಅಪ್ರಾಪ್ತ ವಯಸ್ಸಿನ ಬಾಲಕ!

Hoax Bomb Threats

ಬೆಂಗಳೂರು: ತನ್ನ ಸ್ನೇಹಿತನ ಮೇಲಿನ ಸಿಟ್ಟಿಗೆ ಆತನ ಹೆಸರಿನಲ್ಲಿ ನಕಲಿ ಸೋಶಿಯಲ್ ಮೀಡಿಯಾ ಅಕೌಂಟ್‌ ಆರಂಭಿಸಿದ ನಾಲ್ಕು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆಗಳನ್ನು (Hoax Bomb Threats) ಕಳುಹಿಸಿದ ಅಪ್ರಾಪ್ತ ವಯಸ್ಕನನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್ 14ರಂದು ನಾಲ್ಕು ವಿಮಾನಗಳಲ್ಲಿ ಎರಡು ವಿಳಂಬವಾದವು ಮತ್ತು ಒಂದು ರದ್ದುಗೊಂಡಿತ್ತು. ಅವುಗಳಿಗೆಲ್ಲ ಈ ಬಾಲಕನೇ ಕಾರಣ.

ಅಪ್ರಾಪ್ತ ವಯಸ್ಸಿನ ಬಾಲಕ ತನ್ನ ಸ್ನೇಹಿತನೊಂದಿಗೆ ಹಣದ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದ. ಸೇಡು ತೀರಿಸಿಕೊಳ್ಳುವ ಪ್ರಯತ್ನದಲ್ಲಿ, ಆತ ಬೆದರಿಕೆಗಳನ್ನು ಕಳುಹಿಸಲು ತನ್ನ ಸ್ನೇಹಿತನ ಹೆಸರಿನಲ್ಲಿ ಎಕ್ಸ್‌ನಲ್ಲಿಅಕೌಂಟ್ ಓಪನ್ ಮಾಡಿದ್ದ ಎಂದು ಹೇಳಲಾಗಿದೆ.

ಕಳೆದ ಎರಡು ದಿನಗಳಲ್ಲಿ, ಕೆಲವು ವಿದೇಶಗಳಿಗೆ ಹೋಗುವುದು ಸೇರಿದಂತೆ ಸುಮಾರು ಒಂದು ಡಜನ್ ಭಾರತೀಯ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ. ವಿಮಾನಗಳಲ್ಲಿ ಅನುಮಾನಾಸ್ಪದವಾಗಿ ಯಾವುದೂ ಕಂಡುಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

180ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಬೆಂಗಳೂರಿಗೆ ತೆರಳುತ್ತಿದ್ದ ಅಕಾಸಾ ಏರ್ ವಿಮಾನವು ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿಗೆ ಮರಳಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಮೂರು ದಿನಗಳಲ್ಲಿ ಏರ್ ಇಂಡಿಯಾ, ಇಂಡಿಗೊ, ಅಕಾಸಾ ಏರ್ ಮತ್ತು ಸ್ಪೈಸ್ ಜೆಟ್ ಸೇರಿದಂತೆ 12 ಭಾರತೀಯ ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆಗಳು ಬಂದಿರುವುದರಿಂದ ಭಾರತೀಯ ವಾಯುಯಾನ ಇತಿಹಾಸದಲ್ಲಿ ಅನಿರೀಕ್ಷಿತ ಮತ್ತು ಗಂಭೀರ ಪರಿಸ್ಥಿತಿ ಉದ್ಭವಿಸಿತ್ತು. ತುರ್ತು ಪರಿಸ್ಥಿತಿಗಳು ಮತ್ತು ವಿಮಾನ ಮಾರ್ಗ ಬದಲಾವಣೆಗೆ ಕಾರಣವಾಗುವ ಬೆದರಿಕೆಗಳು ಪ್ರಯಾಣಿಕರನ್ನು ಭಯಭೀತರನ್ನಾಗಿಸಿದ್ದವು. ಭದ್ರತಾ ಕ್ರಮಗಳು ಮತ್ತು ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದ್ದವು.

ಇದನ್ನೂ ಓದಿ: Akasa Air : ಮುಂದುವರಿದ ವಿಮಾನಗಳಿಗೆ ಬಾಂಬ್‌ ಬೆದರಿಕೆ; ಡೆಲ್ಲಿ- ಬೆಂಗಳೂರು ಆಕಾಸ ಏರ್‌ ತುರ್ತು ಭೂಸ್ಪರ್ಶ

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅಧಿಕಾರಿಗಳೊಂದಿಗೆ ಸಭೆ ಕರೆಯುವ ಮೊದಲು ಈ ವಿಷಯದ ಬಗ್ಗೆ ಸಂಸದೀಯ ಸ್ಥಾಯಿ ಸಮಿತಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಸಭೆ ಸೇರಿ ಚರ್ಚಿಸಿತ್ತು. ಕೆಲವು ಅಪರಾಧಿಗಳನ್ನು ಗುರುತಿಸಲಾಗಿದೆ ಮತ್ತು ಡಾರ್ಕ್ ವೆಬ್ ಅನ್ನು ಸಹ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದ್ದರು.

ಬುಧವಾರ ಮಧ್ಯಾಹ್ನ, 184 ಪ್ರಯಾಣಿಕರನ್ನು ಹೊತ್ತ ದೆಹಲಿ-ಬೆಂಗಳೂರು ಅಕಾಸಾ ಏರ್ ವಿಮಾನವು ಬಾಂಬ್ ಬೆದರಿಕೆಯ ನಂತರ ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿತ್ತು. ದೆಹಲಿಯಿಂದ ಹೊರಟ ಕೆಲವೇ ನಿಮಿಷಗಳಲ್ಲಿ ವಿಮಾನವನ್ನು ತುರ್ತಾಗಿ ಹಿಂದಕ್ಕೆ ತಿರುಗಿಸಲಾಗಿತ್ತು.