Friday, 29th November 2024

Tumkur News: ಧರ್ಮಸ್ಥಳ ಯೋಜನೆಯಿಂದ ಆರ್ಥಿಕ ಸದೃಢತೆ: ನಿರ್ದೇಶಕ ಸತೀಶ್

ತುಮಕೂರು: ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಆರ್ಥಿಕ ಸದೃಢತೆಗೆ ಸಹಕಾರಿಯಾಗಿದೆ ಎಂದು ಯೋಜನೆಯ ನಿರ್ದೇಶಕ ಸತೀಶ್ ತಿಳಿಸಿದರು.

ನಗರದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಪೂಜೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಧರ್ಮಸ್ಥಳ ಯೋಜನೆಯಿಂದ ಜಿಲ್ಲೆಯಲ್ಲಿ ಸಹಸ್ರರು ಫಲಾನುಭವಿಗಳು ಆರ್ಥಿಕವಾಗಿ ಸದೃಢಗೊಂಡು ಸ್ವತಂತ್ರ ಜೀವನ ನಡೆಸುವ ಶಕ್ತಿ ಹೊಂದಿದ್ದಾರೆ ಎಂದರು.

ಮಧ್ಯವರ್ಜನ ಶಿಬಿರ, ದೇವಸ್ಥಾನಗಳ ಜೀರ್ಣೋದ್ಧಾರ, ಆರೋಗ್ಯ ವಿಮೆ, ಸಂಧ್ಯಾ ಸುರಕ್ಷಾ ವಿಮೆ, ಅಶಕ್ತ ಕುಟುಂಬಗಳಿಗೆ ಮನೆ ನಿರ್ಮಾಣ, ವಿಶೇಷ ಚೇತನರಿಗೆ ತ್ರಿಚಕ್ರ ವಿತರಣೆ, ಸೇವಾ ಕೇಂದ್ರಗಳ ಆರಂಭ, ಕೆರೆಗಳ ಪುನರುಜ್ಜೀವನ, ಬೆಳೆ ನಷ್ಟ ಸಮೀಕ್ಷಾ ಕಾರ್ಯ, ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ನೋಂದಣಿ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಗಳನ್ನು ಕೈಗೊಂಡು ಆಶಕ್ತರನ್ನು ಸಬಲರನ್ನಾಗಿ ಮಾಡುವಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಕಾರ್ಯನಿರ್ವಹಿಸುತ್ತಿದೆ ಎಂದರು.

ಯೋಜನಾಧಿಕಾರಿ ಸಂದೇಶ್ ಮಾತನಾಡಿ, ಗ್ರಾಮೀಣ ಅಭಿವೃದ್ಧಿ ಯೋಜನೆಯಿಂದಾಗಿ ಪ್ರತಿ ಹಳ್ಳಿಯಲ್ಲಿ ಆರ್ಥಿಕ ಚಟುವಟಿಕೆ ಅಧಿಕಗೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಮರನಾಥ ಶೆಟ್ಟಿ, ನಿರ್ದೇಶಕ ಕಾಮರಾಜು, ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Tumkur News: ಕೆರಗೋಡಿ ರಂಗಾಪುರದಲ್ಲಿ ಜಾನಪದ ಶೈಲಿಯಲ್ಲಿ ದಸರಾ ಆಚರಣೆ