Friday, 22nd November 2024

Primary School Exam : ಈ ಬಾರಿಯೂ 5,8,9ನೇ ತರಗತಿಗೆ ಬೋರ್ಡ್‌ ಪರೀಕ್ಷೆ ಇಲ್ಲ; ಮೌಲ್ಯಾಂಕ ನಡೆಸಲು ಆದೇಶ

Primary School Exam

ಬೆಂಗಳೂರು : ಕರ್ನಾಟಕದಲ್ಲಿ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ (Primary School Exam) ನಡೆಸುವ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಇನ್ನೂ ಇತ್ಯರ್ಥವಾಗಿಲ್ಲ. ಹೀಗಾಗಿ 2024 -25ನೇ ಸಾಲಿನಲ್ಲಿಯೂ ಬೋರ್ಡ್ ಪರೀಕ್ಷೆ ನಡಸದೇ ಮೌಲ್ಯಾಂಕನವನ್ನೇ ಅನುಸರಿಸಲು ಮುಂದಾಗಿದೆ.

2024-25ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ 1ರಿಂದ 10ನೇ ತರಗತಿಯಿರುವ ಶಾಲೆಗಳಿಗೆ 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ ಹಾಗೂ ಶೈಕ್ಷಣಿಕ ಮಾರ್ಗದರ್ಶಿಯನ್ನು ಹೊರಡಿಸಲಾಗಿದೆ. ಶಾಲೆಗಳಲ್ಲಿ ಪಠ್ಯವಸ್ತು ಬೋಧನೆ ಹಾಗೂ ಮೌಲ್ಯಾಂಕನ ಕುರಿತು ವಹಿಸಬೇಕಾದ ಕ್ರಮಗಳನ್ನು ವಿವರಿಸಲಾಗಿದೆ.

ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು 2024- 25 ನೇ ಶೈಕ್ಷಣಿಕ ಸಾಲಿನಿಂದ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಭಾಗ -1 ಮತ್ತು ಭಾಗ -2ರ ಆಧಾರದಲ್ಲಿ ಮೌಲ್ಯಂಕನ ಪೂರ್ಣಗೊಳಿಸಲು ಸುತ್ತೊಲೆಯನ್ನು ಕಳುಹಿಸಲಾಗಿದೆ.

ಬೋರ್ಡ್ ಪರೀಕ್ಷೆ ಕುರಿತು ಸುಪ್ರೀಂಕೋರ್ಟ್‌ನ ಮಧ್ಯಂತರ ಆದೇಶದಲ್ಲಿ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅನುಮತಿ ಇಲ್ಲವೆಂದು ಹೇಳಿದೆ. ಹೀಗಾಗಿ ಮೌಲ್ಯಂಕನವನ್ನೇ ಮುಂದುವರಿಸಲು ಶಾಲೆಗಳಿಗೆ ಸುತ್ತೋಲೆ ಕಳುಹಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ.

ಇದನ್ನೂ ಓದಿ: Indian Railways : ಪ್ರಯಾಣಿಕರೇ ಗಮನಿಸಿ; ರೈಲ್ವೆ ಟಿಕೆಟ್‌ ಬುಕಿಂಗ್ ನಿಯಮದಲ್ಲಿ ಬದಲಾವಣೆ!

2024-2025ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸೇತುಬಂಧ ಕಾರ್ಯಕ್ರಮ, ಸಂಕಲನಾತ್ಮಕ ಮೌಲ್ಯಾಂಕನ ನಿರ್ವಹಿಸಲು ಅನುವಾಗುವಂತೆ ಮಾಹಿತಿ ನೀಡಲಾಗಿರುತ್ತದೆ. ಅದರಂತೆ, ಶಾಲಾ ಹಂತದಲ್ಲಿ ನಿಗದಿತ ಕಾಲಾವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ತಿಳಿಸಲಾಗಿದೆ.