Wednesday, 30th October 2024

ಡಾ.ಟಿ.ಬಿ.‌ಸೊಲಬಕ್ಕನವರ ನಿಧನ

ಶಿಗ್ಗಾವಿ: ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರು ಹಾಗೂ ಗೊಟಗೋಡಿಯ ರಾಕ್ ಗಾರ್ಡನ್ ರೂವಾರಿ, ಹಿರಿಯ ರಂಗಕರ್ಮಿ ಡಾ.ಟಿ.ಬಿ. ಸೊಲಬಕ್ಕನವರ (73)ಗುರುವಾರ ಮಧ್ಯರಾತ್ರಿ 2.45ರ ಸುಮಾರಿಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಪತ್ನಿ ಸಾವಿತ್ರೆಮ್ಮ, ಪುತ್ರಿ ವೇದಾರಾಣಿ, ಪುತ್ರ ರಾಜಹರ್ಷ ಹಾಗೂ ಅಳಿಯ ಉದ್ಯಮಿ ಪ್ರಕಾಶ ದಾಸನೂರ ಅವರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ರಾಕ್ ಗಾರ್ಡನ್ ಪಕ್ಕ ನ್ಯೂ ವರ್ಕ್ ಶಾಪ್ (ದುಂಡಸಿ ದಾರಿ) ಹತ್ತಿರ ಜರುಗಿತು.