Sunday, 24th November 2024

Route close: ಇಂದಿನಿಂದ ಚಿಕ್ಕಬಳ್ಳಾಪುರ-ಗೌರಿಬಿದನೂರು ಮಾರ್ಗ ಬಂದ್

ಗೌರಿಬಿದನೂರು: ನಗರದ ಚಿಕ್ಕಬಳ್ಳಾಪುರ ಮಾರ್ಗದಲ್ಲಿರುವ ಉತ್ತರ ಪಿನಾಕಿನಿ ನದಿ ಸೇತುವೆ ಅಭಿವೃದ್ಧಿ ಕಾಮಗಾರಿ ಅ.೧೯ರ ಶನಿವಾರದಿಂದ ಆರಂಭವಾಗುತ್ತಿರುವುದರಿ0ದ  ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಮಾರ್ಗವನ್ನು ಬದಲಿಸಲಾಗಿದೆ.

ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದ ಕಡೆಯಿಂದ ನಗರಕ್ಕೆ ಬರುವ ಹಾಗೂ ನಗರದಿಂದ ಚಿಕ್ಕಬಳ್ಳಾಪುರಕ್ಕೆ ಹೋಗುವ ವಾಹನಗಳಿಗೆ ಬೈಪಾಸ್ ರಸ್ತೆಯ ಮೂಲಕ ರ‍್ಯಾಯ ಮಾರ್ಗ ಕಲ್ಪಿಸಲಾಗಿದೆ. ೬ ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಉತ್ತರ ಪಿನಾಕಿನಿ ಸೇತುವೆ ಕಾಮಗಾರಿಯನ್ನು ಸುಮಾರು ೮ ಕೋಟಿ ರೂ. ವೆಚ್ಚದಲ್ಲಿ ಮಾಡಲಾಗುತ್ತಿದೆ. ನೂತನ ಸೇತುವೆ ನಿರ್ಮಾಣ ಕಾರ್ಯ ಸಮರೋಪಾದಿಯಲ್ಲಿ ಪ್ರಾರಂಭವಾಗಲಿದೆ. ಆದ್ದರಿಂದ ಹಾಲಿ ಇರುವ ಸೇತುವೆ ತೆರವು ಕಾರ್ಯ ಶನಿವಾರದಿಂದ ಆರಂಭವಾಗಲಿದೆ. ಹಾಲಿ ೮ ಮೀಟರ್ ಇರುವ ಸೇತುವೆಯನ್ನು ತೆರವುಗೊಳಿಸಿ ೧೬ ಮೀಟರ್ ಅಳತೆಯ ಬೃಹತ್ ಸೇತುವೆ ನಿರ್ಮಾಣವಾಗಲಿದೆ.

ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸ ಲಾಗಿದೆ. ಆದರೂ ಕೂಡ ಸಾರ್ವಜನಿಕರಿಗೆ ಆಗುವ ಅನಾನುಕೂಲ ತಪ್ಪಿಸಲು ದ್ವಿಚಕ್ರ ವಾಹನ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಹೆದ್ದಾರಿ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.