ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir)ದಲ್ಲಿ ಉಗ್ರರ ಹಾವಳಿ ಮುಂದುವರಿದಿದೆ (Terror Attack). ಗಂಡರ್ಬಾಲ್ ಜಿಲ್ಲೆಯ ಗಗಾಂಗೀರ್ (Gagangir)ನಲ್ಲಿ ಭಾನುವಾರ (ಅಕ್ಟೋಬರ್ 20) ನಡೆದ ಭಯೋತ್ಪಾದಕರ ದಾಳಿಯಲ್ಲಿ ವೈದ್ಯ, ಐವರು ವಲಸಿಗ ಕಾರ್ಮಿಕರು ಸೇರಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
6 ಮಂದಿ ಸಾವನ್ನಪ್ಪಿರುವುದನ್ನು ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಸಾವು-ನೋವುಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಮೂಲಗಳು ತಿಳಿಸಿವೆ. ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳು ಈ ಪ್ರದೇಶವನ್ನು ಸುತ್ತುವರಿದಿದ್ದಾರೆ. ಗುಂಡ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿಯ ಕಾರ್ಮಿಕರು ನೆಲೆಸಿರುವ ಶಿಬಿರದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ.
The casualty figure from the Gagangir attack is not final as there are a number of injured labourers, both local & non-local. Praying that the injured make a full recovery as the more seriously injured are being referred to SKIMS, Srinagar.
— Omar Abdullah (@OmarAbdullah) October 20, 2024
ಲಷ್ಕರ್-ಎ-ತೈಬಾ (LeT)ಯ ಅಂಗಸಂಸ್ಥೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಈ ದಾಳಿಯನ್ನು ನಡೆಸಿದೆ ಎಂದು ಅಂದಾಜಿಸಲಾಗಿದೆ. ದೀರ್ಘಕಾಲದಿಂದ ಶಾಂತಿಯುತ ಪ್ರದೇಶವೆಂದು ಪರಿಗಣಿಸಲ್ಪಟ್ಟ ಗಂಡರ್ಬಾಲ್ ಜಿಲ್ಲೆಯಲ್ಲಿ ಇದೀಗ ದಾಳಿ ನಡೆದಿರುವುದು ಕಳವಳವನ್ನುಂಟು ಮಾಡಿದೆ. ಇತ್ತೀಚಿನ ವರ್ಷಗಳಲ್ಲಿ ಮೊದಲ ಬಾರಿಗೆ ಸ್ಥಳೀಯರಲ್ಲದವರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ.
#Terror incident in Gagangeer, #Ganderbal. Area cordoned off by security forces. Further details shall follow.@JmuKmrPolice
— Kashmir Zone Police (@KashmirPolice) October 20, 2024
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಅವರು ಈ ದಾಳಿಯನ್ನು ಖಂಡಿಸಿದ್ದಾರೆ. ಮೃತರು ಪ್ರಮುಖ ಕಟ್ಟಡವೊಂದರ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದರು ಎಂದು ತಿಳಿಸಿದ್ದಾರೆ. “ಸೋನಾಮಾರ್ಗ್ ಪ್ರದೇಶದ ಗಗಾಂಗೀರ್ನಲ್ಲಿ ಸ್ಥಳೀಯರಲ್ಲದ ಕಾರ್ಮಿಕರ ಮೇಲೆ ನಡೆದ ಭೀಕರ ದಾಳಿ ಖಂಡನೀಯ. ಈ ಭಯೋತ್ಪಾದಕ ದಾಳಿಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇನ್ನೂ 2-3 ಜನರು ಗಾಯಗೊಂಡಿದ್ದಾರೆ. ನಿರಾಯುಧ ಮುಗ್ಧ ಜನರ ಮೇಲಿನ ಈ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
Very sad news of a dastardly & cowardly attack on non-local labourers at Gagangir in Sonamarg region. These people were working on a key infrastructure project in the area. 2 have been killed & 2-3 more have been injured in this militant attack. I strongly condemn this attack on…
— Omar Abdullah (@OmarAbdullah) October 20, 2024
ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ (JKPCC) ಕೂಡ ಈ ಕೃತ್ಯದ ವಿರುದ್ಧ ಕಿಡಿ ಕಾರಿದೆ. “ಈ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ನಮ್ಮ ಸೇನೆ ಉಗ್ರರನ್ನು ಮಟ್ಟ ಹಾಕಲಿದೆʼʼ ಎಂದು ಕಾಂಗ್ರೆಸ್ ಮುಖಂಡ ರವೀಂದರ್ ಶರ್ಮಾ ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ಕವಿಂದರ್ ಗುಪ್ತಾ ಈ ಘಟನೆಯನ್ನು ಖಂಡಿಸಿದ್ದು, ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ಈ ಪ್ರದೇಶದಲ್ಲಿ ತಲೆ ಎತ್ತಲು ಪ್ರಯತ್ನಿಸುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
Strongly condemn the dastardly act of terror wherein two persons have lost their lives in Sonamarg. This is an insane act of madness.
— Sajad Lone (@sajadlone) October 20, 2024
My thoughts with families of these two families. May the perpetrators be brought to justice.
2 ದಿನಗಳ ಹಿಂದೆಯಷ್ಟೇ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಝೈನಾಪೊರಾದ ವದುನಾ ಪ್ರದೇಶದಲ್ಲಿ ಉಗ್ರರ ದಾಳಿಗೆ ನಾಗರಿಕರೊಬ್ಬರು ಬಲಿಯಾಗಿದ್ದರು. ʼʼಸ್ಥಳೀಯರಲ್ಲದ ವ್ಯಕ್ತಿಯ ಮೃತದೇಹ ಕಂಡು ಬಂದಿದೆ. ದೇಹದಲ್ಲಿ ಅನೇಕ ಗುಂಡಿನ ಗಾಯಗಳಿವೆʼʼ ಎಂದು ಅಧಿಕಾರಿಗಳು ಶುಕ್ರವಾರ (ಅಕ್ಟೋಬರ್ 18) ತಿಳಿಸಿದ್ದರು. ಈ ಕೃತ್ಯದ ಬಗ್ಗೆ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ ಮತ್ತು ಮೃತನ ಗುರುತು ಪತ್ತೆಯಾಗಿ ವಿಚಾರಣೆ ನಡೆಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಮತ್ತು ಎಸ್ಒಜಿ (Special Operations Group) ರಾಜೌರಿಯ ಶಹದ್ರಾ ಪ್ರದೇಶದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಿದೆ. ಈ ಘಟನೆ ಮರೆಯಾಗುವ ಮುನ್ನ ಅದೇ ಮಾದರಿಯ ದಾಳಿ ನಡೆದಿದೆ.
ಈ ಸುದ್ದಿಯನ್ನೂ ಓದಿ: Jammu & Kashmir Encounter : ಜಮ್ಮು& ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ, ನುಸುಳುಕೋರನ ಹತ್ಯೆ