Monday, 25th November 2024

Bangalore Rain : ಹವಾಮಾನ ವರದಿ; ಇಂದೂ ಬೆಂಗಳೂರಿನಲ್ಲಿ ಸುರಿಯಲಿದೆ ಜೋರು ಮಳೆ

Bangalore Rain

ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಲ್ಲಿ ಸೋಮವಾರವೂ ಜೋರು ಮಳೆಯಾಗಲಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಸೋಮವಾರ ರಾತ್ರಿಯೂ ಜೋರು ಮಳೆಯ ನಿರೀಕ್ಷೆ ಉಂಟಾಗಿದೆ. ಸೋಮವಾರ ಹಗಲಿನಲ್ಲಿ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ ಎಂದು ಹೇಳಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ಆಕಾಶ ಇರಲಿದೆ ಎಂದು ಹೇಳಿದೆ. ಗಾಳಿಯಲ್ಲಿ ಆರ್ದ್ರತೆಯ ಮಟ್ಟ ಮಟ್ಟವು ಶೇಕಡಾ 70 ರಿಂದ 80 ರ ನಡುವೆ ಇರಲಿದೆ. ಭಾನುವಾರ ರಾತ್ರಿ ಹಾಗೂ ಸೋಮವಾರ ಮುಂಜಾನೆ ಬೆಂಗಳೂರಿನಲ್ಲಿ ಜೋರು ಮಳೆಯಾಗಿದೆ. ಹೀಗಾಗಿ ಅನೇಕ ಪ್ರದೇಶಗಳಲ್ಲಿ ಜಲಾವೃತ ಮತ್ತು ಸಂಚಾರ ದಟ್ಟಣೆ ಉಂಟಾಗಿದೆ. ನಿರಂತರ ಮಳೆಯಿಂದಾಗಿ ಜನರ ಓಡಾಟಕ್ಕೆ ತೊಂದರೆ ಉಂಟಾಯಿತು.

ಸಾಧಾರಣ ಮಳೆಯ ಸೂಚನೆ

ಬೆಂಗಳೂರಿನಲ್ಲಿ ಮುಂಜಾನೆ ಜನ ಏಳುತ್ತಿದ್ದಂತೆ ಮಳೆಯ ದರ್ಶನವಾಯಿತು. ಆದರೆ, ಸ್ವಲ್ಪ ಹೊತ್ತಿನಲ್ಲಿ ಆಕಾಶ ತಿಳಿಯಾಯಿತು. ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: Bangalore Rain : ಬೆಂಗಳೂರಿನಲ್ಲಿ ಮುಂಜಾನೆ ಅಬ್ಬರದ ಮಳೆ; ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮುಂದಿನ ಐದು ದಿನಗಳ ಹವಾಮಾನ ವರದಿ ಬಿತ್ತರಿಸಿದ್ದು ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಪ್ರದೇಶಗಳಲ್ಲಿ ಇಂದು ಗುಡುಗು ಮತ್ತು ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ಮುಂಬರುವ ದಿನಗಳ ಹವಾಮಾನ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದ ಗ್ರಾಮೀಣ ಪ್ರದೇಶಗಳು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳು ಮತ್ತು ಚಿಕ್ಕಮಗಳೂರಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಇತರ ಭಾಗಗಳಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಏತನ್ಮಧ್ಯೆ, ಅಕ್ಟೋಬರ್ 25 ರ ನಂತರ ಮಳೆಯ ತೀವ್ರತೆ ಕಡಿಮೆಯಾಗುತ್ತದೆ.