Wednesday, 23rd October 2024

R Ashok: ಚನ್ನಪಟ್ಟಣ ಉಪಚುನಾವಣೆ; ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌ ಎಂದ ಆರ್. ಅಶೋಕ್‌

R Ashok

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಪಿ. ಯೋಗೇಶ್ವರ್‌ (CP Yogeshwar) ಅವರ ಮನ ಒಲಿಸಲು ನಾನು ಕೂಡ ಯತ್ನಿಸಿದ್ದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಶಾಸಕರಾಗಿದ್ದು, ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಯೋಗೇಶ್ವರ್‌ ಅವರು ದುಡುಕುತ್ತಾರೆ ಅಥವಾ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ. ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌ ಸಿಗಬಹುದು ಎಂದರು.

ಈ ಸುದ್ದಿಯನ್ನೂ ಓದಿ | Central Government Leave 2025 : ಕೇಂದ್ರ ಸರ್ಕಾರದಿಂದ 2025ನೇ ಸಾಲಿನ ರಜಾದಿನಗಳ ಪಟ್ಟಿ ಬಿಡುಗಡೆ

ಇನ್ನು ಎರಡು ದಿನದಲ್ಲಿ ಎಲ್ಲವೂ ತೀರ್ಮಾನ

ನಿಖಿಲ್‌ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಪಾರ್ಟ್‌ನರ್‌ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ ಎಂದರು.

ಈ ಸುದ್ದಿಯನ್ನೂ ಓದಿ | Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಅ.23ರಂದು ವಿದ್ಯುತ್‌ ವ್ಯತ್ಯಯ

ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ

ಡಿ.ಕೆ. ಶಿವಕುಮಾರ್‌ ಅವರ ಸಹೋದರ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಯಾರನ್ನೋ ಕರೆದುಕೊಂಡು ಬರುತ್ತೇನೆ ಎಂದು ಹೇಳಬಹುದು. ಆದರೆ ಅಂತಿಮವಾಗಿ ಎಲ್ಲವನ್ನೂ ಜನರು ತೀರ್ಮಾನಿಸುತ್ತಾರೆ. ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ರೈತರಿಗೆ ಪರಿಹಾರ ನೀಡಿಲ್ಲ. ಪ್ರವಾಹ ಹಾನಿ ನಿರ್ವಹಣೆ ಮಾಡಿಲ್ಲ. ಜನರು ಸರ್ಕಾರದ ವಿರುದ್ಧವಾಗಿ ನಿಂತಿದ್ದಾರೆ. ಅದರ ಉಪಯೋಗವನ್ನು ನಾವು ಪಡೆಯುತ್ತೇವೆ ಎಂದು ಆರ್‌. ಅಶೋಕ್‌ ತಿಳಿಸಿದರು.