Wednesday, 23rd October 2024

Karnataka Weather: ಇಂದಿನ ಹವಾಮಾನ; ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ

ಬೆಂಗಳೂರು: ಅ.23ರಂದು ಗುರುವಾರ ಬೆಂಗಳೂರು, ಉತ್ತರ ಕನ್ನಡ, ಉಡುಪಿ, ಧಾರವಾಡ, ಬೆಳಗಾವಿ, ಹಾವೇರಿ, ಮಂಡ್ಯ, ಮೈಸೂರು, ಹಾಸನ, ಕೊಡಗು, ರಾಮನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದ್ದು(Karnataka Weather), ಕರಾವಳಿಯ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಅ.24ರಂದು ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.27ರವರೆಗೆ ಮುಂದುವರಿಯಲಿದೆ.

ರಾಜ್ಯ ರಾಜಧಾನಿ ಬೆಂಗಳೂರು, ಮೈಸೂರು, ಹಾಸನ ಸೇರಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 24 ರವರೆಗೆ ಗುಡುಗು-ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಅ.24ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆ ಅಥವಾ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 20 ° C ಆಗಿರಬಹುದು.

ಟಿಬಿ ಡ್ಯಾಂ ಜಲಾನಯನ ಪ್ರದೇಶದಲ್ಲಿ ಪ್ರವಾಹ ಎಚ್ಚರಿಕೆ

ಭದ್ರಾ ಮತ್ತು ವರದಾ ನದಿಗಳ ಹೊರಹರಿವು ಮತ್ತು ಟಿಬಿ ಡ್ಯಾಂ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ, ತುಂಗಭದ್ರಾ ಅಣೆಕಟ್ಟಿಗೆ ಒಳಹರಿವು ಹೆಚ್ಚುತ್ತಿದೆ. ಆದ್ದರಿಂದ ನದಿಗೆ ನೀರಿನ ಬಿಡುಗಡೆಯನ್ನು 90,000 ರಿಂದ 1,20,000 ಕ್ಯೂಸೆಕ್‌ಗಳಿಗೆ ಹೆಚ್ಚಿಸಲಾಗಿದೆ. ಇದರಿಂದ ತುಂಗಭದ್ರಾ ಅಣೆಕಟ್ಟೆಯ ಕೆಳಬಾಗದಲ್ಲಿ ನದಿ ಪಾತ್ರದ ಜನರು ಜಾಗ್ರತೆ ವಹಿಸಲು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.