Wednesday, 23rd October 2024

Bengaluru Building Collapse: ಕುಸಿದ ಕಟ್ಟಡದಡಿಯಿಂದ 3 ಶವ ಹೊರಕ್ಕೆ, ಇನ್ನೂ ಸಿಲುಕಿರುವ 16 ಕಾರ್ಮಿಕರು

bengaluru building collapse

ಬೆಂಗಳೂರು: ಹೆಣ್ಣೂರು ಸಮೀಪದ ಬಾಬುಸಾ​​ಪಾಳ್ಯದಲ್ಲಿ ಕುಸಿದು ಬಿದ್ದಿರುವ (Bengaluru Building Collapse) ನಿರ್ಮಾಣ ಹಂತದ ಕಟ್ಟಡದಡಿಯಿಂದ ಮೂವರು ಕಾರ್ಮಿಕರ ಶವಗಳನ್ನು (rescue operation) ಹೊರಗೆ ತೆಗೆಯಲಾಗಿದೆ. ಕಟ್ಟಡ ಅವಶೇಷಗಳಡಿ ಇನ್ನೂ 16 ಕಾರ್ಮಿಕರು ಸಿಲುಕಿರಬಹುದು (Bengaluru news) ಎಂದು ಶಂಕಿಸಲಾಗಿದೆ.

ಸದ್ಯ ಅಗ್ನಿಶಾಮಕ ದಳ, ಪೊಲೀಸರು ಸೇರಿ ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರತೆಗೆದಿದ್ದಾರೆ. ಇನ್ನು ಮೂವರನ್ನು ರಕ್ಷಣೆ ಮಾಡಿದ್ದು, ಇನ್ನುಳಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಕಟ್ಟಡ ಕುಸಿಯುತ್ತಿದ್ದಂತೆಯೇ ಅವಶೇಷಗಳಡಿಯಲ್ಲಿ ಸಿಲುಕಿದ್ದ ಕಾರ್ಮಿಕನೋರ್ವ ರಕ್ತ ಸಿಕ್ತ ಸ್ಥಿತಿಯಲ್ಲಿ ಆಚೆ ಬಂದಿದ್ದು, ಕಾರ್ಮಿಕನ ತಲೆಗೆ ಪೆಟ್ಟಾಗಿ ರಕ್ತ ಸೋರುತ್ತಿದೆ. ನಮ್ಮವರು ಒಳಗೆ ಸಿಲುಕಿದ್ದಾರೆಂದು ಎಂದು ಮಾಹಿತಿ ನೀಡಿದ್ದಾನೆ.

ಮಲ್ಲೇಶ್ವರಂನಲ್ಲಿ ವಾಸವಿದ್ದ ಆಂಧ್ರ ಮೂಲದ ಮುನಿರಾಜು ರೆಡ್ಡಿ ಎಂಬುವರಿಗೆ ಸೇರಿದ ಕಟ್ಟಡ ಇದಾಗಿದೆ. 6 ಅಂತಸ್ತಿನ ಅಪಾರ್ಟ್‌ಮೆಂಟ್ ನಿರ್ಮಾಣ ಕಾರ್ಯ 8 ತಿಂಗಳಿಂದ ನಡೆಯುತ್ತಿದೆ. ಕುಸಿತ ಘಟನೆ ಸಂಭವಿಸುತ್ತಿದ್ದಂತೆಯೇ ಕಟ್ಟಡ ಮಾಲೀಕ ಮುನಿರಾಜು ರೆಡ್ಡಿ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಮೂವರ ಕಾರ್ಮಿಕ ಶವ ಪತ್ತೆಯಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಡಿಸಿಪಿ ದೇವರಾಜ್ ಅವರಿಗೆ ಫೋನ್ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ನಂತರ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ 17 ಜನ ಸಿಲುಕಿರುವ ಬಗ್ಗೆ ಮಾಹಿತಿ ಇದೆ ಇದೆ ಎಂದು ಡಿಸಿಪಿ ದೇವರಾಜ್ ಸಿಎಂ, ಡಿಸಿಎಂಗೆ ಮಾಹಿತಿ ನೀಡಿದ್ದಾರೆ. ಮಳೆಯ ನಡುವೆಯೂ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಸ್ಥಳೀಯ ಶಾಸಕ ಬೈರತಿ ಸುರೇಶ್‌ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಇದನ್ನೂ ಓದಿ: Bengaluru Building Collapse: ಬೆಂಗಳೂರಿನ ಕಟ್ಟಡ ಕುಸಿತದ ಭಯಾನಕ ವಿಡಿಯೋ; ಇನ್ನೂ ಸಿಗದ ಏಳು ಕಾರ್ಮಿಕರು