Wednesday, 23rd October 2024

Gruhalakshmi Scheme: ಮಂಟೂರು ಗ್ರಾಮದಲ್ಲಿ ನಿರ್ಮಾಣಗೊಂಡಿದೆ ಗೃಹಲಕ್ಷ್ಮೀ ಗ್ರಂಥಾಲಯ

Gruhalakshmi Scheme

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಿಂದ (Gruhalakshmi Scheme) ಬಂದ ಹಣವು ಹಲವಾರು ಮಹಿಳೆಯರಿಗೆ ಅನುಕೂಲವಾಗಿರುವ ಬಗ್ಗೆ ಅನೇಕ ಉದಾಹರಣೆಗಳಿವೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ಕಳೆದ ಒಂದು ವರ್ಷದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು, ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಗ್ರಂಥಾಲಯವನ್ನು ನಿರ್ಮಿಸಿ, ಮಾದರಿಯಾಗಿದ್ದಾರೆ. ತಾವು ನಿರ್ಮಿಸಿದ ಗ್ರಂಥಾಲಯಕ್ಕೆ ‘ಗೃಹಲಕ್ಷ್ಮಿ’ ಎಂದು ಹೆಸರಿಟ್ಟಿದ್ದಾರೆ.

ಗ್ರಂಥಾಲಯಕ್ಕೆ ‘ಗೃಹಲಕ್ಷ್ಮಿ’ ಹೆಸರಿಡಲು ಮನವಿ

ಮಲ್ಲವ್ವ ಮೇಟಿ ಅವರು, ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ, ತಾವು ಕಳೆದ ಒಂದು ವರ್ಷದ ಗೃಹಲಕ್ಷ್ಮಿ ಯೋಜನೆಯ ಕೂಡಿಟ್ಟಿದ್ದ ಹಣದಿಂದ ಗ್ರಂಥಾಲಯವನ್ನು ನಿರ್ಮಿಸಿದ್ದರು. ಮಲ್ಲವ್ವ ಮೇಟಿ ಕಾರ್ಯವನ್ನು ಮೆಚ್ಚಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹೆಬ್ಬಾಳ್ಕರ್ ಅವರು, ಗ್ರಂಥಾಲಯಕ್ಕೆ ಗೃಹಲಕ್ಷ್ಮಿ ಗ್ರಂಥಾಲಯ ಎಂದು ಹೆಸರಿಡಬೇಕು ಎಂದು ಮನವಿ ಮಾಡಿದ್ದರು.

ಈ ಸುದ್ದಿಯನ್ನೂ ಓದಿ | Health Tips: ಅಲರಾಂ ಶಬ್ದಕ್ಕೆ ಏಳುತ್ತೀರಾ? ಬಿಪಿ ಹೆಚ್ಚಬಹುದು, ಜೋಕೆ!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗೆ ಸ್ಪಂದಿಸಿದ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ತಾವು ನಿರ್ಮಿಸಿದ ಗ್ರಂಥಾಲಯಕ್ಕೆ ‘ ಗೃಹಲಕ್ಷ್ಮಿ ‘ ಎಂದು ಹೆಸರಿಟ್ಟಿದ್ದಾರೆ.

ಗ್ರಂಥಾಲಯಕ್ಕೆ ‘ಕಾನೂರು ಹೆಗ್ಗಡತಿ’ ಪುಸ್ತಕ ಉಡುಗೊರೆ

ಮಲ್ಲವ್ವ ಮೇಟಿ ಅವರ ನಿಸ್ವಾರ್ಥ ಸೇವೆಯನ್ನು ಪ್ರಶಂಸಿಸಿದ ಸಚಿವರು, ರಾಷ್ಟ್ರಕವಿ ಕುವೆಂಪು ಅವರು‌ ಬರೆದಿರುವ ‘ಕಾನೂರು ಹೆಗ್ಗಡತಿ’ ಎಂಬ ಪುಸ್ತಕವನ್ನು ಗ್ರಂಥಾಲಯಕ್ಕೆ ಉಡುಗೊರೆ ನೀಡಿದ್ದರು.‌

ಈ ಸುದ್ದಿಯನ್ನೂ ಓದಿ | Virat Kohli : ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಧೋನಿಗಿಂತ ಕೊಹ್ಲಿಯೇ ಬೆಸ್ಟ್‌; ಇಲ್ಲಿದೆ ಅವರ ಹೇಳಿಕೆಯ ವಿಡಿಯೊ

ಇತ್ತೀಚೆಗೆ ಅಜ್ಜಿಯೊಬ್ಬರು ಗೃಹಲಕ್ಷ್ಮೀ ಹಣದಲ್ಲಿ ಇಡೀ ಊಡಿಗೆ ಹೋಳಿಗೆ ಊಟ ಹಾಕಿಸಿದ್ದರು. ಅಲ್ಲದೇ ಇದೇ ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಹಣದಿಂದ ಮಹಿಳೆಯೊಬ್ಬರು ತನ್ನ ಮಗನಿಗೆ ಬೈಕ್‌ ಬುಕ್‌ ಮಾಡಿದ್ದರು. ಅಷ್ಟೇ ಅಲ್ಲದೇ ಇತ್ತೀಚೆಗೆ ಗೃಹಲಕ್ಷ್ಮಿ ಹಣದಿಂದ ಬಿ.ಇಡಿ ವಿದ್ಯಾರ್ಥಿಯೊಬ್ಬ ತನ್ನ 4ನೇ ಸೆಮಿಸ್ಟರ್ ಪರೀಕ್ಷೆಯ ಶುಲ್ಕ ಕಟ್ಟಿದ್ದನು. ಹೀಗೆ ಅನೇಕ ರೀತಿಯಲ್ಲಿ ಗೃಹಲಕ್ಷ್ಮಿ ಯೋಜನೆ ನೆರವಾಗಿದೆ.