ಕೊಪ್ಪಳ: ಮುಡಾ ಹಗರಣದಲ್ಲಿ ವಿನಾಕಾರಣ ಸಿಎಂ ಸಿದ್ದರಾಮಯ್ಯ ಅವರ ಹೆಸರು ಎಳೆದು ತರಲಾಗುತ್ತಿದೆ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದ ಉಪಚುನಾವಣೆ ಎದುರಿಸುತ್ತೇವೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಡಾ. ಅಜಯ್ ಸಿಂಗ್ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಸಿದ್ದಾಂತ ಒಪ್ಪಿಕೊಂಡು ಯಾರು ಬಂದರೂ ಪಕ್ಷಕ್ಕೆ ಸ್ವಾಗತ ಮಾಡುತ್ತೇವೆ. ಸಿ.ಪಿ.ಯೋಗೇಶ್ವರ ನಮ್ಮ ಪಕ್ಷಕ್ಕೆ ಸೇರಿದ್ದರಿಂದ ಮೈತ್ರಿ ಪಕ್ಷಗಳಿಗೆ ಆಘಾತ ಆಗುವು ದರಲ್ಲಿ ಸಂದೇಹವೇ ಇಲ್ಲ. ಪಕ್ಷದ ತತ್ವ ಹಾಗೂ ಸಿದ್ದಾಂತ ಮೆಚ್ಚಿಕೊಂಡು ಸಾಕಷ್ಟು ಜನ ಪಕ್ಷಕ್ಕೆ ಬರುವುದು ನೋಡಿದರೆ ಉಪ ಚುನಾವಣೆಯಲ್ಲಿ ಮೂರು ಕಡೆ ಕಾಂಗ್ರೆಸ್ ಗೆಲುವು ನಿಶ್ಚಿತ ಎಂಬ ವಾತಾವರಣ ಇದೆ. ಕುಟುಂಬ ರಾಜಕಾರಣದ ಆಚೆಗೂ ಎಲ್ಲರಿಗೂ ನಮ್ಮ ಪಕ್ಷ ಅವಕಾಶ ಕೊಡುತ್ತದೆ ಎಂಬುದು ಇದರಿಂದ ತಿಳಿಯುತ್ತದೆ ಎಂದು ಹೇಳಿದರು.
ಸಿದ್ದರಾಮಯ್ಯ ಎಂದರೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಭಯ. ಹೇಗಾದರೂ ಮಾಡಿ ಅವರನ್ನು ಅಧಿಕಾರ ದಿಂದ ಕೆಳಗಿಳಿಸಬೇಕು ಎಂದು ಮೈತ್ರಿ ಪಕ್ಷಗಳು ಕುತಂತ್ರ ಮಾಡುತ್ತಿವೆ ಎಂದು ಆರೋಪಿಸಿದರು. ಆದರೆ, ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಸಿದ್ಧರಾಮಯ್ಯ ಈಗಲೂ ಪ್ರಶ್ನಾತೀತ ನಾಯಕ ಎಂದರು. ಶಾಸಕ ರಾಘವೇಂದ್ರ ಹಿಟ್ನಾಳ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಇದ್ದರು.
ಇದನ್ನೂ ಓದಿ: Koppal News: ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ; ಕೊಲೆ ಶಂಕೆ