ಬೆಂಗಳೂರು: ಬ್ಯಾಂಕ್ ಉದ್ಯೋಗ ಹೊಂದಬೇಕು ಎನ್ನುವ ನಿಮ್ಮ ಕನಸು ನನಸಾಗುವ ದಿನ ಹತ್ತಿರದಲ್ಲೇ ಇದೆ. ಯಾಕೆಂದರೆ ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ, ಮುಂಬೈಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank of India) ಖಾಲಿ ಇರುವ ಬರೋಬ್ಬರಿ 1,500 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋಕಲ್ ಬ್ಯಾಂಕ್ ಆಫೀಸರ್ (ಪ್ರೊಬೆಷನರಿ ಆಫೀಸರ್) ಹುದ್ದೆ ಇದಾಗಿದ್ದು, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು (Union Bank Recruitment 2024). ಕರ್ನಾಟಕ ಸೇರಿ ದೇಶಾದ್ಯಂತ ಹುದ್ದೆಗಳಿವೆ. ಅಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಅಕ್ಟೋಬರ್ 24ರಿಂದ ಆರಂಭವಾಗಲಿದ್ದು, ಕೊನೆಯ ದಿನ ನವೆಂಬರ್ 13 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಕರ್ನಾಟಕ – 200, ಆಂಧ್ರ ಪ್ರದೇಶ – 200, ಅಸ್ಸಾಂ – 50, ಗುಜರಾತ್- 200, ಕೇರಳ – 100, ಮಹಾರಾಷ್ಟ್ರ – 50, ಒಡಿಶಾ – 100, ತಮಿಳುನಾಡು – 200, ತೆಲಂಗಾಣ – 200, ಪಶ್ಚಿಮ ಬಂಗಾಳ – 100 ಹುದ್ದೆಗಳಿವೆ. ಭಾರತ ಸರ್ಕಾರದ ಅಂಗೀಕೃತ ಯಾವುದೇ ಶಿಕ್ಷಣ ಮಂಡಳಿ, ವಿಶ್ವ ವಿದ್ಯಾನಿಯದಿಂದ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲಿ ಪರಿಣಿತಿ ಹೊಂದಿರುವುದು ಕಡ್ಡಾಯ.
ವಯೋಮಿತಿ ಮತ್ತು ಅರ್ಜಿ ಶುಲ್ಕ
ಅರ್ಜಿ ಸಲ್ಲಿಕೆಗೆ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಮಾಜಿ ಯೋಧರಿಗೆ 5 ವರ್ಷಗಳ ರಿಯಾಯಿತಿ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ/ಇಡಬ್ಲ್ಯುಎಸ್/ಒಬಿಸಿ ಅಭ್ಯರ್ಥಿಗಳು 850 ರೂ. ಮತ್ತು ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು 175 ರೂ. ಪಾವತಿಸಬೇಕು.
ಆಯ್ಕೆ ವಿಧಾನ
ಆನ್‌ಲೈನ್ ಪರೀಕ್ಷೆ, ಗ್ರೂಪ್ ಡಿಸ್ಕಷನ್, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ರೀಸನಿಂಗ್ ಮತ್ತು ಕಂಪ್ಯೂಟರ್ ಆಪ್ಟಿಟ್ಯೂಡ್, ಜನರಲ್/ಎಕಾನಮಿ/ಬ್ಯಾಂಕಿಂಗ್ ಅವೇರ್‌ನೆಸ್, ಡಾಟಾ ಅನಾಲಿಸಿಸ್ ಮತ್ತು ಇಂಟರ್‌ಪ್ರೆಟೇಷನ್ ಮತ್ತು ಇಂಗ್ಲಿಷ್ ಭಾಷೆಯನ್ನು ಒಳಗೊಂಡಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ/ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪರೀಕ್ಷೆ ನಡೆಯಲಿದೆ.
Union Bank Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಯೂನಿಯನ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ ವಿಳಾಸ www.unionbankofindia.co.inಗೆ ಭೇಟಿ ನೀಡಿ.
- Click Here For Apply ಆಯ್ಕೆಯನ್ನು ಕ್ಲಿಕ್ ಮಾಡಿ.
- ಬಳಿಕ Recruitment of Local Bank Officer (2025-26) ಆಯ್ಕೆಯನ್ನು ಕ್ಲಿಕ್ ಮಾಡಿ.
- ನಂತರ CLICK HERE TO APPLY ONLINE ಆಯ್ಕೆಯನ್ನು ಸೆಲೆಕ್ಟ್ ಮಾಡಿ.
- Click here for New Registration ಆಯ್ಕೆಯನ್ನು ಸೆಲೆಕ್ಟ್ ಮಾಡಿ ಹೆಸರು ನೋಂದಾಯಿಸಿ.
- ಹೊಸ ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಈ ಸುದ್ದಿಯನ್ನೂ ಓದಿ: Job News: ಐಒಸಿಎಲ್‌ನಲ್ಲಿ ವಿವಿಧ ವೈದ್ಯಕೀಯ ತಜ್ಞರ ಹುದ್ದೆಗೆ 24, 25ರಂದು ನೇರ ಸಂದರ್ಶನ