Wednesday, 23rd October 2024

Karnataka Rain: ಗುಬ್ಬಿಯಲ್ಲಿ ನಿರಂತರ ಮಳೆಗೆ ಮನೆ ಗೋಡೆ ಕುಸಿದು ಮಹಿಳೆ ಸಾವು; ನಾಳೆಯೂ ರಾಜ್ಯದ ಹಲವೆಡೆ ಭಾರಿ ಮಳೆ!

Karnataka Rain

ತುಮಕೂರು: ರಾಜ್ಯದಲ್ಲಿ ವಿವಿಧೆಡೆ ಭಾರಿ ಮಳೆ (Karnataka Rain) ಸುರಿಯುತ್ತಿದ್ದು, ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡವೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ.ಹೊಸಹಳ್ಳಿಯಲ್ಲಿ ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಹಿಳೆ ಸ್ನಾನಕ್ಕೆ ತೆರಳಿದ್ದ ವೇಳೆ ಗೋಡೆ ಕುಸಿದು ದುರಂತ ಸಂಭವಿಸಿದೆ.

ಸಹನಾ (27) ಮೃತ ಮಹಿಳೆ. ಗೋಡೆ ಕುಸಿದು ಮಣ್ಣಿನ ಅಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಸಹನಾಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರು ಮೃತ ಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಾಳೆಯೂ ದಕ್ಷಿಣ ಒಳನಾಡಿಯಲ್ಲಿ ಭರ್ಜರಿ ಮಳೆ ಸಾಧ್ಯತೆ

ಅ. 24ರಂದು ಕರಾವಳಿಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಅ.25ರಂದು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆಯಿರುವ ಸಾಧ್ಯತೆ. ಅದೇ ರೀತಿ
ಅ. 26ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆಯಿರುವ ಸಾಧ್ಯತೆ.

ಹಾಗೆಯೇ ಅ.27ರಂದು ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ, ಉತ್ತರ ಹಾಗೂ ಕರಾವಳಿ ಒಳನಾಡಿನಲ್ಲಿ ಒಣ ಹವೆಯಿರುವ ಸಾಧ್ಯತೆ. ಇದೇ ರೀತಿಯ ಹವಾಮಾನ ಅ.29ರವರೆಗೆ ಮುಂದುವರಿಯಲಿದೆ.

ಈ ಸುದ್ದಿಯನ್ನೂ ಓದಿ | Bomb threat : ವಿಮಾನಗಳ ಮೇಲೆ ಬಾಂಬ್‌ ಬೆದರಿಕೆ ನಿಯಂತ್ರಣಕ್ಕೆ ಕೃತಕ ಬುದ್ಧಿಮತ್ತೆ ಬಳಕೆ

ಅ.25ರ ಬೆಳಗ್ಗೆವರೆಗೆ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 20 ° C ಆಗಿರಬಹುದು.