Wednesday, 23rd October 2024

Pralhad Joshi: ಕೇಂದ್ರ ಸರ್ಕಾರದಿಂದ ದೀಪಾವಳಿ ಕೊಡುಗೆ; ಅಗ್ಗದ ದರದಲ್ಲಿ ಭಾರತ್ ಅಕ್ಕಿ, ಭಾರತ್ ಬೇಳೆ

Pralhad Joshi

ನವದೆಹಲಿ: ದೀಪಾವಳಿ (Deepavali) ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ (Central Government) ಗ್ರಾಹಕರಿಗೆ ಎಂಆರ್‌ಪಿ ದರದಲ್ಲಿ ವಿತರಿಸಲು ಮುಂದಾಗಿದೆ. ನವದೆಹಲಿಯಲ್ಲಿ ಎಂಆರ್‌ಪಿ ದರದಲ್ಲಿ ಭಾರತ್ ಅಕ್ಕಿ (Bharat Rice), ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ಕೈಗೊಂಡಿದೆ.

ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳನ್ನು ವಾಹನಗಳ ಮೂಲಕ ವಿತರಿಸಲು ಕೇಂದ್ರ ಸರ್ಕಾರ ಚಾಲನೆ ನೀಡಿದೆ. ನವದೆಹಲಿಯ ಕೃಷಿ ಭವನದಲ್ಲಿ ಇಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರು, ಕಡಿಮೆ ದರದಲ್ಲಿ ಆಹಾರ ಧಾನ್ಯ ಪೂರೈಕೆ ವಾಹನಕ್ಕೆ ಚಾಲನೆ ನೀಡಿದರು.

ದೆಹಲಿ/ಎನ್‌ಸಿಆರ್ ನಿವಾಸಿಗಳಿಗಾಗಿ ಭಾರತ್ ಕಡಲೆ ಬೇಳೆ 70 ರೂ. ಕೆಜಿ, ಭಾರತ್ ಹೆಸರುಬೇಳೆ 107 ರೂ. ಕೆಜಿ ಮತ್ತು ಭಾರತ್ ತೊಗರಿಬೇಳೆ 89 ರೂ. ಕೆಜಿ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಇದೇ ವೇಳೆ ತಿಳಿಸಿದರು.

ಗ್ರಾಹಕ ವ್ಯವಹಾರಗಳ ಇಲಾಖೆ ನೇತೃತ್ವದಲ್ಲಿ ಕೈಗೊಂಡ ಈ ಯೋಜನೆ ನಾಗರಿಕರ ಮೇಲೆ ಹೆಚ್ಚುತ್ತಿರುವ ಆಹಾರ ಧಾನ್ಯ, ಬೇಳೆ-ಕಾಳು ಬೆಲೆ ಹೊರೆಯನ್ನು ಕಡಿಮೆ ಮಾಡುವ ಗುರಿ ಹೊಂದಿದೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Basavaraja Bommai: ಶಿಗ್ಗಾವಿಯಲ್ಲಿ ಬಿಜೆಪಿಗೆ ಬಂಡಾಯವಿಲ್ಲ ಎಂದ ಬಸವರಾಜ ಬೊಮ್ಮಾಯಿ

ಈ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸಚಿವರಾದ ಬಿ.ಎಲ್. ವರ್ಮಾ ಹಾಗೂ ನಿಮುಬೇನ್ ಬಂಭಾನಿಯಾ ಉಪಸ್ಥಿತರಿದ್ದರು.