ಬೆಂಗಳೂರು: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ (HD Devegowda) ಅವರ ಪತ್ನಿ ಚೆನ್ನಮ್ಮ (Chennamma Devegowda) ಅವರು ಅಸ್ವಸ್ಥರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಉಸಿರಾಟದ ತೊಂದರೆಯ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೆನ್ನಮ್ಮ ಅವರು ಅನಾರೋಗ್ಯಕ್ಕೀಡಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ವಿಚಾರಿಸಲು ಕುಟುಂಬ ಸದಸ್ಯರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಕೂಡ ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ವಿಚಾರವಾಗಿ ಏರ್ಪಡಿಸಲಾಗಿದ್ದ ಸಭೆ ರದ್ದುಪಡಿಸಿ ತಾಯಿಯ ಆರೋಗ್ಯ ಗಮನಿಸಲು ಬಂದಿದ್ದಾರೆ. ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿಎನ್ ಮಂಜುನಾಥ್ ಅವರು ಕೂಡ ಆಗಮಿಸಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ನಿನ್ನೆ ಜೆಡಿಎಸ್ ಸಮನ್ವಯ ಸಮಿತಿ ಸಭೆ ಕರೆದಿತ್ತು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಬೇಕಿತ್ತು. ಚೆನ್ನಮ್ಮ ಆರೋಗ್ಯ ಏರುಪೇರಾಗಿರುವ ಹಿನ್ನೆಲೆಯಲ್ಲಿ, ನಾಳೆ ಹೈಕಮಾಂಡ್‌ನಿಂದಲೇ ಅಭ್ಯರ್ಥಿ ಘೋಷಣೆ ಮಾಡಿಸುತ್ತೇನೆ ಎಂದು ಎಚ್‌ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: CM Siddaramaiah: ರಾಜ್ಯದ ಜನ ನನ್ನ ಜತೆಗೆ ಇರುವವರೆಗೆ ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಹೆದರಲಾರೆ ಎಂದ ಸಿದ್ದರಾಮಯ್ಯ