Friday, 25th October 2024

Venkya Movie: ಗೋವಾ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್‌ಗೆ ಕನ್ನಡದ ‘ವೆಂಕ್ಯಾ’ ಆಯ್ಕೆ

ಬೆಂಗಳೂರು: ಭಾರತದ ಪ್ರತಿಷ್ಠಿತ ಫಿಲ್ಮ್ ಫೆಸ್ಟಿವಲ್‌ಗಳಲ್ಲಿ ಒಂದಾಗಿರುವ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Goa international film festival)ಕ್ಕೆ ಕನ್ನಡದ ವೆಂಕ್ಯಾ ಸಿನಿಮಾ (Venkya Movie) ಆಯ್ಕೆಯಾಗಿದೆ. ಈ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಭಾರತೀಯ ಪನೋರಮಾ’ ವಿಭಾಗದಲ್ಲಿ ಈ ಚಿತ್ರ ಪ್ರದರ್ಶನ ಕಾಣಲಿದೆ. ಗೋವಾದಲ್ಲಿ 55ನೇ ‘ಭಾರತೀಯ ಅಂತಾರಾಷ್ಟ್ರೀಯಾ ಸಿನಿಮೋತ್ಸವ’ ನವೆಂಬರ್ 20ರಿಂದ 28ರ ತನಕ ನಡೆಯಲಿದೆ. ಗೋವಾದ ಪಣಜಿಯಲ್ಲಿ ನಡೆಯುವ ಚಿತ್ರೋತ್ಸವದಲ್ಲಿ ದೇಶ ವಿದೇಶದ ಹಲವರು ಭಾಗಿಯಾಗಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮನ್ನಣೆ ಹೊಂದಿರುವ ಈ ಸಿನಿಮೋತ್ಸವದಲ್ಲಿ ‘ವೆಂಕ್ಯಾ’ ಪ್ರದರ್ಶನ ಕಾಣಲಿವೆ.

ʼಡೊಳ್ಳುʼ ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಕಾಂಬಿನೇಷನ್‌ನಲ್ಲಿ ʼವೆಂಕ್ಯಾʼ ಚಿತ್ರ ಮೂಡಿಬಂದಿದೆ. ಸಾಗರ್ ಪುರಾಣಿಕ್ ಆ್ಯಕ್ಷನ್‌ ಕಟ್ ಹೇಳುವುದರ ಜತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ಸಾಗರ್‌ಗೆ ಜೋಡಿಯಾಗಿ ಶಿಮ್ಲಾದ ರೂಪಾಲಿ ಸೂದ್ ಅಭಿನಯಿಸಿದ್ದಾರೆ.

ಉತ್ತರ ಕರ್ನಾಟಕ ಕಥೆಯಾಧಾರಿಸಿತ ʼವೆಂಕ್ಯಾʼ ಸಿನಿಮಾವನ್ನು ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ನಿರ್ಮಾಣ ಮಾಡುತ್ತಿದ್ದಾರೆ. ಪವನ್ ಸ್ನೇಹಿತರಾದ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಸಹ ನಿರ್ಮಾಣವಿದೆ.

ಗೋವಾ ಫಿಲ್ಮ್ ಫೆಸ್ಟಿವಲ್‌ನಲ್ಲಿ ‘ಭಾರತೀಯ ಪನೋರಮಾ’ ವಿಭಾಗ ಪ್ರಮುಖವಾಗಿದೆ. ಇದರಲ್ಲಿ 25 ಕಥಾಚಿತ್ರ ಹಾಗೂ 20 ನಾನ್-ಫೀಚರ್ ಸಿನಿಮಾಗಳು ಪ್ರದರ್ಶನಕ್ಕೆ ಆಯ್ಕೆ ಆಗಿದೆ. ಇಂಡಿಯನ್ ಪನೋರಮಾ ವಿಭಾಗದ ಆರಂಭಿಕ ಸಿನಿಮಾವಾಗಿ ಬಾಲಿವುಡ್‌ನ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಪ್ರದರ್ಶನ ಕಾಣಲಿದೆ. ಎರಡನೇ ಸಿನಿಮಾವಾಗಿ ಕನ್ನಡದ ‘ಕೆರೆಬೇಟೆ’ (Kerebete) ಆಯ್ಕೆ ಆಗಿದೆ. ಆಯ್ಕೆದಾದ ಸಿನಿಮಾಗಳ ಪಟ್ಟಿಯ 3ನೇ ಸ್ಥಾನದಲ್ಲಿ ಕನ್ನಡದ ‘ವೆಂಕ್ಯಾ’ ಚಿತ್ರವಿದೆ. ಭಾರತದ ಜನಪ್ರಿಯ ಸಿನಿಮಾಗಳನ್ನು ಕೂಡ ಆಯ್ಕೆ ಮಾಡಲಾಗಿದೆ. ಮಲಯಾಳಂ, ತಮಿಳು, ಮರಾಠಿ, ಬೆಂಗಾಲಿ, ತೆಲುಗು ಭಾಷೆಯ ಸಿನಿಮಾಗಳು ಪ್ರದರ್ಶನ ಕಾಣಲಿವೆ.

ಅಪ್ಪಟ ಹಳ್ಳಿ ಸೊಗಡಿನ ಚಿತ್ರ ʼಕೆರೆಬೇಟೆʼ. ಈ ಸಿನಿಮಾ ಮಾರ್ಚ್ 15ಕ್ಕೆ ರಾಜ್ಯದ್ಯಂತ ಅದ್ದೂರಿಯಾಗಿ ರಿಲೀಸ್ ಆಗಿತ್ತು. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿಬಂದಿದ್ದ ಈ ಸಿನಿಮಾ ಮಲೆನಾಡಿನ ಮೀನು ಬೇಟೆ ಸಂಸ್ಕೃತಿಯನ್ನು ಪರಿಚಯಿಸಿತ್ತು. ಸಿನಿಮಾದಲ್ಲಿ ನಾಯಕ ಗೌರಿಶಂಕರ್, ನಾಯಕಿ ಬಿಂದು ಗೌಡ ಜತೆಗೆ ಗೋಪಾಲ್ ದೇಶಪಾಂಡೆ, ಸಂಪತ್ ಕುಮಾರ್ ಹರಿಣಿ ಸೇರಿದಂತೆ ಅನೇಕ ದೊಡ್ಡ ಕಲಾವಿದರು ಅಭಿನಯಿಸಿದ್ದರು. ಇದೀಗ ಪ್ರತಿಷ್ಠಿತ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗುವ ಮೂಲಕ ʼಕೆರೆಬೇಟೆʼ ಮತ್ತು ʼವೆಂಕ್ಯಾʼ ಸಿನಿಮಾಗಳು ಸ್ಯಾಂಡಲ್‌ವುಡ್‌ಗೆ ಗರಿಮೆ ತಂದಿವೆ.

ಈ ಸುದ್ದಿಯನ್ನೂ ಓದಿ: Kerebete Movie: ಪ್ರತಿಷ್ಠಿತ ಅಂತಾರಾಷ್ಟ್ರೀಯ ಗೋವಾ ಫಿಲ್ಮ್ ಫೆಸ್ಟಿವಲ್‌ಗೆ ಕನ್ನಡದ ‘ಕೆರೆಬೇಟೆ’ ಸಿನಿಮಾ ಆಯ್ಕೆ