ಬೆಂಗಳೂರು: ಭಾರತ ಸರ್ಕಾರದ ಕೋಲ್ ಇಂಡಿಯಾ ಲಿಮಿಟೆಡ್ (Coal India Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 640 ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿವೆ (Coal India Recruitment 2024). GATE-2024 ಸ್ಕೋರ್ ಆಧಾರದಲ್ಲಿ ನೇಮಕಾತಿ ನಡೆಯಲಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅ. 29ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಕೊನೆಯ ದಿನ ನ. 28 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಮೈನಿಂಗ್ – 263 ಹುದ್ದೆ, ವಿದ್ಯಾರ್ಹತೆ: ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವಿ
ಸಿವಿಲ್ – 91 ಹುದ್ದೆ, ವಿದ್ಯಾರ್ಹತೆ: ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ
ಎಲೆಕ್ಟ್ರಿಕಲ್ – 102 ಹುದ್ದೆ, ವಿದ್ಯಾರ್ಹತೆ: ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ
ಮೆಕ್ಯಾನಿಕಲ್ – 104 ಹುದ್ದೆ, ವಿದ್ಯಾರ್ಹತೆ: ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ
ಸಿಸ್ಟಂ – 41 ಹುದ್ದೆ, ವಿದ್ಯಾರ್ಹತೆ: ಸಿಎಸ್‌ಇ/ಐಟಿಯಲ್ಲಿ ಬಿ.ಇ ಅಥವಾ ಬಿ.ಟೆಕ್, ಎಂಸಿಎ
ಇ & ಟಿ – 39 ಹುದ್ದೆ, ವಿದ್ಯಾರ್ಹತೆ: ಬಿ.ಇ. ಅಥವಾ ಬಿ.ಟೆಕ್, ಬಿ.ಎಸ್‌ಸಿ
ವಯೋಮಿತಿ
ಅಭ್ಯರ್ಥಿಗಳ ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಸಾಮಾನ್ಯ/ಒಬಿಸಿ/ಇಡಬ್ಲ್ಯುಎಸ್ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 1,180 ರೂ. ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು/ಕೋಲ್ ಇಂಡಿಯಾ ಲಿಮಿಟೆಡ್‌ನ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
GATE-2024 ಸ್ಕೋರ್ ಆಧಾರದಲ್ಲಿ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 50,000 ರೂ. – 1,60,000 ರೂ. ಮಾಸಿಕ ವೇತನ ದೊರೆಯಲಿದೆ.
Coal India Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://www.coalindia.in/career-cil/)
- ಹೆಸರು ನೋಂದಾಯಿಸಿ.
- ಲಾಗಿನ್ ಆಗಿ ಕಂಡು ಬರುವ ಅಪ್ಲಿಕೇಷನ್ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ)
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೇ Submit ಬಟನ್ ಕ್ಲಿಕ್ ಮಾಡಿ.
- ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ ವಿಳಾಸ: www.coalindia.inಗೆ ಭೇಟಿ ನೀಡಿ ಅತವಾ ದೂರವಾಣಿ ಸಂಖ್ಯೆ: 9477011383ಕ್ಕೆ ಕರೆ ಮಾಡಿ.
ಈ ಸುದ್ದಿಯನ್ನೂ ಓದಿ: Job Guide: ಪವರ್ ಗ್ರಿಡ್ ಕಾರ್ಪೋರೇಷನ್‌ನಲ್ಲಿದೆ 802 ಹುದ್ದೆ; ಡಿಪ್ಲೊಮಾ ವಿದ್ಯಾರ್ಹತೆಯವರು ಅರ್ಜಿ ಸಲ್ಲಿಸಿ