Monday, 28th October 2024

Karnataka Rain: ನಾಳೆ ಬೆಂಗಳೂರು, ತುಮಕೂರು ಸೇರಿ ಹಲವೆಡೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Karnataka Rain

ಬೆಂಗಳೂರು: ಅ. 29ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ ಮತ್ತು ಬೆಂ. ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಇನ್ನುಳಿದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಅ.30ರಂದು ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಕೋಲಾರ, ಬೆಳಗಾವಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅ.31ರಂದು ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಕೊಪ್ಪಳ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಅದೇ ರೀತಿ ನ.1ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.3ರವರೆಗೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Deepavali 2024: ದೀಪಾವಳಿಗೆ ಸಿಹಿ ತಿಂದರೂ ತೂಕ ಹೆಚ್ಚಿಸಿಕೊಳ್ಳದಿರುವುದು ಹೇಗೆ?

ಅ.29ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಅಕಾಶವಿರಲಿದ್ದು, ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 20° C ಆಗಿರಬಹುದು.

ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 20° C ಆಗಿರಬಹುದು.