ಚಿಕ್ಕಬಳ್ಳಾಪುರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಹಯೋಗ ದೊಂದಿಗೆ ಧನ್ವಂತರಿ ಜಯಂತಿಯ ಪ್ರಯುಕ್ತ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಅ. 29 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಸಿ. ಸುಧಾಕರ್ ರವರು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್, ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಪಿ.ಇ. ಪ್ರದೀಪ್ ಈಶ್ವರ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್, ಕೋಲಾರ ಲೋಕ ಸಭಾ ಕ್ಷೇತ್ರದ ಸಂಸದರಾದ ಎಂ. ಮಲ್ಲೇಶ್ ಬಾಬು, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಬಿ.ಎನ್. ರವಿಕುಮಾರ್, ಕೆ.ಹೆಚ್. ಪುಟ್ಟಸ್ವಾಮಿಗೌಡ, ಚಿದಾನಂದ ಎಂ. ಗೌಡ, ಎಂ.ಎಲ್. ಅನಿಲ್ ಕುಮಾರ್, ಡಿ.ಟಿ. ಶ್ರೀನಿವಾಸ್, ಚಿಕ್ಕಬಳ್ಳಾ ಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ನಗರಸಭೆ ಅಧ್ಯಕ್ಷ ಎ.ಗಜೇಂದ್ರ ರವರು ಭಾಗವಹಿಸಲಿದ್ದಾರೆ.
ಅತಿಥಿಗಳಾಗಿ ಸರ್ಕಾರದ ಕಾರ್ಯದರ್ಶಿಗಳು ಮೂಲಭೂತ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಾದ ಡಾ. ಎನ್. ಮಂಜುಳಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ, ಆಯುಷ್ ನಿರ್ದೇಶನಾಲಯದ ಆಯುಕ್ತ ಶ್ರೀನಿವಾಸುಲು ಭಾಗವಹಿಸಲಿದ್ದಾರೆ.
ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ಪದಾಧಿ ಕಾರಿಗಳು ಹಾಗೂ ಸಮಸ್ತ ನಾಗರೀಕ ಭಾಗವಹಿಸಲಿದ್ದಾರೆ.