ರಾಮನಗರ: ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ (NDA) ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ, ಕ್ಷೇತ್ರದ ದೂಡ್ಡಮಳೂರು, ಕೋಟೆ ಮಾರನಹಳ್ಳಿ, ಬೈರಾಪಟ್ಟಣ, ದೇವರಹಳ್ಳಿಯಲ್ಲಿ ಬಿರುಸಿನ ಪ್ರಚಾರ ನಡೆಸಿದರು. (Channapatna by election) ತಾಲೂಕಿನ ದೊಡ್ಡಮಳೂರು ಗ್ರಾಮದ ಶ್ರೀ ಅಪ್ರಮೇಯ ಸ್ವಾಮಿಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಗ್ರಾಮದಲ್ಲಿ ಮತಯಾಚನೆ ನಡೆಸಿದರು.
ಪ್ರತಿ ಗ್ರಾಮದಲ್ಲೂ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಪಟಾಕಿ ಸಿಡಿಸಿ, ಬೃಹತ್ ಹೂವಿನ ಹಾರ ಹಾಕಿ ಗ್ರಾಮಸ್ಥರು ಸ್ವಾಗತ ಕೋರಿದರು. ನಂತರ ಕೋಟೆ ಮಾರನಹಳ್ಳಿ ಶ್ರೀ ಆಂಜನೇಯ ಸ್ವಾಮಿಯ ದರ್ಶನ ಪಡೆದು ಕೋಟೆ ಮಾರನಹಳ್ಳಿಯಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾದರು. ಒಬ್ಬ ಯುವಕನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಈ ಸುದ್ದಿಯನ್ನೂ ಓದಿ | Pralhad Joshi: ಕಾಂಗ್ರೆಸ್ ಸರ್ಕಾರ ಇರುವೆಡೆ ಆಸ್ತಿ ಕಬಳಿಸಲು ವಕ್ಫ್ ಸಂಚು: ಜೋಶಿ ಆರೋಪ
ನಂತರ ಬೈರಾಪಟ್ಟಣ ಮಾರಮ್ಮ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು, ನಂತರ ಮಹಿಳೆಯರು, ಹಿರಿಯರ ಬಳಿ ತೆರಳಿ ಕೈ ಮುಗಿದು ಮತಯಾಚಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮೂರನೇ ದಿನ ಪ್ರಚಾರ ಆರಂಭಿಸಿದ್ದೇವೆ. ಈ ಚುನಾವಣೆ ನನ್ನ ಪಾಲಿಗೆ ಅನಿರೀಕ್ಷಿತವಾದ ಚುನಾವಣೆ. ಈ ಚುನಾವಣೆ ಬಯಸದೇ ಬಂದ ಚುನಾವಣೆ. ಕುಮಾರಸ್ವಾಮಿ ಅವರನ್ನು ಎರಡು ಬಾರಿ ಈ ಕ್ಷೇತ್ರದ ಜನರು ಶಾಸಕರಾಗಿ ಆಯ್ಕೆ ಮಾಡಿದ್ದಾರೆ. ಬಳಿಕ ಕಳೆದ ಲೋಕಸಭಾ ಚುನಾವಣೆ ವೇಳೆ ಒತ್ತಡಕ್ಕೆ ಮಣಿದು ಮಂಡ್ಯದಲ್ಲಿ ಸ್ಪರ್ಧೆ ಮಾಡಿದ್ರು. ಬಳಿಕ ಮಂಡ್ಯದಿಂದ ಗೆದ್ದು ಕೇಂದ್ರ ಸಚಿವರಾಗಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ
ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಸರ್ಕಾರದಲ್ಲಿ ದುಡ್ಡಿಲ್ಲ, ಸಾಕಷ್ಟು ಭ್ರಷ್ಟಾಚಾರ ಹೆಚ್ಚಾಗ್ತಿದೆ. ವಾಲ್ಮೀಕಿ ಹಗರಣ, ಮುಡಾ ಹಗರಣ ರಾಜ್ಯದಲ್ಲಿ ಚರ್ಚೆ ಆಗ್ತಿದೆ. ವಾಲ್ಮೀಕಿ ನಿಗಮದ ಹಣ ಬೇರೆ ರಾಜ್ಯದ ಚುನಾವಣೆಗೆ ಬಳಕೆ ಆಗಿದೆ.ಇಂತಹ ಸರ್ಕಾರವನ್ನು ನಾವು ಕಿತ್ತೊಗೆಯಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.
ಈ ಸುದ್ದಿಯನ್ನೂ ಓದಿ | Bengaluru News: ಬೆಂಗಳೂರಿನಲ್ಲಿ ‘ಕ್ರೊಮ್ಯಾಟಿಕ್ ರಿದಮ್ಸ್’ ವರ್ಣಚಿತ್ರಗಳ ಪ್ರದರ್ಶನ
ಎರಡು ಬಾರಿ ಜೀವನದಲ್ಲಿ ಪೆಟ್ಟು ತಿಂದಿದ್ದೇನೆ. ನಿಮ್ಮನ್ನ ನಂಬಿಕೊಂಡು ಬಂದಿದ್ದೇನೆ. ನಿಮ್ಮ ಪರವಾಗಿ ಕೆಲಸ ಮಾಡುತ್ತೇನೆ. ದಯಮಾಡಿ ಗೆಲ್ಲಿಸಿಕೊಡಿ ಎಂದು ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು.