ಬೆಂಗಳೂರು: ಸಿಎಂ ಸಿದ್ಧರಾಮಯ್ಯ (CM Siddaramaiah) ಮತ್ತು ಕಾಂಗ್ರೆಸ್ ನಾಯಕರ ಕುರಿತು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೆಪಿಸಿಸಿಯ ಸಂಯೋಜಕರಾದ ಡಿ.ವಿ ಸತೀಶ್ ಹಾಗೂ ಮಾಜಿ ಸಚಿವ ಎಚ್.ಆಂಜನೇಯ ಅವರು ನೀಡಿದ ದೂರು ಆಧರಿಸಿ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಓರ್ವ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ದೂರಿನಲ್ಲಿ ಏನಿದೆ?
ಒಳ ಮೀಸಲಾತಿ ಹೋರಾಟ ಸಮಿತಿ ವಿಜಯನಗರ ಜಿಲ್ಲೆ ಎಂಬ ಹೆಸರಿನಲ್ಲಿರುವ ವ್ಯಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಒಳ ಮೀಸಲಾತಿಯ ಕುರಿತು ರಾಜ್ಯ ಸರ್ಕಾರದ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನವನ್ನು ಖಂಡಿಸಿ ಹಾಗೂ ಅವಹೇಳನಕಾರಿ ಭಾಷೆ ಬಳಸಿ ಬರೆದಿರುವ ವಿಷಯಗಳನ್ನು ಹರಿಬಿಟ್ಟಿರುವ ಮತ್ತು ಫಾರ್ವರ್ಡ್ ಮಾಡಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಡಿ.ವಿ ಸತೀಶ್ ಹಾಗೂ ಮಾಜಿ ಸಚಿವ ಎಚ್.ಆಂಜನೇಯ ಆಗ್ರಹಿಸಿದ್ದಾರೆ.
9481551636 ಮತ್ತು 7892313286 ಈ ನಂಬರ್‌ಗಳನ್ನು ಹೊಂದಿರುವ ವ್ಯಕ್ತಿಗಳು ಮುಖ್ಯಮಂತ್ರಿಯವರನ್ನು ಮತ್ತು ಕಾಂಗ್ರೆಸ್ ಮಂತ್ರಿಗಳು ಮತ್ತು ನಾಯಕರನ್ನು ಕುರಿತು ಅವಹೇಳನಕಾರಿ ಭಾಷೆ ಬಳಸಿರುತ್ತಾರೆ. ಇದರಿಂದ ನಮ್ಮ ಭಾವನೆಗೆ ತುಂಬಾ ಧಕ್ಕೆಯುಂಟಾಗಿದೆ. ಆರೋಪಿಗಳು ಶಾಂತಿಪಾಲನೆ ಮಾಡುವ ಜನರನ್ನು ರೊಚ್ಚಿಗೇಳಿಸುವ ಗುರಿ ಹೊಂದಿರುತ್ತಾರೆ. ಸಮಾಜದಲ್ಲಿ ಗಲಭೆ ಉಂಟಾಗುವಂತೆ ಮಾಡುವ ಉದ್ದೇಶದಿಂದ ಕೂಡಿರುತ್ತದೆ. ಆದ್ದರಿಂದ 9481551636, 7892313286 ಮೇಲೆ ಕಾನೂನು ರೀತ್ಯ ಕ್ರಮಕೈಗೊಳ್ಳಬೇಕೆಂದು ಕೋರಿದ್ದಾರೆ.
ಈ ದೂರು ಆಧರಿಸಿ ಓರ್ವ ಅಪರಿಚಿತ ವ್ಯಕ್ತಿಯ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ 2023ರU/s-192 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Pralhad Joshi: ಭೂಮಿ ಕಬಳಿಸಲು ವಕ್ಫ್‌ಗೆ ಕುಮ್ಮಕ್ಕು ಕೊಟ್ಟಿದ್ದೇ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್! ಜೋಶಿ ಆರೋಪ