Wednesday, 30th October 2024

Viral Video: ಪೆಟ್ರೋಲ್‌ ಪಂಪ್‌ನಲ್ಲಿ ಪ್ರಿಯತಮೆಗೆ ಹಿಗ್ಗಾಮುಗ್ಗಾ ಥಳಿಸಿದ ಪ್ರಿಯಕರ; ವಿಡಿಯೊ ಇದೆ

Viral Video

ಉತ್ತರಪ್ರದೇಶ: ಉತ್ತರ ಪ್ರದೇಶದ ಗಾಜಿಯಾಬಾದ್‍ನ ಪೆಟ್ರೋಲ್ ಪಂಪ್‍ನಲ್ಲಿ ಪ್ರಿಯಕರನೊಬ್ಬ ಜನರ ಮುಂದೆಯೇ ಪ್ರಿಯತಮೆಯನ್ನು ಕ್ರೂರವಾಗಿ ಥಳಿಸಿದ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ (Viral Video)ಆಗಿದೆ. ಈ ಸಂದರ್ಭದಲ್ಲಿ ಯಾರೂ ಕೂಡ ಸಹಾಯಕ್ಕೆ ಧಾವಿಸಿ ಬಾರದೇ ಇರುವುದು ದುರದೃಷ್ಟಕರ!

ಈ ವೈರಲ್ ವಿಡಿಯೊದಲ್ಲಿ ಬೈಕ್ ಬಳಿ ನಿಂತಿದ್ದ ವ್ಯಕ್ತಿಯೊಬ್ಬ ಪೆಟ್ರೋಲ್ ಪಂಪ್‍ನಲ್ಲಿ ಪ್ರಿಯತಮೆಯನ್ನು ನೆಲದ ಮೇಲೆ ಕೆಡವಿ ಅಮಾನವೀಯವಾಗಿ ಥಳಿಸಿದ್ದಾನೆ. ಈ ದೃಶ್ಯವನ್ನು ಅಲ್ಲಿದ್ದ ಜನರು ಮೂಕ ಪ್ರೇಕ್ಷಕರಂತೆ ನೋಡಿದ್ದಾರೆ ವಿನಃ  ಯಾರೂ ಮುಂದೆ ಹೋಗಿ ಯುವತಿಗೆ ಸಹಾಯ ಹಸ್ತ ಚಾಚಲಿಲ್ಲ.

ಸಾಹಿಬಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಅರ್ಥಾಲಾದಲ್ಲಿರುವ ಪೆಟ್ರೋಲ್ ಪಂಪ್‍ನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವರದಿ ಪ್ರಕಾರ, ಬೈಕಿಗೆ ಪೆಟ್ರೋಲ್ ತುಂಬಿಸುವಾಗ ಅವರಿಬ್ಬರ ನಡುವೆ ವಾಗ್ವಾದ ನಡೆದಿದೆಯಂತೆ.  ಈ ವಾಗ್ವಾದವು ವಿಕೋಪಕ್ಕೆ ಹೋಗಿ ಇಬ್ಬರ ನಡುವೆ ಜಗಳ ಶುರುವಾಗಿ ಆ ವ್ಯಕ್ತಿ ಯುವತಿಯನ್ನು ನೆಲಕ್ಕೆ ಹೊಡೆದು ಗುದ್ದಿದ್ದಾನೆ.

ನೋಡುಗರು ಈ ಘಟನೆಯನ್ನು ತಮ್ಮ ಮೊಬೈಲ್ ಫೋನ್‍ಗಳಲ್ಲಿ ರೆಕಾರ್ಡ್‌ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ. ಇದು ವೈರಲ್ ಆಗಿದೆ.ಈ ಘಟನೆಗೆ ಕಾರಣವೇನೆಂಬುದು ತಿಳಿದುಬಂದಿಲ್ಲ. ಆದರೆ  ಪೊಲೀಸರು ವೈರಲ್ ವಿಡಿಯೊವನ್ನು ಕಂಡು ಪ್ರತಿಕ್ರಿಯಿಸಿದ್ದಾರೆ ಮತ್ತು  ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. “ಈ ವಿಷಯಕ್ಕೆ ಸಂಬಂಧಿಸಿದಂತೆ, ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಸಾಹಿಬಾಬಾದ್‍ನ ಉಸ್ತುವಾರಿ ಅಧಿಕಾರಿಗೆ ಸೂಚನೆ ನೀಡಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ರಂಗೋಲಿ ಹಾಕುತ್ತಿದ್ದ ಹುಡುಗಿಯರ ಮೇಲೆ ಕಾರು ಹತ್ತಿಸಿದ ಬಾಲಕ; ಸ್ಥಿತಿ ಗಂಭೀರ

ಮಾಹಿತಿ ಪ್ರಕಾರ, ಆರೋಪಿ  ವ್ಯಕ್ತಿ ಮತ್ತು ಸಂತ್ರಸ್ತ ಯುವತಿ ಕಳೆದ ಐದು ವರ್ಷಗಳಿಂದ ಸಂಬಂಧದಲ್ಲಿದ್ದರು ಮತ್ತು ಒಟ್ಟಿಗೆ ವಾಸಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರು ಆರೋಪಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಮತ್ತು ಅವನ ವಿರುದ್ಧ ಕಾನೂನು ಕ್ರಮವನ್ನು ಜರುಗಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.