Monday, 25th November 2024

Rajyotsava Award 2024: ಶಿಲ್ಪಿ ಅರುಣ್ ಯೋಗಿರಾಜ್, ​ಎಂಜಿನಿಯರ್ ಕನ್ನಯ್ಯ ನಾಯ್ಡು ಸೇರಿ 69 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Rajyotsava Award 2024

ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಅಯೋಧ್ಯೆ ಬಾಲ ರಾಮನ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್, ತುಂಗಭದ್ರಾ ಡ್ಯಾಂ ಗೇಟ್‌ ಸಮಸ್ಯೆ ಪರಿಹರಿಸಿದ ಎಂಜಿನಿಯರ್ ಕನ್ನಯ್ಯ ನಾಯ್ಡು, ನಟಿ ​ಹೇಮಾ ಚೌಧರಿ, ಮಾಜಿ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್, ಐಐಎಸ್‌ಸಿ ವಿಜ್ಞಾನಿ ಟಿವಿ ರಾಮಚಂದ್ರ, ಪವಾಡ ಬಂಜಕ ಹುಲಿಕಲ್‌ ನಟರಾಜ್‌ ಸೇರಿ 69 ಸಾಧಕರನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇನ್ನು ಈ ಬಾರಿ ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ ಪ್ರಶಸ್ತಿ (Rajyotsava Award 2024) ನೀಡುತ್ತಿರುವುದು ವಿಶೇಷವಾಗಿದೆ. ಪ್ರಶಸ್ತಿಯು ಐದು ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನವನ್ನು ಒಳಗೊಂಡಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಡರಗಿ ಮಾತನಾಡಿ, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನು ಪರಿಶೀಲನೆ ಮಾಡಿ ಅರ್ಹರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ. ಪ್ರತಿಯೊಂದು ಜಿಲ್ಲೆಗೂ ಪ್ರಾತಿನಿಧ್ಯ ನೀಡುವ ಮೂಲಕ ಸಾಮಾಜಿಕ ನ್ಯಾಯ ಕಾಪಾಡಿಕೊಳ್ಳಲಾಗಿದೆ. ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69 + 100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ, ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಬಯಲಾಟ ಕ್ಷೇತ್ರದಲ್ಲಿ ವಿಜಯನಗರ ಜಿಲ್ಲೆಯ 92 ವರ್ಷದ ನಾರಾಯಣಪ್ಪ ಶಿಳ್ಳೇಕ್ಯಾತ ಅವರ ಹೆಸರನ್ನು ಸಹ ಪರಿಗಣಿಸಲಾಗಿದೆ. ಜಾನಪದ ಕ್ಷೇತ್ರದಲ್ಲಿ ಅಂದಕಲಾವಿದರಾದ ಬೀದರ್ ಜಿಲ್ಲೆಯ ನರಸಿಂಹಲು ಅವರನ್ನು ಪರಿಗಣಿಸಲಾಗಿದೆ. 13 ಮಹಿಳೆಯರನ್ನೂ ಪ್ರಶಸ್ತಿಗೆ ಪರಿಗಣಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿ

ಜಾನಪದ ಕ್ಷೇತ್ರ
ಇಮಾಮಸಾಬ ಎಂ. ವಲ್ಲೆಪನವರ, ಧಾರವಾಡ
ಅಶ್ವ ರಾಮಣ್ಣ, ಬಳ್ಳಾರಿ
ಕುಮಾರಯ್ಯ, ಹಾಸನ
ವೀರಭದ್ರಯ್ಯ, ಚಿಕ್ಕಬಳ್ಳಾಪುರ
ನರಸಿಂಹಲು (ಅಂಧ ಕಲಾವಿದ), ಬೀದರ್
ಬಸವರಾಜ ಸಂಗಪ್ಪ ಹಾರಿವಾಳ‌, ವಿಜಯಪುರ
ಎಸ್.ಜಿ. ಲಕ್ಷ್ಮೀದೇವಮ್ಮ, ಚಿಕ್ಕಮಗಳೂರು
ಪಿಚ್ಚಳ್ಳಿ ಶ್ರೀನಿವಾಸ, ಕೋಲಾರ
ಲೋಕಯ್ಯ ಶೇರ (ಭೂತಾರಾಧನೆ), ದಕ್ಷಿಣ ಕನ್ನಡ

ಚಲನಚಿತ್ರ-ಕಿರುತೆರೆ
ಹೇಮಾ ಚೌಧರಿ, ಬೆಂಗಳೂರು
ಎಂ.ಎಸ್. ನರಸಿಂಹಮೂರ್ತಿ, ಬೆಂಗಳೂರು

ಸಂಗೀತ ಕ್ಷೇತ್ರ
ಪಿ. ರಾಜಗೋಪಾಲ, ಮಂಡ್ಯ
ಎಎನ್​ ಸದಾಶಿವಪ್ಪ, ರಾಯಚೂರು

ನೃತ್ಯ: ವಿದುಷಿ ಲಲಿತಾ ರಾವ್,
ಆಡಳಿತ ಕ್ಷೇತ್ರ: ಎಸ್​ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)
ವೈದ್ಯಕೀಯ ಕ್ಷೇತ್ರ: ಡಾ.ಜೆ.ಬಿ. ಬಿಡನಹಾಳ, ಡಾ ಮೈಸೂರು ಸತ್ಯಾನಾರಾಯಣ. ಡಾ.ಲಕ್ಷ್ಮಣ ಹನುಮಂತಪ್ಪ ಬಿದರಿ

ಸಮಾಜ ಸೇವೆ: ವೀರಸಂಗಯ್ಯ, ಹೀರಾಚಂದ್ ವಾಗ್ಮರೆ, ಮಲ್ಲಮ್ಮ ಸೂಲಗಿತ್ತಿ, ದಿಲೀಪ್ ಕುಮಾರ್.

ಸಂಕೀರ್ಣ ಕ್ಷೇತ್ರ: ಹುಲಿಕಲ್ ನಟರಾಜ್, ಹೆಚ್​ಆರ್​ ಸ್ವಾಮಿ, ಪ್ರಹ್ಲಾದ ರಾವ್, ಕೆ ಅಜಿತ್ ಕುಮಾರ್ ರೈ, ಇರ್ಫಾನ್ ರಜಾಕ್, ವಿರೂಪಾಕ್ಷಪ್ಪ ರಾಮಚಂದ್ರಪ್ಪ ಹಾವನೂರು,

ಹೊರದೇಶ-ಹೊರನಾಡು: ಕನ್ನಯ್ಯ ನಾಯ್ಡು, ಡಾ. ತುಂಬೆ ಮೊಹಿಯುದ್ದೀನ್, ಚಂದ್ರಶೇಖರ್ ನಾಯಕ್
ಪರಿಸರ: ಆಲ್ಮಿತ್ರಾ ಪಟೇಲ್
ಕೃಷಿ: ಶಿವನಾಪುರ ರಮೇಶ, ಪುಟ್ಟೀರಮ್ಮ
ಮಾಧ್ಯಮ: ಎನ್.ಎಸ್. ಶಂಕರ್, ಸನತ್ ಕುಮಾರ್ ಬೆಳಗಲಿ, ಎ.ಜಿ. ಕಾರಟಗಿ, ರಾಮಕೃಷ್ಣ ಬಡಶೇಶಿ
ಸಾಹಿತ್ಯ ಕ್ಷೇತ್ರ: ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್
ಶಿಲ್ಪಕಲೆ ಕ್ಷೇತ್ರ: ಶಿಲ್ಪಿ ಅರುಣ್ ಯೋಗಿರಾಜ್ (ಅಯೋಧ್ಯೆ ಬಾಲರಾಮನ ಶಿಲ್ಪಿ)
ವಿಜ್ಞಾನ-ತಂತ್ರಜ್ಞಾನ: ಪ್ರೊ. ಟಿ.ವಿ. ರಾಮಚಂದ್ರ, ಸುಬ್ಬಯ್ಯ ಅರುಣನ್
ಸಹಕಾರ: ವಿರೂಪಾಕ್ಷಪ್ಪ ನೇಕಾರ
ಬಯಲಾಟ: ಸಿದ್ಧಪ್ಪ ಕರಿಯಪ್ಪ(ಅಂಧ ಕಲಾವಿದ), ನಾರಾಯಣಪ್ಪ ಶಿಳ್ಳೇಕ್ಯಾತ
ಯಕ್ಷಗಾನ : ಕೇಶವ್ ಹೆಗಡೆ, ಸೀತಾರಾಮ ತೋಳ್ಪಾಡಿ
ರಂಗಭೂಮಿ: ಸರಸ್ವತಿ ಜುಲೈಕ ಬೇಗಂ, ಓಬಳೇಶ್ ಹೆಚ್.ಬಿ., ಭಾಗ್ಯಶ್ರೀ ರವಿ, ಡಿ. ರಾಮು, ಜನಾರ್ಧನ್ ಹೆಚ್‌., ಹನುಮಾನದಾಸ ವ. ಪವಾರ.
ಸಾಹಿತ್ಯ: ಬಿ.ಟಿ. ಲಿಲಿತಾ ನಾಯಕ್ , ಅಲ್ಲಮಪ್ರಭು ಬೆಟ್ಟದೂರು. ಡಾ. ಎಂ. ವೀರಪ್ಪ ಮೊಯಿಲಿ. ಹನುಮಂತರಾವ್ ದೊಡ್ಡಮನಿ, ಡಾ. ಬಾಳಾಸಾಹೇಬ್ ಲೋಕಾಪುರ, ಬೈರಮಂಗಲ ರಾಮೇಗೌಡ. ಡಾ. ಪ್ರಶಾಂತ್ ಮಾಡ್ತಾ
ಶಿಕ್ಷಣ: ಡಾ. ವಿ. ಕಮಲಮ್ಮ, ಡಾ. ರಾಜೇಂದ್ರ ಶೆಟ್ಟಿ., ಡಾ. ಪದ್ಮಾ ಶೇಖರ್
ಕ್ರೀಡೆ: ಜೂಡ್ ಫೆಲಿಕ್ಸ್ ಸೆಬಾಸ್ಟಿಯನ್, ಗೌತಮ್ ವರ್ಮ, ಆರ್‌. ಉಮಾದೇವಿ
ನ್ಯಾಯಾಂಗ: ಬಾಲನ್
ಚಿತ್ರಕಲೆ: ಪ್ರಭು ಹರಸೂರು
ಕರಕುಶಲ: ಚಂದ್ರಶೇಖರ ಸಿರಿವಂತೆ

    ಈ ಸುದ್ದಿಯನ್ನೂ ಓದಿ | Viswanathan Anand: ಒಂದೇ ಪಂದ್ಯದಲ್ಲಿ 60 ಸಾವಿರಕ್ಕೂ ಹೆಚ್ಚು ಎದುರಾಳಿಗಳ ಸೋಲಿಸಿದ ವಿಶ್ವನಾಥನ್‌ ಆನಂದ್‌!