Wednesday, 30th October 2024

Channapatna By Election: ಚನ್ನಪಟ್ಟಣದಲ್ಲಿಯೂ ಕಾಂಗ್ರೆಸ್‌ನಿಂದ ಗಿಫ್ಟ್ ಕೂಪನ್ ಮೋಸ: ಎಚ್.ಡಿ.ಕೆ ಆರೋಪ

HD Kumaraswamy

ಚನ್ನಪಟ್ಟಣ: ರಾಮನಗರ ಸೇರಿದಂತೆ ವಿವಿಧ ವಿಧಾನಸಭೆ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ (Congress Party) ಗಿಫ್ಟ್ ಕೂಪನ್‌ಗಳನ್ನು ಹಂಚಿ ವ್ಯಾಪಕ ಅಕ್ರಮ ನಡೆಸಿತ್ತು. (Channapatna By Election) ಉಪ ಚುನಾವಣೆಯಲ್ಲಿಯೂ ಅದೇ ರೀತಿಯ ಅಕ್ರಮ ನಡೆಸಲು ಹೊರಟಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಆರೋಪಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Bengaluru Rain: ಬೆಂಗಳೂರಿನ ವಿವಿಧೆಡೆ ಅಬ್ಬರಿಸಿದ ವರುಣರಾಯ; ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ನಿರೀಕ್ಷೆ!

ಚನ್ನಪಟ್ಟಣದಲ್ಲಿ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ, ಮಾಗಡಿ ಸೇರಿದಂತೆ ರಾಜ್ಯದ ಹಲವಾರು ವಿಧಾನಸಭೆ ಕ್ಷೇತ್ರಗಳಲ್ಲಿ ರೂ. 3,000, ರೂ. 5000 ಮೌಲ್ಯದ ಗಿಫ್ಟ್ ಕೂಪನ್ ಹಂಚಲಾಯಿತು. ಚುನಾವಣೆ ಮುಗಿದ ಮೇಲೆ ಆ ಕೂಪನ್‌ಗಳನ್ನು ಬೆಂಗಳೂರಿನ ಲುಲು ಮಾಲ್‌ಗೆ ಹೋಗಿ ಕೊಡಿ, ಅಲ್ಲಿಗೆ ಹೋಗಿ ನಿಮಗೆ ಬೇಕಾದ ವಸ್ತುವನ್ನು ಖರೀದಿ ಮಾಡಿ ಎಂದು ಆಮಿಷ ಒಡ್ಡಿದ್ದರು. ಇದನ್ನು ನಂಬಿ ಕೂಪನ್ ಹಿಡಿದುಕೊಂಡು ಲುಲು ಮಾಲ್‌ಗೆ ಹೋದರೆ ಅಲ್ಲಿ ಕೂಪನ್ ಇಲ್ಲ, ವಸ್ತುಗಳೂ ಇಲ್ಲ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Apprentice Training: ಪತ್ರಿಕೋದ್ಯಮ ಪದವೀಧರರಿಂದ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಕಾಂಗ್ರೆಸ್ ಪಕ್ಷವು ವಾಮಮಾರ್ಗದಲ್ಲಿ ಚುನಾವಣೆಗಳನ್ನು ಗೆಲ್ಲುವ ಚಾಳಿ ಮಾಡಿಕೊಂಡಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿಯೂ ಕೂಪನ್ ಷಡ್ಯಂತ್ರ ಮಾಡಲು ಕಾಂಗ್ರೆಸ್ ಹೊರಟಿದೆ. ಇಂಥ ವಂಚನೆಯ ಕುತಂತ್ರಕ್ಕೆ ಯಾರೂ ಮರುಳಾಗಬಾರದು ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮನವಿ ಮಾಡಿದರು.