ನವದೆಹಲಿ: ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರು ಗುರುವಾರ ದೀಪಾವಳಿ(Deepavali Celebration)ಯ ಸಂದರ್ಭದಲ್ಲಿ ದೇಶದ ನಾಗರಿಕರಿಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ದೀಪಾವಳಿಯಂದು ದೇಶವಾಸಿಗಳಿಗೆ ಅನೇಕ ಶುಭಾಶಯಗಳು ಎಂದಿದ್ದಾರೆ.
ಈ ದಿವ್ಯ ಬೆಳಕಿನ ಹಬ್ಬದಲ್ಲಿ, ಪ್ರತಿಯೊಬ್ಬರಿಗೂ ಆರೋಗ್ಯಕರ, ಸಂತೋಷ ಮತ್ತು ಸಮೃದ್ಧ ಜೀವನವನ್ನು ನಾನು ಬಯಸುತ್ತೇನೆ. ಇನ್ನು ಲಕ್ಷ್ಮೀದೇವಿ ಮತ್ತು ಗಣೇಶನ ಆಶೀರ್ವಾದದಿಂದ ಎಲ್ಲರೂ ಸಮೃದ್ಧಿಯಾಗಲಿ ಎಂದು ಅವರು X ಸಂದೇಶದಲ್ಲಿ ತಿಳಿಸಿದ್ದಾರೆ.
देशवासियों को दीपावली की अनेकानेक शुभकामनाएं। रोशनी के इस दिव्य उत्सव पर मैं हर किसी के स्वस्थ, सुखमय और सौभाग्यपूर्ण जीवन की कामना करता हूं। मां लक्ष्मी और भगवान श्री गणेश की कृपा से सबका कल्याण हो।
— Narendra Modi (@narendramodi) October 31, 2024
ಮತ್ತೊಂದು ಟ್ವೀಟ್ ನಲ್ಲಿ ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ ಹಿನ್ನೆಲೆಯಲ್ಲಿ ನಮನಗಳನ್ನು ಸಲ್ಲಿಸಿದ್ದಾರೆ. ರಾಷ್ಟ್ರದ ಏಕತೆ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವುದು ಅವರ ಜೀವನದ ಪ್ರಮುಖ ಆದ್ಯತೆಯಾಗಿತ್ತು. ಅವರ ವ್ಯಕ್ತಿತ್ವ ಮತ್ತು ಕೆಲಸವು ದೇಶದ ಪ್ರತಿ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ.
ಈ ವರ್ಷದ ಜನವರಿಯಲ್ಲಿ ರಾಮಮಂದಿರ ಉದ್ಘಾಟನೆಯ ನಂತರ ನಗರದಲ್ಲಿ ಮೊದಲ ದೀಪಾವಳಿಯ ಮುನ್ನಾದಿನದಂದು ಅಂದರೆ ನಿನ್ನೆ ಅಯೋಧ್ಯೆಯಲ್ಲಿ ದೀಪೋತ್ಸವ ಆಚರಿಸಲಾಯಿತು. ಸರಯೂ ನದಿ ತೀರದಲ್ಲಿ 8ನೇ ವರ್ಷದ ದೀಪಾವಳಿ ದೀಪೋತ್ಸವ ಅತ್ಯಂತ ಅದ್ಧೂರಿಯಾಗಿ ನಡೆಯಿತು. ಇದೇ ವೇಳೆ ಎರಡು ಗಿನ್ನೆಸ್ ವಿಶ್ವದಾಖಲೆಗಳು ನಿರ್ಮಾಣವಾದವು. ಒಂದೆಡೆ ಅತಿ ಹೆಚ್ಚು ಜನರು ಆರತಿ ಬೆಳಗಿದ ದಾಖಲೆಯಾದರೆ ಮತ್ತೊಂದೆಡೆ, ವಿಶ್ವದಲ್ಲೇ ಅತಿ ಹೆಚ್ಚು ಮಣ್ಣಿನ ಹಣತೆಗಳಲ್ಲಿ ಎಣ್ಣೆಯ ದೀಪಗಳನ್ನು ಹಚ್ಚಿದ ದಾಖಲೆ ರಚನೆಯಾಯಿತು. 25 ಲಕ್ಷ ಮಣ್ಣಿನ ಹಣತೆಗಳಲ್ಲಿ ಎಣ್ಣೆಯ ದೀಪಗಳನ್ನು ಏಕಕಾಲದಲ್ಲಿ ಬೆಳಗಿಸಲಾಯಿತು. ಇದೇ ವೇಳೆ, 1,121 ಮಂದಿ ವೇದಾಚಾರ್ಯರು ಸರಯೂ ನದಿಗೆ ಆರತಿ ಎತ್ತಿದರು. ಈ ದೃಶ್ಯ ಕಣ್ಣಿಗೆ ಹಬ್ಬದಂತೆ ರಮಣೀಯವಾಗಿ ಗೋಚರಿಸಿತು.
ಈ ಬಗ್ಗೆಯೂ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಮೋದಿ, ಮರ್ಯಾದಾ ಪುರುಷೋತ್ತಮ ಭಗವಾನ್ ರಾಮನು ತನ್ನ ಭವ್ಯ ಮಂದಿರದಲ್ಲಿ ಪ್ರತಿಷ್ಠಾಪನೆಗೊಂಡ ನಂತರ ಇದು ಮೊದಲ ದೀಪಾವಳಿಯಾಗಿದೆ. ಅಯೋಧ್ಯೆಯ ಶ್ರೀ ರಾಮ ಲಲ್ಲಾನ ದೇವಾಲಯದ ಈ ಅನನ್ಯ ಸೌಂದರ್ಯವು ಕಣ್ಮನ ಸೆಳೆದಿದೆ. 500 ವರ್ಷಗಳ ನಂತರ, ಲೆಕ್ಕವಿಲ್ಲದಷ್ಟು ತ್ಯಾಗ ಮತ್ತು ನಿರಂತರ ತ್ಯಾಗದ ನಂತರ ಈ ಪವಿತ್ರ ಕ್ಷಣ ಬಂದಿದೆ. ಮತ್ತು ರಾಮಭಕ್ತರ ತಪಸ್ಸಿಗೆ ನಾವೆಲ್ಲರೂ ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗಿರುವುದು ನಮ್ಮ ಸೌಭಾಗ್ಯ ಎಂದಿದ್ದಾರೆ.
अलौकिक अयोध्या!
— Narendra Modi (@narendramodi) October 30, 2024
मर्यादा पुरुषोत्तम भगवान श्री राम के अपने भव्य मंदिर में विराजने के बाद यह पहली दीपावली है। अयोध्या में श्री राम लला के मंदिर की यह अनुपम छटा हर किसी को अभिभूत करने वाली है। 500 वर्षों के पश्चात यह पावन घड़ी रामभक्तों के अनगिनत बलिदान और अनवरत त्याग-तपस्या के बाद… https://t.co/e0BwDRUnV6
ಈ ಸುದ್ದಿಯನ್ನೂ ಓದಿ: Ayodhya Deepotsav 2024: ಅಯೋಧ್ಯೆಯಲ್ಲಿ ಏಕಕಾಲಕ್ಕೆ ಬೆಳಗಿದ 25 ಲಕ್ಷ ದೀಪ; ಹೊಸ ವಿಶ್ವ ದಾಖಲೆ: ಇಲ್ಲಿದೆ ನೋಡಿ Photo Gallery