Thursday, 31st October 2024

Virat Kohli: ವಿಶೇಷ ಚೇತನ ಪುಟ್ಟ ಅಭಿಮಾನಿಗೆ ಆಟೋಗ್ರಾಫ್ ನೀಡಿದ ಕೊಹ್ಲಿ

ಮುಂಬಯಿ: ವಿರಾಟ್ ಕೊಹ್ಲಿ(Virat Kohli) ವಿಶ್ವದ ಅತ್ಯಂತ ಜನಪ್ರಿಯ ಕ್ರೀಡಾಪಟುಗಳಲ್ಲಿ ಒಬ್ಬರು, ಮತ್ತು ಅವರ ಅಭಿಮಾನಿಗಳಿಗೆ ಯಾವುದೇ ಗಡಿಯ ಮಿತಿ ಇಲ್ಲ. ಭಾರತದ ಬದ್ಧ ಎದುರಾಳಿ ಪಾಕಿಸ್ತಾನದಲ್ಲಿಯೂ ವಿರಾಟ್​ ಕೊಹ್ಲಿ ಅಪಾರ ಅಭಿಮಾನಿಗಳಿದ್ದಾರೆ. ಅವರನ್ನು ಭೇಟಿಯಾಗಲೇ ಎಷ್ಟೇ ಮಂದಿ ವರ್ಷಾನು ಗಟ್ಟಲೆ ಕಾದು ಕುಳಿತಿರುತ್ತಾರೆ. ಇದೀಗ ಕೊಹ್ಲಿ ಅವರು ನಾಳೆಯಿಂದ ವಾಂಖೆಡೆ ಸ್ಟೇಡಿಯಂನಲ್ಲಿ ಆರಂಭವಾಗಲಿರುವ ನ್ಯೂಜಿಲ್ಯಾಂಡ್‌ ವಿರುದ್ಧದ ಅಂತಿಮ ಟೆಸ್ಟ್‌ ಪಂದ್ಯಕ್ಕೂ ಮುನ್ನ ಇಲ್ಲಿನ ವಿಶೇಷ ಚೇತನ ಪುಟ್ಟ ಅಭಿಮಾನಿಗೆ ಆಟೋಗ್ರಾಫ್ ನೀಡಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.

ವಾಂಖೆಡೆ ಸ್ಟೇಡಿಯಂ ಗ್ಯಾಲರಿಯೊಳಗಿನಿಂದ ಕೊಹ್ಲಿ ಮೈದಾನಕ್ಕೆ ಅಭ್ಯಾಸಕ್ಕೆಂದು ತೆರಳುತ್ತಿದ್ದ ವೇಳೆ ಈ ವಿಶೇಷ ಚೇತನ ಪುಟ್ಟ ಅಭಿಮಾನಿ ವೀಲ್‌ ಚೇರ್‌ನಲ್ಲಿ ಕುಳಿತು ಕೊಹ್ಲಿಯಿಂದ ಆಟೋಗ್ರಾಫ್ ಪಡೆದುಕೊಳ್ಳಲು ಕಾದು ಕುಳಿತಿದ್ದರು. ಅಭಿಮಾನಿಯನ್ನು ಕಂಡ ತಕ್ಷಣ ಕೊಹ್ಲಿ ನೇರವಾಗಿ ಅವರ ಬಳಿ ಬಂದು ಬಹಳ ಆತ್ಮೀಯವಾಗಿ ಮಾತನಾಡಿಸಿ ಆಟೋಗ್ರಾಫ್ ನೀಡಿದ್ದಾರೆ. ಇದೇ ವೇಳೆ ಕೊಹ್ಲಿಗೆ ಈ ಅಭಿಮಾನಿ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಕೊಹ್ಲಿ ಕೂಡ ಅಭಿಮಾನಿಗೆ ಶುಭ ಹಾರೈಸಿದ್ದಾರೆ. ಸದ್ಯ ಈ ವಿಡಿಯೊವನ್ನು ಕೊಹ್ಲಿ ಅಭಿಮಾನಿ ಬಳಗ ತಮ್ಮ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ Virat Kohli: ಆರ್‌ಸಿಬಿಗೆ ಮತ್ತೆ ಕೊಹ್ಲಿ ನಾಯಕ!

ಮತ್ತೆ ಆರ್‌ಸಿಬಿಗೆ ಕೊಹ್ಲಿ ನಾಯಕ

ಮುಂದಿನ ಆವೃತ್ತಿಯ ಐಪಿಎಲ್‌ಗೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(Royal Challengers Bengaluru) ತಂಡದಲ್ಲಿ ದೊಡ್ಡ ಬದಲಾವಣೆಯೊಂದು ಸಂಭವಿಸುವ ಮುನ್ಸೂಚನೆಯೊಂದು ಲಭಿಸಿದೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್​ ಕೊಹ್ಲಿ(Virat Kohli) ಅವರು ಮತ್ತೆ ಐಪಿಎಲ್​ನಲ್ಲಿ ಆರ್​ಸಿಬಿ(RCB) ತಂಡದ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಇದು ಆರ್​ಸಿಬಿ ಮತ್ತು ಕೊಹ್ಲಿ ಅಭಿಮಾನಿಗಳಿಗೆ ಕುತೂಹಲ ಮೂಡಿಸುವಂತೆ ಮಾಡಿದೆ.

ವಿರಾಟ್​ ಕೊಹ್ಲಿ ಅವರು ಭಾರತ ತಂಡದ ಮೂರು ಮಾದರಿಯ ನಾಯಕತ್ವ ವಹಿಸಿಕೊಂಡಿದ್ದ ವೇಳೆ ಐಪಿಎಲ್​ನಲ್ಲಿಯೂ ತಂಡವನ್ನು ಮುನ್ನಡೆಸುವುದು ಕಷ್ಟವಾಗುತ್ತದೆ, ಕೆಲಸದ ಒತ್ತಡದಿಂದಾಗಿ ಆಟದ ಕಡೆ ಸರಿಯಾಗಿ ಗಮನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಐಪಿಎಲ್​ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಸೂಕ್ತ ನಾಯಕನ ಸ್ಥಾನಕ್ಕೆ ಚೆನ್ನೈ ತಂಡದಲ್ಲಿದ್ದ ಫಾಫ್​ ಡುಪ್ಲೆಸಿಸ್​ ಅವರನ್ನು ಖರೀದಿ ಮಾಡಿ ಅವರಿಗೆ ನಾಯಕತ್ವ ನೀಡಲಾಗಿತ್ತು.