Thursday, 31st October 2024

IPL 2025 : ಕೆ. ಎಲ್ ರಾಹುಲ್‌ ಸೇರಿದಂತೆ ಐಪಿಎಲ್‌ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ಬಿಡುಗಡೆ ಮಾಡಿದ ಆಟಗಾರರ ಪಟ್ಟಿಇಲ್ಲಿದೆ

IPL 2025 Retention

ಬೆಂಗಳೂರು: ಐಪಿಎಲ್ ಮೆಗಾ ಹರಾಜು 2025ರ ಮುನ್ನ ಆಟಗಾರರನ್ನು ಉಳಿಸಿಕೊಳ್ಳುವ ಪಟ್ಟಿಯನ್ನುಬಿಡುಗಡೆ ಮಾಡಿದೆ. ಇದೇ ವೇಳೆ ಕೆ. ಎಲ್ ರಾಹುಲ್, ರಿಷಭ್ ಪಂತ್ ಸೇರಿದಂತೆ ಹಲವಾರು ಆಟಗಾರರನ್ನು ಬಿಡುಗಡೆ ಮಾಡಲಾಗಿದೆ. ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಪ್ರಶಸ್ತಿ ವಿಜೇತ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಕೈಬಿಟ್ಟಿದೆ. ಪ್ರತಿ ಫ್ರಾಂಚೈಸಿಯು ಉಳಿಸಿಕೊಳ್ಳುವುದಕ್ಕೆ ಮತ್ತು ಮೆಗಾ ಹರಾಜಿಗಾಗಿ ಒಟ್ಟು 120 ಕೋಟಿ ರೂ. ಒಂದು ತಂಡವು ಗರಿಷ್ಠ ಆರು ಆಟಗಾರರನ್ನು ಉಳಿಸಿಕೊಳ್ಳಬಹುದು. ಗಡುವಿನ ಮೊದಲು ಅವರನ್ನು ಹಿಡಿದಿಟ್ಟುಕೊಳ್ಳುವ ಮೂಲಕ ಅಥವಾ ಹರಾಜಿನಲ್ಲಿ ರೈಟ್ ಟು ಮ್ಯಾಚ್ (ಆರ್‌ಟಿಎಂ) ಕಾರ್ಡ್‌ಗಳನನ್ನು ಬಳಸುವ ಮೂಲಕ ಮೂಲಕ ಮತ್ತೆ ತಂಡಕ್ಕೆ ಸೇರಿಸಿಕೊಳ್ಳಬಹುದು.

ಒಂದು ತಂಡವು ತಮ್ಮ ಎಲ್ಲಾ ಆಟಗಾರರನ್ನು ಬಿಡುಗಡೆ ಮಾಡುವ ಮತ್ತು ಆರು ಆರ್‌ಟಿಎಂ ಕಾರ್ಡ್‌ಗಳೊಂದಿಗೆ ಮೆಗಾ ಹರಾಜಿಗೆ ಬರುವ ಆಯ್ಕೆಯನ್ನು ಸಹ ಹೊಂದಿದೆ. ಇದು ಆಟಗಾರರನ್ನು ಅನಿರ್ಬಂಧಿತ ಮೊತ್ತಕ್ಕೆ ಖರೀದಿಸುವ ಆಯ್ಕೆನೀಡುತ್ತದೆ.

ಬಿಡುಗಡೆಯಾದ ಆಟಗಾರರ ಸಂಪೂರ್ಣ ಪಟ್ಟಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್, ಅನುಜ್ ರಾವತ್, ಸುಯಾಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೊರ್, ಕರಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟಾಪ್ಲೆ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್, ಟಾಮ್ ಕರ್ರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.

ಮುಂಬೈ ಇಂಡಿಯನ್ಸ್: ಡೀವಾಲ್ಡ್ ಬ್ರೆವಿಸ್, ಇಶಾನ್ ಕಿಶನ್, ಟಿಮ್ ಡೇವಿಡ್, ಹರ್ವಿಕ್ ದೇಸಾಯಿ, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೇಹಾಲ್ ವಧೇರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಾಲ್, ಲ್ಯೂಕ್ ವುಡ್, ರೊಮಾರಿಯೊ ಶೆಫರ್ಡ್, ಜೆರಾಲ್ಡ್ ಕೊಟ್ಜೆ, ಶ್ರೇಯಸ್ ಗೋಪಾಲ್, ನುವಾನ್ ತುಷಾರ, ನಮನ್ ಧೀರ್, ಅನ್ಶುಲ್ ಕಾಂಬೋಜ್, ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ, ಕ್ವೆನಾ ಮಾಫಾಕಾ.

ಚೆನ್ನೈ ಸೂಪರ್ ಕಿಂಗ್ಸ್: ಮೊಯೀನ್ ಅಲಿ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ರಾಜವರ್ಧನ್ ಹಂಗರ್ಗೇಕರ್, ಅಜಯ್ ಮಂಡಲ್, ಮುಖೇಶ್ ಚೌಧರಿ, ಅಜಿಂಕ್ಯ ರಹಾನೆ, ಶೇಕ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣಾ, ರಚಿನ್ ರವೀಂದ್ರ, ಶಾರ್ದೂಲ್ ಠಾಕೂರ್, ಡ್ಯಾರಿಲ್ ಮಿಚೆಲ್, ಸಮೀರ್ ರಿಜ್ವಿ, ಮುಸ್ತಾಫಿಜುರ್ ರಹಮಾನ್, ರಿಚರ್ಡ್ ಗ್ಲೀಸನ್, ಅವನೀಶ್ ರಾವ್ ಅರವೇಲಿ, ಡೆವೊನ್ ಕಾನ್ವೇ.

ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್, ರಿಷಭ್ ಪಂತ್, ಪ್ರವೀಣ್ ದುಬೆ, ವಿಕ್ಕಿ ಓಸ್ತ್ವಾಲ್‌, ಪೃಥ್ವಿ ಶಾ, ಅನ್ರಿಕ್ ನಾರ್ಟ್ಜೆ, ಜೇಕ್ ಫ್ರೇಸರ್-ಮೆಕ್ಗುರ್ಕ್, ಲಲಿತ್ ಯಾದವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಇಶಾಂತ್ ಶರ್ಮಾ, ಯಶ್ ಧುಲ್, ಮುಖೇಶ್ ಕುಮಾರ್, ರಿಕಿ ಭುಯಿ, ಕುಮಾರ್ ಕುಶಾಗ್ರ, ಗುಲ್ಬಾದಿನ್ ನೈಬ್, ರಸಿಕ್ ದಾರ್, ಜೇ ರಿಚರ್ಡ್ಸನ್, ಸುಮಿತ್ ಕುಮಾರ್, ಶಾಯ್ ಹೋಪ್, ಸ್ವಸ್ತಿಕ್ ಚಿಕಾರಾ, ಲಿಜಾದ್ ವಿಲಿಯಮ್ಸ್, ಹ್ಯಾರಿ ಬ್ರೂಕ್, ಲುಂಗಿ ಎನ್ಗಿಡಿ, ಮಿಚೆಲ್ ಮಾರ್ಷ್.

ಕೋಲ್ಕತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ರಹಮಾನುಲ್ಲಾ ಗುರ್ಬಾಜ್, ಫಿಲ್ ಸಾಲ್ಟ್, ಸುಯಾಶ್ ಶರ್ಮಾ, ಅನುಕುಲ್ ರಾಯ್, ವೆಂಕಟೇಶ್ ಅಯ್ಯರ್, ವೈಭವ್ ಅರೋರಾ, ಕೆಎಸ್ ಭರತ್, ಚೇತನ್ ಸಕಾರಿಯಾ, ಮಿಚೆಲ್ ಸ್ಟಾರ್ಕ್, ಆಂಗ್ರಿಶ್ ರಘುವಂಶಿ, ಶೆರ್ಫೇನ್ ರುದರ್ಫೋರ್ಡ್, ಮನೀಶ್ ಪಾಂಡೆ, ಅಲ್ಲಾ ಘಜನ್ಫರ್, ದುಷ್ಮಂತ ಚಮೀರಾ, ಸಾಕಿಬ್ ಹುಸೇನ್, ಜೇಸನ್ ರಾಯ್, ಗುಸ್ ಅಟ್ಕಿನ್ಸನ್, ಮುಜೀಬ್ ಉರ್ ರಹಮಾನ್.

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ದೇವದತ್ ಪಡಿಕ್ಕಲ್, ನವೀನ್ ಉಲ್ ಹಕ್, ಕೃನಾಲ್ ಪಾಂಡ್ಯ, ಯುಧ್ವೀರ್ ಸಿಂಗ್, ಪ್ರೇರಕ್ ಮಂಕಡ್, ಯಶ್ ಠಾಕೂರ್, ಅಮಿತ್ ಮಿಶ್ರಾ, ಶಮರ್ ಜೋಸೆಫ್, ಕೆ ಗೌತಮ್, ಅರ್ಶಿನ್ ಕುಲಕರ್ಣಿ, ಎಂ ಸಿದ್ಧಾರ್ಥ್, ಆಷ್ಟನ್ ಟರ್ನರ್, ಮ್ಯಾಟ್ ಹೆನ್ರಿ, ಮೊಹಮ್ಮದ್ ಶಮಿ. ಅರ್ಷದ್ ಖಾನ್, ಮಾರ್ಕ್ ವುಡ್, ಡೇವಿಡ್ ವಿಲ್ಲಿ, ಶಿವಂ ಮಾವಿ.

ಇದನ್ನೂ ಓದಿ: IPL 2025: ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ಉಳಿಸಿಕೊಂಡ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ

ಸನ್ರೈಸರ್ಸ್ ಹೈದರಾಬಾದ್: ಡೇವಿಡ್ ಸಮದ್, ಐಡೆನ್ ಮಾರ್ಕ್ರಮ್, ಮಾರ್ಕೊ ಜಾನ್ಸೆನ್, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಸನ್ವೀರ್ ಸಿಂಗ್, ಭುವನೇಶ್ವರ್ ಕುಮಾರ್, ಮಯಾಂಕ್ ಅಗರ್ವಾಲ್, ಟಿ ನಟರಾಜನ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ಮಾರ್ಕಂಡೆ, ಉಪೇಂದ್ರ ಸಿಂಗ್ ಯಾದವ್, ಉಮ್ರಾನ್ ಮಲಿಕ್, ಫಜಲ್ಹಕ್ ಫಾರೂಕಿ, ಶಹಬಾಜ್ ಅಹ್ಮದ್, ವಿಜಯಕಾಂತ್ ವಿಯಾಸ್ಕಾಂತ್, ಜಯದೇವ್ ಉನಾದ್ಕತ್, ಆಕಾಶ್ ಸಿಂಗ್, ಜತವೇದ್ ಸುಬ್ರಮಣ್ಯನ್, ವನಿಂದು ಹಸರಂಗ.

ಗುಜರಾತ್ ಟೈಟಾನ್ಸ್: ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಾಹ, ಕೇನ್ ವಿಲಿಯಮ್ಸನ್, ಅಭಿನವ್ ಮನೋಹರ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ನೂರ್ ಅಹ್ಮದ್, ಸಾಯಿ ಕಿಶೋರ್, ಜೋಶುವಾ ಲಿಟಲ್, ಮೋಹಿತ್ ಶರ್ಮಾ, ಅಜ್ಮತುಲ್ಲಾ ಒಮರ್ಜೈ, ಉಮೇಶ್ ಯಾದವ್, ಗುರ್ನೂರ್ ಬ್ರಾರ್, ಕಾರ್ತಿಕ್ ತ್ಯಾಗಿ, ಮಾನವ್ ಸುತಾರ್, ಸ್ಪೆನ್ಸರ್ ಜಾನ್ಸನ್, ಸಂದೀಪ್ ವಾರಿಯರ್, ಬಿಆರ್ ಶರತ್, ಮೊಹಮ್ಮದ್ ಶಮಿ, ರಾಬಿನ್ ಮಿಂಜ್, ಸುಶಾಂತ್ ಮಿಶ್ರಾ.

ಪಂಜಾಬ್ ಕಿಂಗ್ಸ್: ಅರ್ಷ್ದೀಪ್ ಸಿಂಗ್, ಮ್ಯಾಥ್ಯೂ ಶಾರ್ಟ್, ಜಿತೇಶ್ ಶರ್ಮಾ, ಸಿಕಂದರ್ ರಾಜಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟನ್‌, ಅಥರ್ವ ತೈಡೆ, ನಾಥನ್ ಎಲ್ಲಿಸ್, ಸ್ಯಾಮ್ ಕರ್ರನ್, ಕಗಿಸೊ ರಬಾಡ, ಹರ್ಪ್ರೀತ್ ಬ್ರಾರ್, ರಾಹುಲ್ ಚಹರ್, ಹರ್ಪ್ರೀತ್ ಭಾಟಿಯಾ, ವಿದ್ವತ್ ಕಾವೇರಪ್ಪ, ಶಿವಂ ಸಿಂಗ್, ಹರ್ಷಲ್ ಪಟೇಲ್, ಕ್ರಿಸ್ ವೋಕ್ಸ್, ಅಶುತೋಷ್ ಶರ್ಮಾ, ವಿಶ್ವನಾಥ್ ಪ್ರತಾಪ್ ಸಿಂಗ್, ತನಯ್ ತ್ಯಾಗರಾಜನ್, ಪ್ರಿನ್ಸ್ ಚೌಧರಿ, ರಿಲೀ ರೊಸ್ಸೌ.

ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ಡೊನೊವನ್ ಫೆರೇರಾ, ಕುನಾಲ್ ರಾಥೋಡ್, ರವಿಚಂದ್ರನ್ ಅಶ್ವಿನ್, ಕುಲದೀಪ್ ಸೇನ್, ನವದೀಪ್ ಸೈನಿ, ಟ್ರೆಂಟ್ ಬೌಲ್ಟ್, ಯಜುವೇಂದ್ರ ಚಾಹಲ್, ಅವೇಶ್ ಖಾನ್, ರೋವ್ಮನ್ ಪೊವೆಲ್, ಶುಭಂ ದುಬೆ, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಅಬಿದ್ ಮುಷ್ತಾಕ್, ನಾಂಡ್ರೆ ಬರ್ಗರ್, ತನುಷ್ ಕೋಟ್ಯಾನ್, ಕೇಶವ್ ಮಹಾರಾಜ್, ಪ್ರಸಿದ್ಧ್ ಕೃಷ್ಣ, ಆಡಮ್ ಜಂಪಾ.