ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರು ಕನ್ನಡ ರಾಜ್ಯೋತ್ಸವ(Kannada Rajyotsava)ದ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಶುಭ ಹಾರೈಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಕನ್ನಡದಲ್ಲೇ ಸಂದೇಶ ಪ್ರಕಟಿಸುವ ಅವರು ಕರ್ನಾಟಕದ ಜತೆ ಸದಾ ಸಂತೋಷ, ಯಶಸ್ಸು ಗಳಿಸುವಂತಾಗಲಿ ಎಂದು ಹಾರೈಸಿದ್ದಾರೆ.
ಸುವರ್ಣ ಕರ್ನಾಟಕ ವರ್ಷಚಾರಣೆಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭ ಕೋರಿದ್ದಾರೆ. ಕನ್ನಡದಲ್ಲೇ ಸಂದೇಶ ಪ್ರಕಟಿಸುವ ಮೂಲಕ ಮೋದಿ ಶುಭ ಕೋರಿರುವುದು ವಿಶೇಷ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಮೋದಿ, ‘ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ’ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.
ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ…
— Narendra Modi (@narendramodi) November 1, 2024
ಕರ್ನಾಟಕದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಇಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸುವರ್ಣ ಕರ್ನಾಟಕ ವರ್ಷಚಾರಣೆಯನ್ನು ಜನೋತ್ಸವವಾಗಿ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ರಾಜ್ಯೋತ್ಸವ ಪ್ರಶಸ್ತಿ ಜತೆಗೆ, ಕರ್ನಾಟಕ ಸಂಭ್ರಮದ ಪ್ರಯುಕ್ತ 50 ಮಹಿಳಾ ಸಾಧಕರು, 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಕೂಡ ಈ ಬಾರಿ ಘೋಷಣೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರೂ. ನಗದನ್ನೂ ಒಳಗೊಂಡಿದೆ.
ಇನ್ನು 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕಕ್ಕೆ 15ನೇ ಹಣಕಾಸಿನ ಆಯೋಗದಲ್ಲಿ ಆದ ಅನ್ಯಾಯವನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ. ಕೇಂದ್ರದ ಅನುದಾನದ ವಿಚಾರದಲ್ಲಿ ಕರ್ನಾಟಕಕ್ಕೆ ತಾರತಮ್ಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೇಂದ್ರ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆಗುತ್ತಿದೆ. ಆದರೂ ನಾವು ಶಾಲಾ ಕಾಲೇಜು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ. ವಾರಕ್ಕೆ 6 ದಿನ ವಿದ್ಯಾರ್ಥಿಗಳಿಗೆ ಮೊಟ್ಟೆ ಕೊಡುವ ಕೆಲಸ ಮಾಡುತ್ತಿದ್ದೇವೆ. ಪ್ರತಿ ದಿನ 57 ಲಕ್ಷ ಮಕ್ಕಳಿಗೆ ಮೊಟ್ಟೆ ನೀಡುತ್ತಿದ್ದೇವೆ ಎಂದರು.
ಈ ಸುದ್ದಿಯನ್ನೂ ಓದಿ: Malaika Arora: ಆತ್ಮಕ್ಕೆ ಸ್ಪರ್ಶ ಜೀವನದ ಕೊನೇ ತನಕ; ಮಲೈಕಾ ಅರೋರಾ ಇನ್‌ಸ್ಟಾ ಸ್ಟೋರಿ ಯಾರಿಗೆ?