ಮುಂಬಯಿ: ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ(Virat Kohli) ಅವರು ಕ್ರಿಕೆಟ್ನಲ್ಲಿ ಎಷ್ಟು ಖ್ಯಾತಿ ಪಡೆದಿದ್ದಾರೋ ಅಷ್ಟೇ ಖ್ಯಾತಿಯನ್ನು ಮೈದಾನದಲ್ಲಿ ಡ್ಯಾನ್ಸ್(Virat Kohli Dance) ಮಾಡುವ ಮೂಲಕವೂ ಪಡೆದಿದ್ದಾರೆ. ಕೊಹ್ಲಿ ಹಲವು ಬಾರಿ ಫಿಲ್ಡಿಂಗ್ ನಡೆಸುವ ವೇಳೆ ಡ್ಯಾನ್ಸ್ ಮಾಡಿ ಪ್ರೇಕ್ಷಕರಿಗೆ ಚಮಕ್ ನೀಡಿದ ವಿಡಿಯೊ ವೈರಲ್ ಆಗಿತ್ತು. ಇದೀಗ ನ್ಯೂಜಿಲ್ಯಾಂಡ್(India vs New Zealand 3rd Test) ವಿರುದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ಸಾಗುತ್ತಿರುವ ಅಂತಿಮ ಟೆಸ್ಟ್‌ನ ಮೊದಲ ದಿನದಾಟದ ವೇಳೆ ಅಭಿಮಾನಿಗಳ ಹಾಡಿಗೆ ಕೊಹ್ಲಿ ಒಂದೆಡರು ಸ್ಟೆಪ್ಸ್ ಹಾಕಿ ಗಮನಸೆಳೆದಿದ್ದಾರೆ. ಈ ವಿಡಿಯೊ ಸಖತ್ ವೈರಲ್ ಆಗಿದೆ.
ಇದೇ ಪಂದ್ಯದಲ್ಲಿ ಕಿವೀಸ್ ಬ್ಯಾಟರ್ ಟಾಮ್ ಲ್ಯಾಥಮ್ ಮತ್ತು ರಚಿನ್ ರವೀಂದ್ರ ವಿಕೆಟ್ ವಿಕೆಟ್ ಕೀಳುವಲ್ಲಿ ವಿರಾಟ್ ಕೊಹ್ಲಿ ಅವರು ವಾಷಿಂಗ್ಟನ್ ಸುಂದರ್‌ಗೆ ನೀಡಿದ ಅಮೂಲ್ಯ ಸಲಹೆ ಕೂಡ ರೋಚಕ ಕ್ಷಣಕ್ಕೆ ಸಾಕ್ಷಿಯಾಯಿತು. ಪುಣೆ ಟೆಸ್ಟ್‌ನಲ್ಲಿ ಬ್ಯಾಟಿಂಗ್ ವೈಫಲ್ಯ ಕಂಡಿದ್ದ ವಿರಾಟ್ ಕೊಹ್ಲಿ ಅಂತಿಮ ಟೆಸ್ಟ್‌ನಲ್ಲಿ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ತೋರುವ ವಿಶ್ವಾಸದಲ್ಲಿದ್ದಾರೆ. ವಾಂಖೆಡೆ ಸ್ಟೇಡಿಯಂನಲ್ಲಿ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧವೇ ಕೊಹ್ಲಿ ಶತಕ ಬಾರಿಸಿ ಸಚಿನ್ ತೆಂಡೂಲ್ಕರ್ ಅವರ ಅತ್ಯಧಿಕ ಏಕದಿನ ಶತಕದ ದಾಖಲೆಯನ್ನು ಮುರಿದಿದ್ದರು.
ಇದನ್ನೂ ಓದಿ MS Dhoni: ವಿಶೇಷ ಪೂಜೆ ನಡೆಸಿ ದೀಪಾವಳಿ ಆಚರಿಸಿದ ಧೋನಿ; ವಿಡಿಯೊ ವೈರಲ್
235ಕ್ಕೆ ಕಿವೀಸ್ ಆಲೌಟ್
ಸ್ಪಿನ್‌ದ್ವಯರಾದ ರವೀಂದ್ರ ಜಡೇಜಾ ಮತ್ತು ವಾಷಿಂಗ್ಟನ್ ಸುಂದರ್ ಸ್ಪಿನ್ ಬಲೆಗೆ ಬಿದ್ದ ನ್ಯೂಜಿಲ್ಯಾಂಡ್ 235 ರನ್‌ಗೆ ಆಲೌಟ್ ಆಗಿದೆ. ಕಿವೀಸ್ ಪರ ಡೇರಿಯಲ್ ಮಿಚೆಲ್ ಮತ್ತು ವಿಲ್ ಯಂಗ್ ಅರ್ಧಶತಕ ಬಾರಿಸಿ ಮಿಂಚಿದರು. ಮಿಚೆಲ್ 129 ಎಸೆತ ಎದುರಿಸಿ ತಲಾ 3 ಸಿಕ್ಸರ್ ಮತ್ತು ಬೌಂಡರಿ ನೆರವಿನಿಂದ 82 ರನ್ ಬಾರಿಸಿದರೆ, ವಿಲ್ ಯಂಗ್ 4 ಬೌಂಡರಿ ಮತ್ತು 2 ಸಿಕ್ಸರ್ ಸಿಡಿಸಿ 71 ರನ್ ಗಳಿಸಿದರು. ಉಭಯ ಆಟಗಾರರ ವಿಕೆಟ್ ಕೂಡ ಸುಂದರ್ ಪಾಲಾಯಿತು.
ಆರಂಭಿಕ ಎರಡು ಟೆಸ್ಟ್‌ನಲ್ಲಿ ನಿರೀಕ್ಷಿತ ಬೌಲಿಂಗ್ ದಾಳಿ ನಡೆಸುವಲ್ಲಿ ವಿಫಲವಾಗಿದ್ದ ರವೀಂದ್ರ ಜಡೇಜಾ ಈ ಪಂದ್ಯದಲ್ಲಿ ಶ್ರೇಷ್ಠ ಬೌಲಿಂಗ್ ನಡೆಸಿ 65 ರನ್ ವೆಚ್ಚದಲ್ಲಿ 5 ವಿಕೆಟ್ ಕಿತ್ತು ಮಿಂಚಿದರು. ವಾಷಿಂಗ್ಟನ್ ಸುಂದರ್ 81 ಕ್ಕೆ 4 ವಿಕೆಟ್ ಉರುಳಿಸಿದರು. ವೇಗಿ ಆಕಾಶ್ ದೀಪ್ 1 ವಿಕೆಟ್ ಪಡೆದರು.