ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನವಾಗಿದ್ದ ನಟ ದರ್ಶನ್ (Actor Darshan) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು. ತೀವ್ರ ಬೆನ್ನು ನೋವಿನ ಹಿನ್ನೆಲೆಯಲ್ಲಿ ಇದೀಗ ಅವರು ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ನಟ ದರ್ಶನ್‌ಗೆ ವೈದ್ಯಕೀಯ ಚಿಕಿತ್ಸೆಗಾಗಿ ಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನ್ ದಾಖಲಾಗಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ, ವೈದ್ಯರ ಸಲಹೆಯ ಮೇರೆಗೆ ಬೆಂಗಳೂರಿನ ಕೆಂಗೇರಿಯಲ್ಲಿರುವಂತ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ನಟ ದರ್ಶನ್ ಅವರು ದಾಖಲಾಗಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ದರ್ಶನ್ ಅವರನ್ನು ವಿವಿಧ ಪರೀಕ್ಷೆಗೆ ಒಳಪಡಿಸಲಿರುವಂತ ವೈದ್ಯರು, ಆ ಬಳಿಕ ಬೆನ್ನು ನೋವಿಗೆ ಶಸ್ತ್ರ ಚಿಕಿತ್ಸೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಬಿಜಿಎಸ್ ಆಸ್ಪತ್ರೆ ತಲುಪಿದ ದರ್ಶನ್ ಅವರನ್ನು ನೋಡುತ್ತಿದ್ದಂತೆ ಅಭಿಮಾನಿಗಳು ಜೈಕಾರ ಹಾಕಿದ್ದಾರೆ. ಕಾರು ಇಳಿದ ದರ್ಶನ್ ಬೆನ್ನು ನೋವಿನ ಹಿನ್ನೆಲೆ ನಿಧಾನವಾಗಿ ನಡೆದುಕೊಂಡು ನಟ ದರ್ಶನ್ ಆಸ್ಪತ್ರೆ ಒಳಗೆ ಹೋಗಿದ್ದಾರೆ. ಇನ್ನು ಬಿಜಿಎಸ್ ಆಸ್ಪತ್ರೆಗೆ ನಟಿ ಅಮೂಲ್ಯ ಪತಿ ಜಗದೀಶ್ ಹಾಗೂ ಅವರ ಮಾವ ರಾಮಚಂದ್ರ ಕೂಡ ಆಸ್ಪತ್ರೆಗೆ ತೆರಳಿದ್ದಾರೆ.
ದರ್ಶನ್‌ಗೆ ಸ್ಪೆಷಲ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇಬ್ಬರು ವೈದ್ಯರು ತಪಾಸಣೆಗೆ ಕರೆದೊಯ್ದಿದ್ದಾರೆ ಎನ್ನಲಾಗದೆ. ನರರೋಗ ತಜ್ಞ ನವೀನ್ ಅವರು ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಅವರಿಗೆ ಚಿಕಿತ್ಸೆ ನೀಡಲಿದ್ದು, ಮತ್ತೆ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಈ ಸುದ್ದಿಯನ್ನೂ ಓದಿ | Actor Darshan: ದರ್ಶನ್‌ಗೆ ಜಾಮೀನು ಸಿಕ್ಕಿದ್ದು ಖುಷಿ ತಂದಿದೆ: ಸಚಿವ ಜಮೀರ್ ಅಹ್ಮದ್
ನಟ ದರ್ಶನ್ ಅವರಿಗೆ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡಬೇಕು ಎಂದು ವಕೀಲರು ಕೋರ್ಟ್‌ನಲ್ಲಿ ಮನವಿ ಮಾಡಿದ್ದರು. ಆದರೆ, ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು 6 ವಾರಗಳ ಕಾಲ ಜಾಮೀನು ಮಂಜೂರು ಮಾಡಿದ ಕೋರ್ಟ್, ಮೈಸೂರಿಗೆ ಹೋಗುವ ಅವಕಾಶ ನೀಡಿರಲಿಲ್ಲ.
ನಟ ದರ್ಶನ್‌ಗೆ ವಿಪರೀತ ಬೆನ್ನುನೋವು ಕಾಣಿಸಿಕೊಂಡಿದೆ. ಎಲ್ 5,ಎಸ್ 1ನಲ್ಲಿ ಬಲ್ಜ್ ಆಗಿದ್ದು ಗಂಭೀರವಾದ ಸಮಸ್ಯೆ ಇದೆ. ಸ್ಪೈನಲ್ ಕಾರ್ಡ್‌ನಲ್ಲಿ ಸಮಸ್ಯೆ ಇದೆ. ಹೀಗಾಗಿ ದರ್ಶನ್‌ಗೆ ಸರ್ಜಿಕಲ್ ಚಿಕಿತ್ಸೆ ಅಗತ್ಯವಿದೆ. ಕನ್ಸರ್ವೇಟಿವ್ ಟ್ರೀಟ್‌ಮೆಂಟ್‌ನಿಂದ ನೋವು ಕಡಿಮೆ ಆಗಬಹುದು. ಆದರೆ ಸಮಸ್ಯೆ ಕ್ಲಿಯರ್ ಆಗಲ್ಲ. ಹೀಗಾಗಿ ಸರ್ಜಿಕಲ್ ಟ್ರೀಟ್‌ಮೆಂಟ್ ಅಗತ್ಯ ಇದೆ. ಈ ಸಮಸ್ಯೆ 2022ರಿಂದ ಇತ್ತು. ಆದರೆ ಇತ್ತೀಚೆಗೆ ಹೆಚ್ಚಾಗಿದೆ. ತಕ್ಷಣ ಚಿಕಿತ್ಸೆ ಪಡೆಯದಿದ್ದರೆ ಪ್ಯಾರಲಿಸಿಸ್ ಆಗುವ ಸಾಧ್ಯತೆ ಇದೆ. ಹೀಗಾಗಿ, ನಟ ದರ್ಶನ್ ಅವರ ಇಚ್ಛೆಯಂತೆ ಮೈಸೂರಿನ ಅಪೋಲೋ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅವಕಾಶ ನೀಡಬೇಕು ಎಂದು ನಟ ದರ್ಶನ್ ಪರ ವಕೀಲರಾದ ಸಿ.ವಿ. ನಾಗೇಶ್ ಅವರು ವಾದ ಮಂಡಿಸಿದ್ದರು.
ಆದರೆ, ಬೆಂಗಳೂರಿನಲ್ಲಿ ತಮ್ಮ ಇಚ್ಛೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಕೋರ್ಟ್ ಆದೇಶ ಹೊರಡಿಸಿದೆ. ಈ ಕೆಳಗಿನ ಶರತ್ತುಗಳನ್ನು ವಿಧಿಸಿತ್ತು:
ಈ ಸುದ್ದಿಯನ್ನೂ ಓದಿ | Actor Darshan: ದರ್ಶನ್ ಬೆಂಗಳೂರಲ್ಲೇ ಚಿಕಿತ್ಸೆ ಪಡೆಯಬೇಕು, ಮೈಸೂರಿಗೆ ಹೋಗುವಂತಿಲ್ಲ ಎಂದ ಕೋರ್ಟ್
ದರ್ಶನ್ ಶಸ್ತ್ರಚಿಕಿತ್ಸೆಗೆಂದು ಟ್ರಯಲ್ ಕೋರ್ಟ್ ವ್ಯಾಪ್ತಿ ಬಿಟ್ಟು ಬೇರೆಡೆ ಹೋಗುವಂತಿಲ್ಲ. ಆಸ್ಪತ್ರೆಗೆ ದಾಖಲಾದ ನಂತರವೇ ಒಂದು ವಾರದೊಳಗೆ ಕೋರ್ಟ್‌ಗೆ ಚಿಕಿತ್ಸಾ ಕ್ರಮದ ಬಗ್ಗೆ ಮಾಹಿತಿ ನೀಡಬೇಕು. ದರ್ಶನ್ ಮಾಧ್ಯಮಗಳಿಗೆ, ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡುವಂತಿಲ್ಲ. ಮಧ್ಯಂತರ ಜಾಮೀನು ಅವದಿ ಮುಗಿದ ಬಳಿಕ ಸೆಷನ್ಸ್ ಕೋರ್ಟ್ ಮುಂದೆ ದರ್ಶನ್ ಹಾಜರಾಗಬೇಕು. ಬೆಂಗಳೂರಿನ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ.