ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ (CP Yogeshwar) ಕುಟುಂಬಕ್ಕೆ ಸಂಬಂಧಿಸಿದಂತೆ ಸುದ್ದಿ ಪ್ರಸಾರಕ್ಕೆ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ಹೇರಿದೆ. ಸಿ.ಪಿ. ಯೋಗೇಶ್ವರ್ ಮತ್ತು ಶೀಲಾ ಯೋಗೇಶ್ವರ್ ಅವರ ಮನವಿ ಮೇರೆಗೆ ಕೋರ್ಟ್ ಆದೇಶ ಹೊರಡಿಸಿದೆ.
ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೆ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ಎಂದು ಸಾಮಾಜಿಕ ಜಾಲತಾಣಗಳು ಒಳಗೊಂಡಂತೆ ಎಲ್ಲಾ ಮಾಧ್ಯಮಗಳ ಮೇಲೆ ನಿರ್ಬಂಧ ವಿಧಿಸಲಾಗಿದ್ದು, ವಿವಿಧ ಸುದ್ದಿವಾಹಿನಿಗಳು, ವೆಬ್‌ಸೈಟ್ ಗಳು, ಯೂಟ್ಯೂಬ್ ವಾಹಿನಿಗಳಲ್ಲಿ ಈ ಹಿಂದೆ ಪ್ರಸಾರವಾಗಿದ್ದ ವಿಡಿಯೊಗಳು ಸ್ಥಗಿತಗೊಳಿಸಲು ಸೂಚಿಸಲಾಗಿದೆ.
ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೆ ಯಾವುದೇ ಸುದ್ದಿ ಪ್ರಸಾರ ಮಾಡಬಾರದು ಎಂದು ನ್ಯಾಯಪೀಠ ಆದೇಶಿಸಿದೆ.
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಸಿ.ಪಿ.ಯೋಗೇಶ್ವರ್ ಬಯಸಿದ್ದರು. ಆದರೆ, ಕಮಲ ಪಕ್ಷದಿಂದ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬೇಸರಗೊಂಡ ಅವರು ಕಾಂಗ್ರೆಸ್ ಸೇರಿ, ಚನ್ನಪಟ್ಟಣದ ಅಭ್ಯರ್ಥಿಯಾಗಿದ್ದಾರೆ. ಆದರೆ, ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿರುವ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಡಿ ರಹಸ್ಯ ಇದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ (Nisha Yogeshwar) ಪ್ರತಿಕ್ರಿಯಿಸಿ, ಈ ಆರೋಪಗಳಿಗೆ ನೀವು ಸ್ಪಷ್ಟನೆ ನೀಡಬೇಕಿದೆ. ನನ್ನ ಸಿಡಿ ನಿಮ್ಮ ಬಳಿ ಇದ್ದರೆ ಯಾವುದೇ ರೀತಿ ಯೋಚನೆ ಮಾಡದೇ ರಿಲೀಸ್ ಮಾಡಿ ಡಿಕೆಶಿಯವರಿಗೆ ಆಗ್ರಹಿಸಿದ್ದರು. ಚುನಾವಣೆ ಸಂದರ್ಭದಲ್ಲಿ ವೈಯಕ್ತಿಕ ವಿಷಯಗಳು ಹರಿದಾಡುತ್ತಿದ್ದರಿಂದ ತಮ್ಮ ಕುಟುಂಬದ ಬಗ್ಗೆ ಸುದ್ದಿ ಪ್ರಸಾರಕ್ಕೆ ಯೋಗೇಶ್ವರ್ ನಿರ್ಬಂಧ ತಂದಿದ್ದಾರೆ.
ಈ ಸುದ್ದಿಯನ್ನೂ ಓದಿ | Deepavali Safety: ದೀಪಾವಳಿ ಸಂದರ್ಭದಲ್ಲಿ ಮಕ್ಕಳಿಗೆ ಈ ಸಮಸ್ಯೆ ಕಾಡಬಹುದು, ಎಚ್ಚರ ವಹಿಸಿ