Thursday, 21st November 2024

Crackers Accident: ಪಟಾಕಿ ಸಿಡಿದು ಕಣ್ಣಿಗೆ ಹಾನಿ, 54 ಜನ ಆಸ್ಪತ್ರೆಗೆ; ನೋಡಿದವರಿಗೇ ಹೆಚ್ಚು ಗಾಯ!

Deepavli 2024

ಬೆಂಗಳೂರು: ದೀಪಾವಳಿಯ (Deepavali 2024) ಸಂದರ್ಭದಲ್ಲಿ ಪಟಾಕಿ ಅವಘಡಗಳಿಂದ (Crackers Accident) ಕಣ್ಣಿಗೆ ಹಾನಿಯಾಗುತ್ತಿರುವ (Eye injury) ಪ್ರಕರಣಗಳು ನಗರದಲ್ಲಿ (Bengaluru news) ಹೆಚ್ಚಾಗುತ್ತಲೇ ಇವೆ. ಶುಕ್ರವಾರ ಒಂದೇ ದಿನ ಕಣ್ಣಿನ ತೊಂದರೆಗೆ ಒಳಗಾದ ಪ್ರಕರಣ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ಬಹುತೇಕರು ಬೇರೆಯವರು ಸಿಡಿಸಿರುವ ಪಟಾಕಿಯಿಂದ ಕಣ್ಣಿನ ಗಾಯಕ್ಕೊಳಗಾಗಿದ್ದಾರೆ ಎನ್ನುವುದು ಕಳವಳಕಾರಿ ಸಂಗತಿ.

ರಾಜ್ಯ ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ಹಲವು ಇಲಾಖೆಗಳು ಸಂಘ ಸಂಸ್ಥೆಗಳು ಪಟಾಕಿ ಹಚ್ಚುವ ವೇಳೆ ಮುಂಜಾಗೃತಾ ಕ್ರಮ ವಹಿಸುವಂತೆ ಜಾಗೃತಿ ಮೂಡಿಸಿದ್ದರೂ ಪಟಾಕಿ ದುರಂತಗಳು ಸಂಭವಿಸುತ್ತಲೇ ಇವೆ.

ವರದಿಯಂತೆ ಓರ್ವ ವಯಸ್ಕ ಸೇರಿದಂತೆ 10 ಮಕ್ಕಳು ಪಟಾಕಿ ಅವಘಡಗಳಿಗೆ ತುತ್ತಾಗಿ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. 6 ಮಂದಿ ಒಪಿಡಿ ಹಾಗೂ 4 ಮಂದಿ ನಾನ್ ಒಪಿಡಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಒಂದು ಮಗುವಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಇನ್ನು ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಶುಕ್ರವಾರ ಪಟಾಕಿ ಅವಘಡಕ್ಕೆ ಸಂಬಂಧಿಸಿದಂತೆ 12 ಪ್ರಕರಣ ವರದಿಯಾಗಿದೆ. ಅದರಲ್ಲಿ 8 ಮಕ್ಕಳು ಹಾಗೂ 4 ವಯಸ್ಕರು ಇದ್ದಾರೆ. ಕಾರ್ನಿಯಾ ಗಾಯ ಸೇರಿದಂತೆ ಇತರ ಗಂಭೀರ ಗಾಯಗಳಾಗಿರುವುದು ವರದಿಯಾಗಿದೆ.

ಉಳಿದಂತೆ ಅಗರ್ವಾಲ್ ಕಣ್ಣಿನ ಆಸ್ಪತ್ರೆಯಲ್ಲಿ 9 ಹಾಗೂ ನಾರಾಯಣ ನೇತ್ರಾಲಯದ ರಾಜಾಜಿನಗರ ಶಾಖೆಯಲ್ಲಿ 11, ಬೊಮ್ಮಸಂದ್ರ ಶಾಖೆಯಲ್ಲಿ 4, ಇಂದಿರಾನಗರದಲ್ಲಿ 5 ಮತ್ತು ಬನ್ನೇರುಘಟ್ಟ ಶಾಖೆಯಲ್ಲಿ 3 ಪ್ರಕರಣಗಳು ಸೇರಿದಂತೆ ಒಟ್ಟು 23 ಪ್ರಕರಣಗಳು ದಾಖಲಾಗಿದೆ.

ಇದನ್ನೂ ಓದಿ: Murder Case: ಮನೆ ಮುಂದೆ ಪಟಾಕಿ ಹಚ್ಚಬೇಡಿ ಎಂದಿದ್ದಕ್ಕೆ ವ್ಯಕ್ತಿಯ ಬರ್ಬರ ಕೊಲೆ; ಐವರು ವಶಕ್ಕೆ