ಗುಬ್ಬಿ: ಗ್ರಾಮೀಣ ಭಾಗದ ಕನಿಷ್ಠ ವಿದ್ಯಾಭ್ಯಾಸದ ಯುವಕ ಯುವತಿಯರಿಗೆ ಕಂಪ್ಯೂಟರ್ ತರಬೇತಿ ನೀಡಿ ತಮ್ಮ ಕಂಪೆನಿಯಲ್ಲಿ ಉದ್ಯೋಗ ನೀಡಿದ ಮೀಡಿಯಾ ಬ್ಯಾಕ್ ಆಫೀಸ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಎಸ್.ರಘು ಅವರಿಗೆ ಉದ್ಯೋಗದಾತ ಎಂಬ ಬಿರುದು ಬಿನ್ನವತ್ತಳೆ ಪ್ರದಾನ ಮಾಡಲಾಯಿತು.
ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶ್ರೀ ಚನ್ನಬಸವೇಶ್ವರ ಯುವಕ ಸಂಘ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಗೆಳೆಯರ ಬಳಗ ವತಿಯಿಂದ ನಡೆದ ಮಹಿಳಾ ಕಬಡ್ಡಿ ಕ್ರೀಡಾಕೂಟದಲ್ಲಿ ವಿಶೇಷ ಸನ್ಮಾನ ಕಾರ್ಯಕ್ರಮ ಆಯೋಜಿಸಿ ಗ್ರಾಮೀಣ ಭಾಗದಲ್ಲಿ ಸಾಫ್ಟ್ ವೇರ್ ಕಂಪೆನಿ ತೆರೆದು 300 ಮಂದಿಗೆ ಉದ್ಯೋಗ ಸೃಷ್ಟಿಸಿದ ಎಸ್.ರಘು ಅವರ ಸಾಮಾಜಿಕ ಕಳಕಳಿ ಹಾಗೂ ಸೇವೆ ಗುರುತಿಸಿ ರಾಜ್ಯೋತ್ಸವ ಅಂಗವಾಗಿ ಬಿನ್ನವತ್ತಳೆ ನೀಡಿ ಉದ್ಯೋಗದಾತ ಎಂಬ ಬಿರುದು ತಹಶೀಲ್ದಾರ್ ಬಿ.ಆರತಿ ಅವರು ಪ್ರದಾನ ಮಾಡಿದರು.
ಬಿರುದು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಎಸ್.ರಘು, ನಗರದಲ್ಲಿ ಸಾಫ್ಟ್ ವೇರ್ ಕಂಪೆನಿ ನಡೆಸುವುದು ಸರ್ವೇ ಸಾಮಾನ್ಯ. ಆದರೆ ಗ್ರಾಮೀಣ ಭಾಗದಲ್ಲಿ ಕನಿಷ್ಠ ವಿದ್ಯಾರ್ಹತೆಯ ಯುವಕರಿಂದ ಕಂಪೆನಿ ನಡೆಸುವುದು ಚಾಲೆಂಜ್ ಎನಿಸಿತ್ತು. ಆದರೆ ನಮ್ಮ ತಾಲ್ಲೂಕಿನ ಯುವಕ ಯುವತಿಯರಿಗೆ ಕಂಪ್ಯೂಟರ್ ತರಬೇತಿ ಜೊತೆ ಉದ್ಯೋಗ ನೀಡಿದ ತೃಪ್ತಿ ನನ್ನಲಿದೆ. ನನ್ನ ಕಳಕಳಿಯನ್ನು ಅರ್ಥೈಸಿಕೊಂಡು ಕೆಲ ಸಂಘಟನೆಗಳು ನನ್ನ ಗುರುತಿಸಿ ಸನ್ಮಾನಿಸಿದೆ. ಈ ಗೌರವ ಪಡೆದು ಮತ್ತಷ್ಟು ಜವಾಬ್ದಾರಿ ಹೆಚ್ಚಿದೆ ಎಂದು ತಮ್ಮ ಅನುಭವ ಹಂಚಿಕೊಂಡರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಬಿ.ಆರತಿ, ಪಪಂ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ಮಮತಾ, ಮುಖ್ಯಾಧಿಕಾರಿ ಮಂಜುಳಾದೇವಿ, ಪ್ರಾಂಶುಪಾಲ ಪ್ರಸನ್ನಕುಮಾರ್, ಆಡಳಿತ ವೈದ್ಯಾಧಿಕಾರಿ ಡಾ.ಕೇಶವರಾಜ್, ಶ್ರೀ ಚನ್ನಬಸವೇಶ್ವರ ಯುವಕ ಸಂಘ ಪ್ರಧಾನ ಕಾರ್ಯದರ್ಶಿ ಸಿ.ಆರ್.ಶಂಕರ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್, ಸಾಮಾಜಿಕ ಕಾರ್ಯಕರ್ತರಾದ ಜಿ.ಆರ್.ರಮೇಶ್, ಜಿ.ಎಸ್.ಮಂಜುನಾಥ್, ಸುರಿಗೇನಹಳ್ಳಿ ರಂಗನಾಥ್,ಎಂ.ಎಸ್.ದೇವರಾಜ್, ಜಿ ಎಲ್ ರಂಗನಾಥ್, ಅರ್ಜುನ್, ರವಿಕಿರಣ್, ಇತರರು ಇದ್ದರು.