ಡೆಹ್ರಾಡೂನ್: ಉತ್ತರಾಖಂಡ(Uttarakhand)ದ ಅಲ್ಮೋರಾ ಜಿಲ್ಲೆಯ ರಾಮನಗರ ಬಳಿ ಬಸ್ ಕಮರಿಗೆ(Bus Accident) ಬಿದ್ದ ಪರಿಣಾಮ ಕನಿಷ್ಠ 40 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿ ನಿಗದಿ ಪ್ರಮಾಣಕ್ಕಿಂತ ಹೆಚ್ಚು ಜನ ಇದ್ದರು ಎನ್ನಲಾಗಿದೆ. ಇನ್ನು ಮೃತಪಟ್ಟವರಲ್ಲಿ ಹಲವಾರು ಮಕ್ಕಳು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಸ್ ಗರ್ವಾಲ್‌ನಿಂದ ಕುಮಾನ್‌ಗೆ ಹೋಗುತ್ತಿದ್ದಾಗ ಅಲ್ಮೋರಾದ ಮಾರ್ಚುಲಾದಲ್ಲಿ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಲೋಕ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
#WATCH | Uttarakhand: A Garwal Motors Users' bus fell into a gorge near Kupi in Ramnagar at Pauri-Almora border. Deaths and injuries feared. Search and rescue operation underway. Details awaited.
— ANI (@ANI) November 4, 2024
(Video: SDRF) pic.twitter.com/dzSgKw6tkF
ಬಸ್ 200 ಮೀಟರ್ ಆಳದ ಕಮರಿಗೆ ಬಿದ್ದಿದ್ದು, ಅದರಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ತಕ್ಷಣ ರಕ್ಷಣಾ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಪಾಂಡೆ ಮಾಹಿತಿ ನೀಡಿದ್ದಾರೆ.
ಸಿಎಂ ಧಾಮಿ ಪ್ರತಿಕ್ರಿಯೆ
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಅಪಘಾತದ ಬಗ್ಗೆ ಗಮನ ಹರಿಸಿದ್ದು, ಪರಿಹಾರ ಕಾರ್ಯಾಚರಣೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಆಡಳಿತಕ್ಕೆ ಸೂಚಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಪ್ರಯಾಣಿಕರನ್ನು ಏರ್ ಲಿಫ್ಟ್ ಮಾಡುವಂತೆಯೂ ಸೂಚನೆ ನೀಡಿದರು.
“ಅಲ್ಮೋರಾ ಜಿಲ್ಲೆಯ ಮಾರ್ಚುಲಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಪ್ರಯಾಣಿಕರ ಸಾವುನೋವುಗಳ ಬಗ್ಗೆ ದುರದೃಷ್ಟಕರ ಸುದ್ದಿ ಬಂದಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಸ್ಥಳೀಯ ಆಡಳಿತ ಮತ್ತು SDRF ತಂಡಗಳು ಅಪಘಾತದ ಸ್ಥಳದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಗಾಯಗೊಂಡವರನ್ನು ಸ್ಥಳಾಂತರಿಸಲು ಮತ್ತು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಸಾಗಿಸಲು, ಅಗತ್ಯವಿದ್ದರೆ ತೀವ್ರವಾಗಿ ಗಾಯಗೊಂಡ ಪ್ರಯಾಣಿಕರನ್ನು ಏರ್‌ಲಿಫ್ಟ್ ಮಾಡಲು ಸಹ ಸೂಚನೆಗಳನ್ನು ನೀಡಲಾಗಿದೆ” ಎಂದು ಧಮಿ ಟ್ವೀಟ್ ಮಾಡಿದ್ದಾರೆ.
जनपद अल्मोड़ा के मार्चुला में हुई दुर्भाग्यपूर्ण बस दुर्घटना में यात्रियों के हताहत होने का अत्यंत दुःखद समाचार प्राप्त हुआ। जिला प्रशासन को तेजी के साथ राहत एवं बचाव अभियान चलाने के निर्देश दिए हैं।
— Pushkar Singh Dhami (@pushkardhami) November 4, 2024
घटनास्थल पर स्थानीय प्रशासन एवं SDRF की टीमें घायलों को निकालकर उपचार के लिए…
ಈ ಸುದ್ದಿಯನ್ನೂ ಓದಿ: Road Accident: ಕೋಲಾರದಲ್ಲಿ ಭೀಕರ ಅಪಘಾತ; ಡಿವೈಡರ್ ಮೇಲೆ ನಿಂತಿದ್ದಾಗ ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ