ಬೆಂಗಳೂರು: ಈ ಬಾರಿಯ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅವಘಡಗಳಿಂದ (Firecracker accident) ನಗರದಲ್ಲಿ 145ಕ್ಕೂ ಹೆಚ್ಚು ಮಂದಿ ಕಣ್ಣಿಗೆ ಗಾಯಗಳಾಗಿರುವುದು ಕಂಡುಬಂದಿದೆ. ಈ ನಡುವೆ ಬೆಂಗಳೂರಿನಲ್ಲಿ ಪಟಾಕಿ ದುರಂತದಿಂದ ರಾಜ್ಯದಲ್ಲೇ ಮೊದಲ ಬಲಿಯಾಗಿರುವುದು ವರದಿಯಾಗಿದೆ. ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ಅವಘಡ ನಡೆದಿದ್ದು, ಯುವಕನ ಸಾವಿಗೆ ಕಾರಣರಾದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಬರೀಶ್ ಮೃತ ಯುವಕ. ದೀಪಾವಳಿ ಹಬ್ಬದಂದು ಶಬರೀಶ್ ಹಾಗೂ ಸ್ನೇಹಿತರು ಪಟಾಕಿ ಹೊಡೆಯುತ್ತಿದ್ದರು. ಈ ವೇಳೆ ಡಬ್ಬದೊಳಗೆ ಪಟಾಕಿ ಹಚ್ಚುತ್ತೇವೆ, ಅದರ ಮೇಲೆ ನೀನು ಕುಳಿತುಕೋ ನೋಡೋಣ ಎಂದು ಶಬರೀಶ್‌ಗೆ ಸ್ನೇಹಿತರು ಚಾಲೆಂಜ್ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿ ಶಬರೀಶ್, ಪಟಾಕಿ ಹಚ್ಚಿದ್ದ ಡಬ್ಬದ ಮೇಲೆ ಕುಳಿತಿದ್ದ. ಈ ವೇಳೆ ಪಟಾಕಿ ಸ್ಫೋಟದ ತೀವ್ರತೆಗೆ ಶಬರೀಶ್ ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ನ. 2ರಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಯುವಕ ಮೃತಪಟ್ಟಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.
ದೀಪಾವಳಿ ದಿನದಂದು ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕ ಬಲಿಯಾದ ಘಟನೆ ಬೆಳಕಿಗೆ ಬಂದಿದೆ. ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ.#Deepavali2024 #Firecrackers #bengaluru pic.twitter.com/pm1AuDCJlP
— Harshith Achrappady (@HAchrappady) November 4, 2024
ಈ ಸುದ್ದಿಯನ್ನೂ ಓದಿ | Narayana Yaji Column: ಬಾಹುಬಲದಲ್ಲಿ ಸೋತ ರಾವಣ ಮತಿಯಿಂದ ವಾಲಿಯನ್ನು ಗೆದ್ದ
ಕಾರು ಡಿಕ್ಕಿಯಾಗಿ ಮಹಿಳಾ ಟೆಕ್ಕಿ ಸಾವು
ಬೆಂಗಳೂರು: ಬೆಂಜ್ ಕಾರ್ ಡಿಕ್ಕಿ ಹೊಡೆದ (Road Accident) ಪರಿಣಾಮ ಸಾಫ್ಟ್‌ವೇರ್ ಇಂಜಿನಿಯರ್ (Software Engineer) ಮೃತಪಟ್ಟ ಘಟನೆ ಬೆಂಗಳೂರು -ಮೈಸೂರು ರಸ್ತೆಯ (Bengaluru news) ಕೆಂಗೇರಿ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಬಸವೇಶ್ವರನಗರ ನಿವಾಸಿ, ಸಾಫ್ಟ್‌ವೇರ್ ಇಂಜಿನಿಯರ್ ಸಂಧ್ಯಾ(30) ಮೃತಪಟ್ಟವರು. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಜ್ ಕಾರ್ ಚಾಲಕ ನಾಗರಭಾವಿ ನಿವಾಸಿ ಧನುಷ್ ನನ್ನು ಪೊಲೀಸರು ಬಂಧಿಸಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಂಧ್ಯಾ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಕೆಂಗೇರಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರ್ ಅನ್ನು ಜಪ್ತಿ ಮಾಡಿದ್ದಾರೆ. ಧನುಷ್‌ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಮದ್ಯ ಸೇವಿಸಿರುವುದು ಧೃಡಪಟ್ಟಿದೆ. ಮದ್ಯದ ಅಮಲಿನಲ್ಲಿ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಕಾರ್ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.