ಬೆಂಗಳೂರು: ರಾಜ್ಯದಲ್ಲಿ ನವೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ (Karnataka Rain) ಸಾಧ್ಯತೆಗಳಿವೆ. ನವೆಂಬರ್‌ನಲ್ಲಿ ವಾಡಿಕೆಯಾಗಿ ಸರಾಸರಿ 4.2 ಸೆಂ.ಮೀ. ಮಳೆಯಾಗುತ್ತಿತ್ತು, ಈ ಬಾರಿ ಇದಕ್ಕಿತ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ರಾಜ್ಯದಲ್ಲಿ ಕೆಲದಿನಗಳಿಂದ ತುಸು ಬಿಡುವು ನೀಡಿದ್ದ ಹಿಂಗಾರು ಮಳೆ, ಮತ್ತೆ ಆರ್ಭಟಿಸುವ ಮುನ್ಸೂಚನೆ ಸಿಕ್ಕಿದೆ.
ಇನ್ನು ನವೆಂಬರ್ ತಿಂಗಳಲ್ಲಿ ಸಂಭಾವ್ಯ ಗರಿಷ್ಠ ತಾಪಮಾನ ಮುನ್ಸೂಚನೆ ಅನ್ವಯ ರಾಜ್ಯದಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳ ಮೇಲೆ ಸಾಮಾನ್ಯಕ್ಕಿಂತ ಕಡಿಮೆ, ಮತ್ತು ಕರ್ನಾಟಕ ರಾಜ್ಯದ ದಕ್ಷಿಣ ಒಳಭಾಗ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಜಿಲ್ಲೆಗಳ ಮೇಲೆ ಸಾಮಾನ್ಯಕ್ಕಿಂತ ಹೆಚ್ಚು ಉಂಟಾಗುವ ಸಾಧ್ಯತೆಗಳಿದೆ. ಅದೇ ರೀತಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಾಸಿಕ ಸಂಭಾವ್ಯ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಇಲಾಖೆ ತಿಳಿಸಿದೆ.
@Indiametdept ಪತ್ರಿಕಾ ಪ್ರಕಟಣೆ ನವೆಂಬರ್ ತಿಂಗಳಿಗೆ ಮಳೆ ಮತ್ತು ತಾಪಮಾನ ಮುನ್ಸೂಚನೆ#ಮಳೆ #ಮುನ್ಸೂಚನೆ: ರಾಜ್ಯದಾದ್ಯಂತ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ#ಕನಿಷ್ಠ ಮತ್ತು #ಗರಿಷ್ಠ #ತಾಪಮಾನ #ಮುನ್ಸೂಚನೆ: ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ #ಗರಿಷ್ಠ ತಾಪಮಾನವು ವಾಡಿಕೆಗಿಂತ ಕಡಿಮೆ ಇರುವ ಸಾಧ್ಯತೆಯಿದೆ. pic.twitter.com/eVJlVncMdb
— Karnataka State Natural Disaster Monitoring Centre (@KarnatakaSNDMC) November 4, 2024
ಈ ಸುದ್ದಿಯನ್ನೂ ಓದಿ | Google Maps: 2 ಶತಕೋಟಿ ಬಳಕೆದಾರರ ಮೂಲಕ ನಂ. 1 ನ್ಯಾವಿಗೇಷನ್ ಆ್ಯಪ್ ಪಟ್ಟಕ್ಕೇರಿದ ಗೂಗಲ್ ಮ್ಯಾಪ್
ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವೆಡೆ ಗುಡುಗು ಸಹಿತ ಮಳೆ
ನ.5ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವಾಮಾನದ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನ.6 ಮತ್ತು 7ರಂದು ಒಳನಾಡಿನ ಜಿಲ್ಲೆಗಳಲ್ಲಿ ಒಣಗಳವೆಯಿರುವ ಸಾಧ್ಯತೆ ಇದೆ. ಹಾಗೆಯೇ ನ.8ರಂದು ಚಿಕ್ಕಮಗಳೂರು, ಕೊಡಗು, ಚಾಮರಾಜನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ನ. 9ರಂದು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಎಂದು ಮುನ್ಸೂಚನೆ ನೀಡಿದೆ.