Tuesday, 5th November 2024

Karnataka Rain: ನ.8ರಿಂದ ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ ಶುರು; ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

Karnataka Rain: ನ.8ರಿಂದ ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ ಶುರು; ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ (Karnataka Rain) ಮತ್ತೆ ಚುರುಕು ಪಡೆಯುವ ಮುನ್ಸೂಚನೆ ಸಿಕ್ಕಿದ್ದು, ನವೆಂಬರ್‌ 8 ರಿಂದ ರಾಜ್ಯದ ವಿವಿಧೆಡೆ ಭಾರಿಯಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದ್ದು, ನಂತರ ನ.8ರಂದು ಬೆಂಗಳೂರು, ಮೈಸೂರು, ಕೋಲಾರ ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ಈ ಬಗ್ಗೆ ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನ.8ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ನ.9ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ನ.10ರಂದು ಕೂಡ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಮುಂತಾದ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇದೇ ರೀತಿಯ ಹವಾಮಾನ ನ.11ರಂದೂ ಮುಂದುವರಿಯಲಿದೆ.

ನ.7ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ತುಂಬಾ ಸಾಧ್ಯತೆ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 20 ° C ಆಗಿರಬಹುದು.

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ತುಂಬಾ ಸಾಧ್ಯತೆ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 20 ° C ಇರಬಹುದು.