Thursday, 26th December 2024

Lakshmi Hebbalkar: ತಹಸೀಲ್ದಾರ್‌ ಕಚೇರಿ ಸಿಬ್ಬಂದಿ ಆತ್ಮಹತ್ಯೆ ಪ್ರಕರಣ; ನಿಷ್ಪಕ್ಷಪಾತ ತನಿಖೆ ಆಗಲಿ ಎಂದ ಹೆಬ್ಬಾಳ್ಕರ್

Lakshmi Hebbalkar

ಬೆಳಗಾವಿ: ಬೆಳಗಾವಿಯ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರುದ್ರಣ್ಣ ಯಡವಣ್ಣವರ ಸಾವಿನ ವಿಷಯ ಅತ್ಯಂತ ದುಃಖ ತರುವಂತಹದು. ಇದೊಂದು ದುರದೃಷ್ಟಕರ ಘಟನೆ. ಇಂತಹ ಘಟನೆಗಳು ನಡೆಯಬಾರದು. ರುದ್ರಣ್ಣವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅವರು ಹೇಳಿದರು.

ಈ ಸುದ್ದಿಯನ್ನೂ ಓದಿ | CM Siddaramaiah: ಮುಡಾ ಹೆಸರಲ್ಲಿ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ; ಸಿದ್ದರಾಮಯ್ಯ ಬೇಸರ

ಸತ್ಯಾಸತ್ಯತೆ ಜನರಿಗೆ ತಿಳಿಯಬೇಕು

ರುದ್ರಣ್ಣ ಸಾವಿನ ಘಟನೆ ಬಗ್ಗೆ ಮಾಧ್ಯಮಗಳಿಂದ ನಾನು ತಿಳಿದಿದ್ದೇನೆ. ಈ ಬಗ್ಗೆ ನನಗೂ ಹೆಚ್ಚೇನು ಮಾಹಿತಿ ಇಲ್ಲ. ಈ ಸಾವಿನ ಹಿಂದೆ ಲಕ್ಷ್ಮೀ ಹೆಬ್ಬಾಳಕರ್ ಪಾತ್ರವಿಲ್ಲವೆಂದು ಅವರೇ ಹೇಳಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಏನೂ ಗೊತ್ತಿಲ್ಲ ಎಂದಿರುವ ವೀಡಿಯೊವನ್ನು ಮಾಧ್ಯಮಗಳ ಮೂಲಕ ಗಮನಿಸಿದ್ದೇನೆ. ಈ ಬಗ್ಗೆ ಸತ್ಯಾಸತ್ಯತೆ ಜನರಿಗೆ ತಿಳಿಯಬೇಕು. ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು.

ರುದ್ರಣ್ಣವರ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿಯವರಿಗೆ ಪ್ರತಿಭಟನೆ ಮಾಡಬೇಡಿ ಎಂದು ಹೇಳಲು ಆಗುವುದಿಲ್ಲ. ಆದರೆ ಈ ವಿಷಯವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಬಾರದು. ಸ್ವತಃ ರುದ್ರಣ್ಣನವರೇ ಹೇಳಿದ್ದಾರೆ ಈ ಬಗ್ಗೆ ಮೇಡಂ ಅವರ ಪಾತ್ರವಿಲ್ಲವೆಂದು. ಆದರೂ ವ್ಯರ್ಥ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | KPSC Jobs: ಮೋಟಾರ್‌ ವೆಹಿಕಲ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಆದಷ್ಟು ಬೇಗ ತನಿಖೆಯಾಗಲಿ

ಈ ಹಿಂದಿನ ಈಶ್ವರಪ್ಪನವರ ಪ್ರಕರಣಕ್ಕೂ ಮತ್ತು ಈ ಪ್ರಕರಣಕ್ಕೂ ಬಹಳ ವ್ಯತ್ಯಾಸವಿದೆ. ಈ ಸಾವಿನ ಪ್ರಕರಣ ಆದಷ್ಟು ಬೇಗ ತನಿಖೆಯಾಗಲಿ. ನಿಷ್ಪಕ್ಷಪಾತವಾದ ತನಿಖೆ ಆಗಬೇಕೆಂದು ಪೊಲೀಸ್ ತನಿಖಾಧಿಕಾರಿಗಳಿಗೂ ಮನವಿ ಮಾಡುತ್ತೇನೆ. ಸಾವಿಗೀಡಾದ ನೌಕರನ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.