Thursday, 7th November 2024

IT Raid: ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವು ಕಂಪನಿಗಳ ಮೇಲೆ ಐಟಿ ದಾಳಿ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ (Bengaluru news) ಕೆಲವು ಕಂಪನಿಗಳ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ತಂಡವು ದಾಳಿ (Bengaluru IT Raid) ನಡೆಸಿದೆ. ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಇಂದು ಬೆಳಗ್ಗೆ ಬೆಂಗಳೂರಿನ ಕೆಲವು ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದೆಹಲಿ ಮತ್ತು ಮುಂಬೈ ಮೂಲದ ಕಂಪನಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಇವುಗಳ ಬೆಂಗಳೂರಿನ ಬ್ರ್ಯಾಂಚ್ ಆಫೀಸ್‌ಗಳಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಚನ್ನಪಟ್ಟಣ, ಶಿಗ್ಗಾಂವಿ ಸೇರಿದಂತೆ ರಾಜ್ಯದ ಮೂರು ಕಡೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗೂ ಈ ಐಟಿ ದಾಳಿಗೂ ಸಂಬಂಧವಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಾಗಿ ಜ್ಯುವೆಲ್ಲರಿಗಳು ತೆರಿಗೆ ಹಣವನ್ನು ವಂಚಿಸುತ್ತಿದ್ದು , ಇವು ಐಟಿ ದಾಳಿಗಳಿಗೆ ಪದೇ ಪದೆ ತುತ್ತಾಗುತ್ತಿವೆ.

ಪವಿತ್ರಾ ಗೌಡ ಸೇರಿ 4 ಮಂದಿ ಜಾಮೀನು ಅರ್ಜಿ ವಿಚಾರಣೆ ಇಂದು

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ (Renuka swamy murder case) ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ನಾಲ್ವರು ಆರೋಪಿಗಳ ಜಾಮೀನು ಅರ್ಜಿ (Bail plea) ವಿಚಾರಣೆ ಇಂದು ನಡೆಯಲಿದೆ. ಹೈಕೋರ್ಟ್​​ನ (Karnataka High court) ಏಕಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬರಲಿದೆ.

ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ (Pavithra Gowda), ಅನುಕುಮಾರ್​​ ಸೇರಿ ನಾಲ್ವರು ಕೊಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಪವಿತ್ರಾ ಗೌಡ ಮೊದಲ ಆರೋಪಿ ಆಗಿದ್ದಾಳೆ. ಇವರ ಜಾಮೀನು ಅರ್ಜಿಯನ್ನು ಸೆಷನ್ಸ್‌ ಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ನಂತರ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್​ಗೆ ಹೋಗಿದ್ದರು.

ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ಗೆ (Actor Darshan) ಈಗಾಗಲೇ ಜಾಮೀನು ದೊರೆತಿದೆ. ಬೆನ್ನು ನೋವಿಗೆ ಸರ್ಜಿಕಲ್‌ ಚಿಕಿತ್ಸೆ ಅಗತ್ಯವಿರುವುದರಿಂದ ಜಾಮೀನು ನೀಡಬೇಕು ಎಂದು ದರ್ಶನ್‌ ವಕೀಲರು ವಾದಿಸಿದ್ದರು. ಹೀಗಾಗಿ, ಚಿಕಿತ್ಸೆಗಾಗಿ ಹೈಕೋರ್ಟ್‌ 6 ವಾರಗಳ ಜಾಮೀನು ನೀಡಿದೆ. ದರ್ಶನ್‌ ಅವರು ಬೆಂಗಳೂರಿನ ನ್ಯಾಯಾಲಯದ ವ್ಯಾಪ್ತಿಯಲ್ಲಿರುವ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಇದನ್ನೂ ಓದಿ: Job Guide: ಐಟಿಐ, ಡಿಪ್ಲೊಮಾ ವಿದ್ಯಾರ್ಹತೆ ಹೊಂದಿದವರಿಗೆ ಗುಡ್‌ನ್ಯೂಸ್‌; ಸೀಡ್ಸ್‌ ಕಾರ್ಪೋರೇಷನ್‌ನಲ್ಲಿದೆ 188 ಹುದ್ದೆ