ಬೆಂಗಳೂರು: ಬ್ಯಾಂಕ್ನಲ್ಲಿ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕ ಯುವ ಜನತೆಯ ಕನಸು. ಇದೀಗ ಆ ಕನಸನ್ನು ನನಸಾಗಿಸುವ ಅವಕಾಶ ಒದಗಿ ಬಂದಿದೆ. ಭಾರತದ ಪ್ರಮುಖ ಬ್ಯಾಂಕ್ಗಳಲ್ಲಿ ಒಂದಾದ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (Industrial Development Bank of India) ಖಾಲಿ ಇರುವ ಬರೋಬ್ಬರಿ 1,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IDBI Bank Recruitment 2024). ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು. ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಯಲಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನ. 16 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಎಕ್ಸಿಕ್ಯುಟಿವ್ (ಸೇಲ್ಸ್ ಮತ್ತು ಆಪರೇಷನ್ಸ್) (Executive (Sales and Operations) ಹುದ್ದೆ ಇದಾಗಿದ್ದು, ದೇಶದ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವ ವಿದ್ಯಾನಿಲಯದಿಂದ ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸ್ಥಳ: ಭಾರತಾದ್ಯಂತ.
ವಯೋಮಿತಿ
IDBI Bank Recruitment 2024 ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಟ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಎಸ್ಸಿ/ಎಸ್ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು 250 ರೂ. ಮತ್ತು ಇತರ ಎಲ್ಲ ಅಭ್ಯರ್ಥಿಗಳು 1,050 ರೂ. ಪಾವತಿಸಬೇಕು. ಪಾವತಿ ವಿಧಾನ: ಆನ್ಲೈನ್.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಆನ್ಲೈನ್ ಟೆಸ್ಟ್, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನ ಮತ್ತು ಪ್ರಿರಿಕ್ರೂಟ್ಮೆಂಟ್ ಮೆಡಿಕಲ್ ಟೆಸ್ಟ್ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 29,000 ರೂ. – 31,000 ರೂ. ಮಾಸಿಕ ವೇತನ ದೊರೆಯಲಿದೆ. ಡಿ. 1ರಂದು ಆನ್ಲೈನ್ ಟೆಸ್ಟ್ ನಡೆಯುವ ಸಾಧ್ಯತೆ ಇದೆ.
IDBI Bank Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://ibpsonline.ibps.in/idbesooct24/)
- ಹೆಸರು ನೋಂದಾಯಿಸಿ.
- ಹೊಸ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ಅಗತ್ಯ ದಾಖಲೆ, ಫೋಟೊಗಳನ್ನು ಸರಿಯಾದ ಅಳತೆಯಲ್ಲಿ ಅಪ್ಲೋಡ್ ಮಾಡಿ.
- ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಅಪ್ಲಿಕೇಷನ್ ನಂಬರ್ ಅಥವಾ ರಿಕ್ವೆಸ್ಟ್ ನಂಬರ್ ನೋಟ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಬ್ಯಾಂಕ್ನ ಅಧಿಕೃತ ವೆಬ್ಸೈಟ್ ವಿಳಾಸ: idbibank.inಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: KPSC Jobs: ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ