ಮುಂಬೈ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್(Lawrence Bishnoi Gang)ನಿಂದ ಜೀವ ಬೆದರಿಕೆ(Death threat) ಬಂದ ಎರಡು ದಿನಗಳ ನಂತರ, ನಟ ಸಲ್ಮಾನ್ ಖಾನ್(Salman Khan) ಅವರಿಗೆ ನವೆಂಬರ್ 7 ರ ಗುರುವಾರ ಮತ್ತೊಂದು ಬೆದರಿಕೆ ಸಂದೇಶ ಬಂದಿದೆ. ಮುಂಬೈನ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕಳೆದ ರಾತ್ರಿ ಮುಂಬೈ ಟ್ರಾಫಿಕ್ ಕಂಟ್ರೋಲ್ ರೂಮ್ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಸಂದೇಶ ಬಂದಿದೆ. ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ. ಹೊಸ ಬೆದರಿಕೆಯ ವಿವರಗಳು ಇನ್ನೂ ಖಚಿತವಾಗಿಲ್ಲ.
ಬಾಬಾ ಸಿದ್ದಿಕಿ ಹತ್ಯೆಯ ನಂತರ ಸಲ್ಮಾನ್ಗೆ ಕೊಲೆ ಬೆದರಿಕೆ ಕರೆಗಳು ಮತ್ತೆ ಮತ್ತೆ ಬರುತ್ತಿವೆ. ಈ ಮೊದಲು ವ್ಯಕ್ತಿಯೊಬ್ಬ ತಾನು ಲಾರೆನ್ಸ್ ಬಿಷ್ಣೋಯ್ ಎಂದು ಬೆದರಿಕೆ ಹಾಕಿ ಐದು ಕೋಟಿ ಬೇಡಿಕೆ ಇಟ್ಟಿದ್ದ. ಬೆದರಿಕೆ ಹಾಕಿದವನ್ನು ಬಂಧಿಸಿ ತನಿಖೆ ನಡೆಸಿದ್ದಾರೆ. ತನಿಖೆಯಲ್ಲಿ ಆತ ಮುಂಬೈನಲ್ಲಿ ಟ್ಯಾಟೂ ಹಾಕುತ್ತಿದ್ದ ಎಂದು ತಿಳಿದು ಬಂದಿದೆ. ಅದಾದ ಕೆಲ ದಿನಗಳ ನಂತರ ಮತ್ತೊಬ್ಬ ವ್ಯಕ್ತಿ ಸಲ್ಮಾನ್ ಖಾನ್ ಕೊಲ್ಲುವುದಾಗಿ ಹೇಳಿ ಎರಡು ಕೋಟಿ ಬೇಡಿಕೆ ಇಟ್ಟಿದ್ದ. ಬೆದರಿಕೆ ಹಾಕಿದವನು ಜಾರ್ಖಂಡ್ನ ವ್ಯಕ್ತಿ ಎಂದು ತಿಳಿದು ಬಂದಿದೆ. ಜೆಮ್ಶೆಡ್ಪುರದಲ್ಲಿ ತರಕಾರಿ ಮಾರಾಟಮಾಡುತ್ತಿದ್ದ ಎಂದು ಗೊತ್ತಾಗಿದೆ. ಮುಂಬೈ ಪೊಲೀಸರು ಜೆಮ್ಶೆಡ್ಪುರದ ಪೊಲೀಸರ ಸಹಾಯದಿಂದ ಆತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಈ ಹಿಂದೆ ನವೆಂಬರ್ 5 ರಂದು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ನ ಸಹೋದರ ಎಂದು ಹೇಳಿಕೊಂಡು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಹಾಕಿದ್ದ ಕಿಡಿಗೇಡಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರೋಪಿ ವಿಕ್ರಮ್(32)ನನ್ನು ಕರ್ನಾಟಕದಲ್ಲಿ ಅರೆಸ್ಟ್ ಮಾಡಲಾಗಿತ್ತು.
ಲಾರೆನ್ಸ್ ಬಿಷ್ಣೋಯ್ ಸಹೋದರ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಐದು ಕೋಟಿ ಬೇಡಿಕೆ ಹಾಗೂ ದೇವಸ್ಥಾನಕ್ಕೆ ಬಂದು ಸಲ್ಮಾನ್ ಕ್ಷಮೆ ಕೇಳಬೇಕೆಂದು ಮುಂಬೈನ ಸಂಚಾರ ನಿಯಂತ್ರಣ ಕೊಠಡಿಗೆ ಸಂದೇಶ ಕಳುಹಿಸಿದ್ದ. ಸಲ್ಮಾನ್ ಜೀವಂತವಾಗಿರಬೇಕೆಂದರೆ ಆತ ನಮಗೆ ಐದು ಕೋಟಿ ನೀಡಬೇಕು ಹಾಗೂ ದೇವಸ್ಥಾನಕ್ಕೆ ಬಂದು ನಮ್ಮ ಸಮಾಜದವರೊಂದಿಗೆ ಕ್ಷಮೆ ಕೇಳಬೇಕು. ಅವನು ಹಾಗೆ ಮಾಡದೆ ಇದ್ದಲ್ಲಿ ಅವನನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದ.
ಈ ಸುದ್ದಿಯನ್ನೂ ಓದಿ: ಸುಶಾಂತ್ ಸಿಂಗ್ ರಾಜಪೂತ್ರದ್ದು ಆತ್ಮಹತ್ಯೆಯಲ್ಲ, ಕೊಲೆ; ಮರಣೋತ್ತರ ಪರೀಕ್ಷಾ ವರದಿ ತಿರುಚಲಾಗಿದೆ: ಸಲ್ಮಾನ್ ಖಾನ್ ಮಾಜಿ ಗೆಳತಿ