ಕಾನ್ಪುರ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕರೊಬ್ಬರ ಆಪ್ತ ಸಹಾಯಕನ ಅಶ್ಲೀಲ ವಿಡಿಯೋವೊಂದು (Obscene Video) ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. ವಿಡಿಯೋದಲ್ಲಿರುವ ವ್ಯಕ್ತಿಯ ಇನ್‌ಸ್ಟಾಗ್ರಾಂ ಖಾತೆಯ ಮೂಲಕವೇ ಅಶ್ಲೀಲ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ವೈರಲ್ ಆದ ವಿಡಿಯೋದಲ್ಲಿರುವ ವ್ಯಕ್ತಿಯನ್ನು ಕುಲದೀಪ್ ಸಿಂಗ್ ಭದೌರಿಯಾ ಎಂದು ಗುರುತಿಸಲಾಗಿದ್ದು, ಈತ ಬಿಜೆಪಿಯ ಶಾಸಕರ ಆಪ್ತ ಎಂದು ಹೇಳಲಾಗುತ್ತಿದೆ. ಆತ ಕೇಂದ್ರ ಸಚಿವರು ಮತ್ತು ಶಾಸಕರು ಸೇರಿದಂತೆ ಬಿಜೆಪಿ ನಾಯಕರ ಜೊತೆಗೆ ಇರುವ ಫೋಟೋಗಳನ್ನು ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದ.
कानपुर में उपचुनावों से पहले एक और बीजेपी नेता का अश्लील विडिओ वायरल हो रहा है, कहा जा रहा इसे खुद भदौरिया ने अपने सोसल मिडिया हैंडल पर डाला था.!! #kanpur #kuldeepbhadauriya #obsensevideo pic.twitter.com/BJwsXMMcXL
— Jr.Gaurav Kushwaha (@Newscopgaurav) November 9, 2024
ವಿಡಿಯೋ ವೈರಲ್ ಆದ ತಕ್ಷಣ ಬರ್ರಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿಯು ಮದ್ಯದ ಅಮಲಿನಲ್ಲಿ ಯುವತಿಯೊಂದಿಗೆ ಇರುವ ಅಶ್ಲೀಲ ವಿಡಿಯೋವನ್ನು ಶೇರ್ ಮಾಡಿರಬಹುದು ಎಂದು ಊಹೆ ಮಾಡಲಾಗಿದೆ. ಕಾನ್ಪುರದ ಬರ್ರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಭದೌರಿಯಾ ಮೂಲದ ಮಹಿಳೆಯೊಂದಿಗೆ ತನ್ನ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾನೆ ಮತ್ತು ನಂತರ ಅದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾನೆ.
ಪೊಲೀಸರು ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆ ಮಾಡುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ, ಆರೋಪಿಗಳ ವಿರುದ್ಧ ಔಪಚಾರಿಕ ದೂರು ನೀಡಿದರೆ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಹಲವು ಪ್ರಶ್ನೆಗಳು ಎದ್ದಿವೆ. ವೀಡಿಯೊವನ್ನು ಯಾವಾಗ ರೆಕಾರ್ಡ್ ಮಾಡಲಾಗಿದೆ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿಯಿಲ್ಲ ಮತ್ತು ಭಾಗಿಯಾಗಿರುವ ಮಹಿಳೆಯ ಗುರುತು ಬಹಿರಂಗಗೊಂಡಿಲ್ಲ.
ಇದನ್ನೂ ಓದಿ: Physical Abuse: ಶಿಕ್ಷಕಿಯ ಅಶ್ಲೀಲ ವಿಡಿಯೋ ವೈರಲ್ ಮಾಡಿದ ದುರುಳ ವಿದ್ಯಾರ್ಥಿಗಳ ಬಂಧನ
ಮಹಿಳೆಯ ಅಶ್ಲೀಲ ವಿಡಿಯೋ ಶೇರ್ ಮಾಡಿದ್ದವರ ಬಂಧನ
ತಮಿಳುನಾಡಿನ ಮಧುರೈನಲ್ಲಿ ಮಹಿಳೆಯೊಬ್ಬರ ಅಶ್ಲೀಲ ವಿಡಿಯೋ ತುಣುಕನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಇಬ್ಬರನ್ನು ತೆಂಕಶಿ ಜಿಲ್ಲಾ ಸೈಬರ್ ಕ್ರೈಂ ಪೊಲೀಸರು ಗುರುವಾರ ಬಂಧಿಸಿದ್ದಾರೆ. ವೀಡಿಯೋವನ್ನು ಚಿತ್ರೀಕರಿಸಿದ ಐಂಥಂಕಟ್ಟಲೈ ಮೂಲದ ಎ ಜಯರಾಜ್ (33) ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆಲಂಕುಲಂನ ಎ ಶಕ್ತಿ ಅರುಲ್‌ನನ್ನು (28) ಬಂಧನ ಮಾಡಲಾಗಿದೆ. ಸಂತ್ರಸ್ತ ಮಹಿಳೆ ಪೊಲೀಸ್ ಅಧೀಕ್ಷಕ ವಿಆರ್ ಶ್ರೀನಿವಾಸನ್ ಅವರನ್ನು ಸಂಪರ್ಕಿಸಿ , ಸಾಮಾಜಿಕ ಮಾಧ್ಯಮದಲ್ಲಿ ತನ್ನ ವೀಡಿಯೊವನ್ನು ಪೋಸ್ಟ್ ಮಾಡಿದ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿದ್ದರು.