Thursday, 21st November 2024

Parashurama Theme Park: ಪರಶುರಾಮ ಮೂರ್ತಿಯ ಶಿಲ್ಪಿ ಕೃಷ್ಣ ನಾಯ್ಕ ಕೇರಳದಲ್ಲಿ ಅರೆಸ್ಟ್

Parashurama Theme Park

ಕಾರ್ಕಳ: ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ (Parashurama Theme Park) ಪರಶುರಾಮನ ನಕಲಿ ಮೂರ್ತಿ ನಿರ್ಮಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ ಅವರನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ ಕೋರ್ಟ್‌ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಜಾಮೀನು ತಿರಸ್ಕರಿಸಿತ್ತು. ಹೀಗಾಗಿ ಕೃಷ್ಣ ನಾಯ್ಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜಾಮೀನು ತಿರಸ್ಕಾರಗೊಂಡಿದ್ದರಿಂದ ಶಿಲ್ಪಿ ಕೃಷ್ಣ ನಾಯ್ಕ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಕೇರಳದ ಕ್ಯಾಲಿಕಟ್‌ನಲ್ಲಿ ತಲೆಮರೆಸಿಕೊಂಡಿದ್ದ ಅವರನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೃಷ್ಣ ನಾಯ್ಕ್ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದರು. ಅನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ಆರೋಪಿಸಿ ನಲ್ಲೂರಿನ ಕೃಷ್ಣ ಶೆಟ್ಟಿ ಎಂಬುವವರು ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸುದ್ದಿಯನ್ನೂ ಓದಿ | Terror Attack: ಜಮ್ಮು & ಕಾಶ್ಮೀರದಲ್ಲಿ ಎನ್‌ಕೌಂಟರ್‌; ಸೇನಾಧಿಕಾರಿ ಹುತಾತ್ಮ

ಸಚಿವ ಜಮೀರ್ ಅಹ್ಮದ್‌ಗೆ ಕಾನೂನು ಸಂಕಷ್ಟ; ಕ್ರಮ ಕೈಗೊಳ್ಳಲು ಗವರ್ನರ್‌ ಸೂಚನೆ

Zameer Ahmed

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಕೋರ್ಟ್‌ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ, ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಸಚಿವ ಜಮೀರ್ ಅಹ್ಮದ್ ಖಾನ್‌ (Zameer Ahmed ) ಅವರಿಗೆ ಸಂಕಷ್ಟ ಎದುರಾಗಿದೆ. ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚಿಸಿದ್ದಾರೆ.

ಮುಡಾ ಹಗರಣ ಸಂಬಂಧ ನ್ಯಾಯಾಲಯದ ಆದೇಶದ ಬಗ್ಗೆ ಸಚಿವ ಜಮೀರ್ ಅಹ್ಮದ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಹೀಗಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ರಾಜ್ಯ ಅಡ್ವೋಕೇಟ್ ಜನರಲ್ ಅವರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್ ಆದೇಶ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ್ದ ಜಮೀರ್ ಅಹ್ಮದ್ ಅವರು, ಇದು ರಾಜಕೀಯ ಪ್ರೇರಿತ ತೀರ್ಪು ಎಂದು ಹೇಳಿದ್ದರು. ಹೀಗಾಗಿ ಅವರ ವಿರುದ್ಧ ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿತ್ತು.

ಸಿಎಂ ಸಿದ್ದರಾಮಯ್ಯ ಅವರನ್ನು ಸಮರ್ಥಿಸಿಕೊಳ್ಳುವ ಬರದಲ್ಲಿ ನ್ಯಾಯಾಲಯದ ಆದೇಶದ ಬಗ್ಗೆ ಲಘುವಾಗಿ ಮಾತನಾಡಿದ್ದ ಸಚಿವ ಜಮೀರ್ ಅಹ್ಮದ್ ಅವರ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ, ಹೈಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಚಿವ ಜಮೀರ್ ಅಹ್ಮದ್ ಅವರು, ಇದು ರಾಜಕೀಯ ಪ್ರೇರಿತ ಕೋರ್ಟ್ ತೀರ್ಪು, ರಾಜಕೀಯ ಆದೇಶ ಎಂದು ಲಘುವಾಗಿ ಮಾತನಾಡಿದ್ದರು. ಹೀಗಾಗಿ ಅವರಿಗೆ ಸಂಕಷ್ಟ ಎದುರಾಗಿದೆ.