Thursday, 21st November 2024

Karnataka Weather: ಇಂದು ಬೆಂಗಳೂರು, ಮಂಡ್ಯ ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

Karnataka weather

ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದ ವಿವಿಧೆಡೆ ಭರ್ಜರಿ ಮಳೆಯಾಗುವ (Karnataka Weather) ನಿರೀಕ್ಷೆ ಇದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ನವೆಂಬರ್ 14 ರಂದು ಭಾರಿ ಮಳೆಯಾಗುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಈ ಬಗ್ಗೆ ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನ.12ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ತಿಳಿಸಿದೆ.

ಇನ್ನು ನ.13ರಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಧಾರವಾಡದ ಒಂಡೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳಗಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ನ.14ರಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಅದೇ ರೀತಿ ನ.15ರಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಅನೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ನ.16ರಂದು ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮತ್ತು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರದ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಒಣ ಹವಾಮಾನದ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Health Tips: ಊಟ ಮಾಡಿದ ನಂತರ ಏನು ಮಾಡಬೇಕು? ಏನು ಮಾಡಬಾರದು?

ನ.13ರ ಬೆಳಗ್ಗೆವರೆಗಿನ ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 20° C ಆಗಿರಬಹುದು.